ನರೇಗಾ ಕಾಮಗಾರಿಗೆ ಆದೇಶ: ಕಚ್ಚಾ ವಸ್ತುಗಳಿಲ್ಲದೆ ಕೆಲಸ ಅಸಾಧ್ಯ
Team Udayavani, Apr 20, 2020, 12:07 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಗ್ರಾಮೀಣ ಭಾಗದಲ್ಲಿ ಜನರು ಹೊರ ಬರದಂತೆ ಕಟ್ಟು ನಿಟ್ಟಿನ ಪಾಲನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಡುವೆ ನರೇಗಾ ಕಾಮಗಾರಿಗೆ ಆದೇಶ ನೀಡಲಾಗಿದ್ದರೂ ವಸ್ತುಗಳಿಲ್ಲದೆ ಕೆಲಸ ಅಸಾಧ್ಯವಾಗಿದೆ! ಕಾಮಗಾರಿಗೆ ಕಾರ್ಯಾದೇಶ ಮಾಡಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಆದರೆ, ವಾಸ್ತವದಲ್ಲಿ ಸ್ಥಳೀಯವಾಗಿ ಜಿಲ್ಲಾಧಿಕಾರಿಗಳು ತಮ್ಮ ಸೂಚನೆಯಿಲ್ಲದೇ ಯಾವುದೇ ಚಟುವಟಿಕೆಗೆ ಅವಕಾಶವಿಲ್ಲ ಎಂದು ಗ್ರಾಪಂಗಳಿಗೆ ಸೂಚಿಸುತ್ತಿದ್ದಾರೆ.
ರಾಜ್ಯ ಸರ್ಕಾರ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕನಿಷ್ಠ 10 ಕೃಷಿ ಹೊಂಡಗಳ ನಿರ್ಮಾಣ, 20 ಎಕರೆಯಲ್ಲಿ ಕ್ಷೇತ್ರ ಬದು ನಿರ್ಮಾಣ ಮಾಡಿ, ಅಲ್ಲಿ ಅರಣ್ಯೀಕರ
ಮಾಡಲು ಗುಂಡಿ ತೋಡುವಂತೆ ಸೂಚಿಸಲಾಗಿದೆ. ಪ್ರತಿ ತಾಲೂಕಿನಲ್ಲಿ 200 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ವಿಸ್ತರಿಸಲು ಗುಂಡಿ ತೋಡಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ದನದ ಕೊಟ್ಟಿಗೆ ನಿರ್ಮಾಣ, ಸರ್ಕಾರಿ ಕಟ್ಟಡ ಗಳ ವ್ಯಾಪ್ತಿಯಲ್ಲಿ ಮಳೆ ನೀರು ಕೊಯ್ಲು ಗುಂಡಿ ತೆರೆಯುವಂತೆ ಆದೇಶ ಹೊರಡಿಸಲಾಗಿದೆ. ಆದರೆ, ಪ್ರಮುಖವಾಗಿ ಈ ಕಾಮಗಾರಿಗಳು ತೋಟಗಾರಿಕೆ, ಕೃಷಿ ಹಾಗೂ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವುದರಿಂದ ಆರಂಭದಿಂದಲೂ ಈ ಇಲಾಖೆಗಳನ್ನು ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಅಗತ್ಯ ಸೇವೆ ಇಲಾಖೆಗಳಿಂದ ಹೊರಗಿಡಲಾಗಿದೆ. ಅಗತ್ಯ ಇಲಾಖೆ ವ್ಯಾಪಿಗೆ ಸೇರಿಸಿದರೂ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಕಾರಿಗಳನ್ನು ಸೇರಿಸಿಕೊಳ್ಳದಂತೆ ಇಲಾಖೆ ುìದರ್ಶಿ ಆದೇಶ ಹೊರಡಿಸಿದ್ದಾರೆ.
ಸರ್ಕಾರ ಸೂಚಿಸಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕಚ್ಚಾ ವಸ್ತುಗಳಾದ ಕಬ್ಬಿಣ, ಸಿಮೆಂಟ್, ಜಲ್ಲಿಕಲ್ಲು ಅಗತ್ಯವಿದೆ. ಆದರೆ, ಲಾಕ್ ನ್ ಹಿನ್ನೆಲೆಯಲ್ಲಿ ಕಚ್ಚಾ ವಸ್ತುಗಳ ಮಾರಾಟದ
ಅಂಗಡಿಗಳನ್ನು ಬಂದ್ ಮಾಡಿರುವುದರಿಂದ ೇ ರೀತಿಯ ಕಚ್ಚಾವಸ್ತುಗಳು ದೊರೆಯುತ್ತಿಲ್ಲ. ಕಾಮಗಾರಿಗೆ ಬೇಕಾದ ಅಗತ್ಯ ಕಚ್ಚಾ ವಸ್ತು ಖರೀದಿಸಲಾಗದ ಸ್ಥಿತಿಯಲ್ಲಿ ಜನರು ಇರುವಾಗ ವೈಯಕ್ತಿಕ ಉದ್ಯೋಗ ಪಡೆಯಲು ಮುಂದೆ ಬರುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಸರ್ಕಾರ ನರೆಗಾ ಕೂಲಿಯ ಸುಮಾರು 700 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದು, ನರೇಗಾ ಕಾರ್ಮಿಕರು ಹಳೇ ಬಾಕಿ ಬಾರದೇ ಸಂಕಷ್ಟದಲ್ಲಿದ್ದಾರೆ. ಅದರ ಮಧ್ಯೆ ಹೊಸ ಕಾಮಗಾರಿಗೆ ಆದೇಶ ನೀಡಿರುವುದು ಗ್ರಾಮೀಣ ಭಾಗದಲ್ಲಿ ಜಾರಿಗೆ ಕಷ್ಟವಾಗಿದ್ದು, ಗ್ರಾಪಂ ಅಧಿಕಾರಿಗಳು ಗೊಂದಲಕ್ಕೆ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ.
● ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.