ಪ್ರತ್ಯೇಕ ಧರ್ಮಕ್ಕೆ ಹಿರಿಯ ಸಚಿವರಿಂದಲೂ ವಿರೋಧ
Team Udayavani, Mar 10, 2018, 8:15 AM IST
ಬೆಂಗಳೂರು: ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತರ ಮಾನ್ಯತೆ ನೀಡುವ ಕುರಿತು ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದಿಗಟಛಿತೆಗೆ ಸಿಲುಕಿಕೊಂಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇವಲ ಲಿಂಗಾಯತ ಸಚಿವರಷ್ಟೇ ಅಲ್ಲದೇ ಬೇರೆ ಸಮುದಾಯದ ಹಿರಿಯ ಸಚಿವರೂ ಸರ್ಕಾರದ ನಡೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ.
ವೀರಶೈವ- ಲಿಂಗಾಯತ ಸಮುದಾಯಕ್ಕೆ ಜಾತಿ ಆಧಾರದಲ್ಲಿ ರಾಜ್ಯ ಸರ್ಕಾರವೇ ಅಲ್ಪ ಸಂಖ್ಯಾತ ಆಯೋಗದ ಮೂಲಕ ಅಲ್ಪ
ಸಂಖ್ಯಾತರ ಮಾನ್ಯತೆ ನೀಡಲು ಅವಕಾಶವಿದೆ. ಅದರಂತೆ ರಾಜ್ಯ ಸರ್ಕಾರ ಮೊದಲು ಅಲ್ಪ ಸಂಖ್ಯಾತರ ಮಾನ್ಯತೆ ನೀಡಿ, ನಂತರ ಕೇಂದ್ರ ಸರ್ಕಾರಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆಗೆ ಶಿಫಾರಸು ಮಾಡಬೇಕೆಂದು ಪೌರಾಡಳಿತ ಸಚಿವ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ
ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಬಹು ಸಂಖ್ಯಾತರಾಗಿರುವ ಹಾಗೂ ಆರ್ಥಿಕವಾಗಿ ಸಬಲರಾಗಿರುವ ಲಿಂಗಾಯತರಿಗೆ ಅಲ್ಪ
ಸಂಖ್ಯಾತರ ಮಾನ್ಯತೆ ನೀಡುವುದರಿಂದ ಈಗಿರುವ ಅಲ್ಪ ಸಂಖ್ಯಾತ ಸಮುದಾಯಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ಈ ಪ್ರಯತ್ನ ಬೇಕಿರಲಿಲ್ಲ ಎಂದು ಹಿರಿಯ ಸಚಿವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತರ ಮಾನ್ಯತೆ ನೀಡುವುದರಿಂದ ಕಾಂಗ್ರೆಸ್ ನೆಚ್ಚಿಕೊಂಡಿರುವ ಮುಸ್ಲಿಂ ಸಮುದಾಯದ ವಿರೋಧ
ಕಟ್ಟಿಕೊಳ್ಳಬೇಕಾಗುತ್ತದೆ ಎಂಬ ಸೂಕ್ಷ್ಮವನ್ನು ಕೆಲವು ಸಚಿವರು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.
ಮೊದಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಎಂ.ಬಿ. ಪಾಟೀಲ್ ಸೇರಿ ಕೆಲವು ಲಿಂಗಾಯತ ಸಚಿವರು ಪಟ್ಟು ಹಿಡಿದಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ಸಂದರ್ಭದಲ್ಲಿಯೇ ಅಡ್ವೊಕೇಟ್ ಜನರಲ್ ಅವರನ್ನೂ ಸಭೆಗೆ ಕರೆಯಿಸಿ, ಮಾಹಿತಿ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಬಹು ಸಂಖ್ಯಾತರಾಗಿರುವ ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತ ಮಾನ್ಯತೆ ನೀಡುವುದು ಕಷ್ಟ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ವಿಷಯವನ್ನು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.