ಕನ್ನಡದಲ್ಲಿಯೇ ಕಡತ ಮಂಡನೆಗೆ ಆದೇಶ
Team Udayavani, Nov 23, 2019, 3:00 AM IST
ಬೆಂಗಳೂರು: ಆಡಳಿತದಲ್ಲಿ ಕನ್ನಡವನ್ನು ಪರಿಣಾಮಕಾರಿ ಯಾಗಿ ಜಾರಿಗೊಳಿಸಲು ಎಲ್ಲ ಹಂತದಲ್ಲಿಯೂ ಅಧಿಕಾರಿಗಳು ಕಡತ ಹಾಗೂ ಟಿಪ್ಪಣಿಗಳನ್ನು ಕನ್ನಡದಲ್ಲಿಯೇ ಮಂಡಿಸುವಂತೆ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ತನ್ನ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ನಿಗಮ, ಬಿಎಂಆರ್‌ಸಿಎಲ್, ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರ ಭೂ ಸಾರಿಗೆ ನಿರ್ದೇಶನಾಲಯಗಳೂ ಈ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುವುದರಿಂದ ಎಲ್ಲ ಹಂತದ ಅಧಿಕಾರಿಗಳು ಕಡತ ಹಾಗೂ ಟಿಪ್ಪಣಿಗಳನ್ನು ಕನ್ನಡದಲ್ಲಿಯೇ ಮಂಡಿಸುವುದು ಸರ್ಕಾರದ ಭಾಷಾ ನೀತಿಯಾಗಿದೆ. ಒಂದು ವೇಳೆ ಆಂಗ್ಲ ಭಾಷೆಯಲ್ಲಿ ಕಡತ ಮಂಡಿಸುವ ಅಧಿಕಾರಿಗಳಿಗೆ ಕಡತ ಹಿಂದಿರುಗಿಸಿ, ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
MUST WATCH
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.