ದೆಹಲಿಯಲ್ಲಿ ಪಾಳೆಯಗಾರ, ಕರ್ನಾಟಕದಲ್ಲಿ ಮಾಂಡಲಿಕ: ಮೋದಿ, BSY ವಿರುದ್ಧ ಕಿಡಿಕಾರಿದ ಸಿದ್ದು
Team Udayavani, Apr 10, 2021, 12:11 PM IST
ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ನಗರಗಳಲ್ಲಿ ರಾತ್ರಿ ಕರ್ಪ್ಯೂಹೇರಲು ಕೈಗೊಂಡಿರುವ ಕ್ರಮ, ಕೋವಿಡ್ ಓಡಿಸಲು ತಟ್ಟೆ ಬಡಿಯಲು ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದ ಕರೆಯಷ್ಟೇ ಬಾಲಿಷ ಕ್ರಮ. ದೆಹಲಿಯಲ್ಲೊಬ್ಬರು ಪಾಳೆಯಗಾರ, ಕರ್ನಾಟಕದಲ್ಲೊಬ್ಬರು ಮಾಂಡಲಿಕ, ಭಲೇ ಜೋಡಿ ಎಂದು ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ರಾತ್ರಿ ತೆರೆದಿರುವ ಹೊಟೇಲ್, ಚಿತ್ರಮಂದಿರ ಮತ್ತು ಅಂಗಡಿಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ? ಕೋವಿಡ್ ನಿಯಂತ್ರಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂವಿನ ನಾಟಕ ಯಾಕೆ? ಎಂದು ಪ್ರಶ್ನಿಸಿದ ಅವರು, ಕೋವಿಡ್ ನಿಯಂತ್ರಿಸುವ ಪ್ರಾಮಾಣಿಕ ಇಚ್ಚೆ ಮುಖ್ಯಮಂತ್ರಿಗಳು ಹೊಂದಿದ್ದರೆ, ಮೊದಲು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮಕೈಗೊಳ್ಳಬೇಕು, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು ಸೋಂಕಿತರಿಗೆ ತಕ್ಷಣ ಚಿಕಿತ್ಸೆ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಪಶ್ಚಿಮಬಂಗಾಳ: ಮತಗಟ್ಟೆ ಬಳಿ ಮತದಾರನಿಗೆ ಗುಂಡಿಕ್ಕಿ ಹತ್ಯೆ, ಬಿಜೆಪಿ-ಟಿಎಂಸಿ ಘರ್ಷಣೆ
ಕೋವಿಡ್ ವ್ಯಾಕ್ಸಿನ್ ಪ್ರಾರಂಭಿಸಿ 80 ದಿನಗಳು ಕಳೆದರೂ ಕೇವಲ ಶೇಕಡಾ ಒಂದರಷ್ಟು ಜನಸಂಖ್ಯೆಗೆ ಮಾತ್ರ ನೀಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಈಗಾಗಲೇ ವ್ಯಾಕ್ಸಿನ್ ಕೊರತೆಯ ದೂರು ಕೇಳಿಬರತೊಡಗಿದೆ. ಗಿಮಿಕ್‌ಗಳನ್ನು ಬಿಟ್ಟು ಈ ಕಡೆ ಗಮನಹರಿಸಿ.
ದೇಶದ ಪ್ರಧಾನಿಯ ಅಂಧಾ ದರ್ಬಾರ್‌ನಿಂದ ರಾಜ್ಯದ ಮುಖ್ಯಮಂತ್ರಿಗಳು ಸ್ಪೂರ್ತಿ ಪಡೆದರೆ, ಮುಖ್ಯಮಂತ್ರಿಗಳಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೋವಿಡ್ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳೇ, ನೀವು ಸ್ವಲ್ಪ ಬುದ್ದಿ ಕಲಿಯಿರಿ, ಅವರಿಗೂ ಸ್ವಲ್ಪ ಬುದ್ದಿ ಹೇಳಿ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಆರ್ ಎಸ್ ಎಸ್ ವರಿಷ್ಠ ಮೋಹನ್ ಭಾಗವತ್ ಗೆ ಕೋವಿಡ್ ದೃಢ, ಆಸ್ಪತ್ರೆಗೆ ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.