Second PU ಮೌಲ್ಯಮಾಪನಕ್ಕೆ ವಿರೋಧ
ಪರೀಕ್ಷೆ ಮುಗಿದ ಮರುದಿನವೇ ಮೌಲ್ಯಮಾಪನಕ್ಕೆ ವರದಿ ಮಾಡಿಕೊಳ್ಳಲು ಸೂಚನೆ
Team Udayavani, Mar 19, 2024, 7:20 AM IST
ಬೆಂಗಳೂರು: ಮಾರ್ಚ್ 22ರಂದು ದ್ವಿತೀಯ ಪಿಯು ಪರೀಕ್ಷೆ ಮುಕ್ತಾಯಗೊಳ್ಳಲಿದ್ದು, ಮಾರ್ಚ್ 23ರಂದೇ ಮೌಲ್ಯಮಾಪನ ಆರಂಭ ಗೊಳ್ಳುತ್ತಿರುವುದಕ್ಕೆ ಉಪನ್ಯಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮೌಲ್ಯಮಾಪನ ಬಹಿ ಷ್ಕರಿಸಬೇಕೆಂಬ ತೀರ್ಮಾನದಿಂದ ರಾಜ್ಯ ಪ.ಪೂ. ಕಾಲೇಜುಗಳ ಉಪನ್ಯಾ ಸಕರ ಸಂಘ ಹಿಂದೆ ಸರಿದಿದೆ.
ರಾಜ್ಯದಲ್ಲಿ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸುಮಾರು 6.98 ಲಕ್ಷ ಮಂದಿ ನೋಂದಾಯಿಸಿಕೊಂಡಿದ್ದು, 36 ಲಕ್ಷ ಪತ್ರಿಕೆಗಳ ಮೌಲ್ಯಮಾಪನ ನಡೆಯಬೇಕಿದೆ. ವಾರ್ಷಿಕ ಪರೀಕ್ಷೆ-1 ಪೂರ್ಣಗೊಳಿಸಿ ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ನಡೆಸಿ ವಾರ್ಷಿಕ ಪರೀಕ್ಷೆ-2ಕ್ಕೆ ತಯಾರಿ ನಡೆಸುವುದು ಮತ್ತು ಚುನಾವಣ ಪ್ರಕ್ರಿಯೆಯಲ್ಲಿ ಉಪನ್ಯಾಸಕರು ಪಾಲ್ಗೊಳ್ಳುವುದರಿಂದ ಚುನಾವಣ ಕೆಲಸಗಳು ಆರಂಭಗೊಳ್ಳುವ ಮುಂಚಿತವಾಗಿ ಮೌಲ್ಯಮಾಪನ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂಬುದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ)ಯ ಆಶಯ. ಅದ ರಂತೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ಮತ್ತು ಐಚ್ಛಿಕ ಕನ್ನಡ ವಿಷಯಗಳ ಮೌಲ್ಯಮಾಪನಕ್ಕೆ ಉಪ ಮುಖ್ಯ ಮೌಲ್ಯಮಾಪಕರು ಮಾ. 23ರಂದು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ಕೆಎಸ್‌ಇಎಬಿ ಸೂಚಿಸಿದೆ.
ಬಹುತೇಕ ಶಿಕ್ಷಕರು ತಮ್ಮ ವಾಸಸ್ಥಾನದಿಂದ ದೂರದ ಪರೀಕ್ಷಾ ಕೇಂದ್ರಗಳಲ್ಲಿ ಮೇಲ್ವಿಚಾರಣೆ ಸಹಿತ ಇತರ ಪರೀಕ್ಷಾ ಕೆಲಸಗಳನ್ನು ನಿರ್ವ ಹಿಸುತ್ತಿದ್ದಾರೆ. ಅದರ ಮರು ದಿನವೇ ಮತ್ತೆ 200-300 ಕಿಮೀ ದೂರದಲ್ಲಿನ ಮೌಲ್ಯಮಾಪನ ಕೇಂದ್ರಕ್ಕೆ ಹೋಗಿ ಮೌಲ್ಯಮಾಪನ ಚಟುವಟಿಕೆ ನಡೆಸು ವುದು ಕಷ್ಟ ಎಂದು ಉಪ ನ್ಯಾಸಕರು ಹೇಳುತ್ತಿದ್ದಾರೆ. ಅದರಲ್ಲೂ ಈ ಬಾರಿ ನೆರೆಯ ಜಿಲ್ಲೆಯ ಮೌಲ್ಯಮಾಪನ ಕೇಂದ್ರಗಳನ್ನು ಹೊರತುಪಡಿಸಿ ದೂರದ ಕೇಂದ್ರಗಳಿಗೆ ನಿಯೋಜಿಸ ಲಾಗಿದೆ. ಇದರಿಂದ ಉಪನ್ಯಾಸಕರಿಗೆ ಮೊದಲ ದಿನದ ಮೌಲ್ಯಮಾಪನ ಚಟುವಟಿಕೆಗೆ ಹಾಜ ರಾಗಲು ಕಷ್ಟವಾಗಲಿದೆ ಎಂದು ಉಪನ್ಯಾಸಕರು ನೋವು ತೋಡಿಕೊಂಡಿದ್ದಾರೆ. ಮಾ.25ರಂದು ಮೌಲ್ಯಮಾಪನ ಆರಂಭಿಸಿದರೆ ಅನುಕೂಲ ಎನ್ನುತ್ತಿದ್ದಾರೆ ಉಪನ್ಯಾಸಕರು.
ಎಪ್ರಿಲ್ 2ನೇ ವಾರ ದ್ವಿತೀಯ ಪಿಯು ಫಲಿತಾಂಶ?
ಕೆಎಸ್‌ಇಎಬಿಯ ಎಪ್ರಿಲ್ 8ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವ ಗುರಿ ಇಟ್ಟುಕೊಂಡಿದೆ. ಹಾಗೆಯೇ ಎಪ್ರಿಲ್ 24ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಅನ್ನು ಪ್ರಾರಂಭಿಸುವ ಕರಡು ವೇಳಾಪಟ್ಟಿ ಸಿದ್ಧವಾಗಿತ್ತು. ಆದರೆ ಎಪ್ರಿಲ್ 26ಕ್ಕೆ ರಾಜ್ಯದಲ್ಲಿ ಮೊದಲ ಸುತ್ತಿನ ಚುನಾವಣೆ ನಡೆಯಲಿರುವುದರಿಂದ ಕರಡು ವೇಳಾಪಟ್ಟಿ ಬದಲಾವಣೆ ಅನಿವಾರ್ಯತೆಯಿದೆ. ವಾರ್ಷಿಕ ಪರೀಕ್ಷೆ-2 ಪ್ರಾರಂಭದ ದಿನಾಂಕ ಮುಂದೂಡುವ ಸಾಧ್ಯತೆಯಿರುವುದರಿಂದ ಮೌಲ್ಯಮಾಪನವನ್ನು ಸ್ವಲ್ಪ ತಡ ಮಾಡಿ, ಫಲಿತಾಂಶದ ದಿನವನ್ನು ಸ್ವಲ್ಪ ಮುಂದೂಡುವ ಬಗ್ಗೆಯೂ ಚರ್ಚೆ ನಡೆದಿದೆ.
ಬಹಿಷ್ಕಾರ ಕೈಬಿಟ್ಟ ಉಪನ್ಯಾಸಕರ ಸಂಘ
ದ್ವಿತೀಯ ಪಿಯುಸಿಯ ಅಂತಿಮ ಪರೀಕ್ಷೆಯನ್ನು ಕೆಎಸ್‌ಇಎಬಿಯಿಂದ ಹಿಂದೆಗೆದುಕೊಂಡು ಪದವಿಪೂರ್ವ ಶಿಕ್ಷಣ ಇಲಾಖೆಗೆ ನೀಡಬೇಕು. ಪಪೂ ಕಾಲೇಜಿನ ಉಪ ನಿರ್ದೇಶಕರ ಜವಾಬ್ದಾರಿಯನ್ನು ಜಿಪಂ ಸಿಇಒಗಳಿಂದ ಹಿಂಪಡೆದುಕೊಳ್ಳಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಉಪನ್ಯಾಸಕರ ಸಂಘ ಚಿಂತನೆ ನಡೆಸಿತ್ತು. ಈಗ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಮೌಲ್ಯಮಾಪನ ಬಹಿಷ್ಕಾರದ ತೀರ್ಮಾನದಿಂದ ಹಿಂದೆ ಸರಿಯಲು ಸಂಘ ನಿರ್ಧರಿಸಿದೆ.
ಮಾ.23ರಂದು ಮೊದಲ ಹಂತ ಮತ್ತು ಮಾ. 25ರಂದು ಎರಡನೇ ಹಂತದ ಮೌಲ್ಯಮಾಪನ ಆರಂಭಗೊಳ್ಳಲಿದೆ. ಪರೀಕ್ಷಾ ಕೇಂದ್ರ ಮತ್ತು ಮೌಲ್ಯಮಾಪಕರ ಸಂಖ್ಯೆ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಆದಷ್ಟು ತ್ವರಿತವಾಗಿ ಫಲಿತಾಂಶ ನೀಡುವುದು ನಮ್ಮ ಉದ್ದೇಶ.
-ಎಚ್.ಎನ್.ಗೋಪಾಲಕೃಷ್ಣ, ನಿರ್ದೇಶಕ, ಕೆಎಸ್‌ಇಎಬಿ
-ಎನ್.ಎಸ್.ರಾಕೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.