ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಗಣ್ಯರ ಸಂತಾಪ
Team Udayavani, Sep 13, 2021, 4:32 PM IST
ಬೆಂಗಳೂರು: ಕಳೆದ ಕೆಲವು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ಇಂದು ನಿಧನರಾದರು. ಹಿರಿಯ ರಾಜಕಾರಣಿಯ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ರಾಜ್ಯಸಭಾ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಆಸ್ಕರ್ ಫರ್ನಾಂಡಿಸ್ ರವರು ಇಂದು ನಮ್ಮನ್ನೆಲ್ಲ ಅಗಲಿರುವುದು ನನಗೆ ಬಹಳ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರ ಶಾಂತಿ ಸಿಗಲೆಂದು ಕೋರುತ್ತೇನೆ. ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೆ ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಎಚ್ ಡಿಕೆ ಸಂತಾಪ: ನಮ್ಮ ನಾಡಿನ ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವರು, ನನ್ನ ಆಪ್ತರೂ ಆಗಿದ್ದ ಆಸ್ಕರ್ ಫರ್ನಾಂಡೀಸ್ ಅವರ ನಿಧನ ನನಗೆ ಬಹಳ ನೋವುಂಟು ಮಾಡಿದೆ. ಕೆಲ ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೇನು ಗುಣಮುಖರಾಗಿ ಮನೆಗೆ ಮರಳುತ್ತಾರೆ ಎನ್ನುವ ಹೊತ್ತಿನಲ್ಲಿ ಈ ಆಘಾತದ ಸುದ್ದಿ ಬಂದಿದೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಐದು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿದ್ದರು ಅವರು. ಕೇಂದ್ರ ಸರಕಾರ ಮತ್ತು ರಾಜ್ಯದ ಕೊಂಡಿಯಾಗಿದ್ದರು. ರಾಜ್ಯಕ್ಕಾಗಿ ಅನೇಕ ಕೆಲಸಗಳನ್ನು ಮಾಡಿದ್ದರಲ್ಲದೆ, ಪಕ್ಷ ವಹಿಸಿದ ಎಲ್ಲ ಜವಾಬ್ದಾರಿಗಳನ್ನು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ನಿಭಾಯಿಸಿದ್ದರು. ಪ್ರತಿಯೊಬ್ಬರನ್ನೂ ಅತ್ಯಂತ ಪ್ರೀತಿ, ವಿಶ್ವಾಸದಿಂದ ಕಾಣುತ್ತಿದ್ದ ಆಸ್ಕರ್ ಫರ್ನಾಂಡೀಸ್ ಅವರು, ದೇಶ ರಾಜಕಾರಣದಲ್ಲಿ ಅಜಾತಶತ್ರುವಾಗಿದ್ದರು. ರಾಜಕೀಯವನ್ನು ಮೀರಿ ಎಲ್ಲರನ್ನೂ ಆದರಿಸುತ್ತಿದ್ದರು. ಪಕ್ಷ ರಾಜಕಾರಣಕ್ಕೆ ಮೀರಿದ ವ್ಯಕ್ತಿತ್ವ ಅವರದ್ದು. ಕಾಂಗ್ರೆಸ್ ಕಟ್ಟಾಳುವಾಗಿದ್ದ ಅವರು ಪಕ್ಷವನ್ನು ಮಾತೃಸ್ವರೂಪದಂತೆ ಕಂಡವರು. ನಿಷ್ಠೆ, ನಂಬಿಕೆಯ ಪ್ರತೀಕವಾಗಿದ್ದರು. ಕಾಂಗ್ರೆಸ್ ಸಂಸ್ಕೃತಿಗೆ ಎಲ್ಲೂ ಚ್ಯುತಿ ಬಾರದಂತೆ ನಡೆದುಕೊಂಡರು. ಅವರಿಗೆ ಚಿರಶಾಂತಿ ಸಿಗಲಿ ಮತ್ತು ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಸಂತಾಪ: ಕೇಂದ್ರದ ಮಾಜಿ ಸಚಿವರು, ಕಾಂಗ್ರೆಸ್ ಹಿರಿಯ ನಾಯಕರಾದ ಆಸ್ಕರ್ ಫರ್ನಾಂಡಿಸ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ:ಐದು ಬಾರಿ ಸಂಸದರಾಗಿ ಗೆಲುವು… ಆಸ್ಕರ್ ಕರಾವಳಿ ಪ್ರದೇಶದ ಜನಪ್ರಿಯ ರಾಜಕಾರಣಿಯಾಗಿದ್ರು…
ಆಸ್ಕರ್ ಅವರು ಗಾಂಧಿ ತತ್ವ ಹಾಗೂ ಸರಳತೆಗೆ ಮತ್ತೊಂದು ಹೆಸರಾಗಿದ್ದವರು. ಸಾಮಾನ್ಯ ಕುಟುಂಬದಿಂದ ಬಂದ ಅವರು ಕೇಂದ್ರ ಸಚಿವರಾಗಿ ನಮಗೆ ಉತ್ತಮ ಮಾರ್ಗದರ್ಶನ ನೀಡಿ, ಪಕ್ಷಕ್ಕೆ ಬೆಂಬಲವಾಗಿ ನಿಂತಿದ್ದ ಧೀಮಂತ ನಾಯಕ. ಕಷ್ಟಕಾಲದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸೇವೆ ಮಾಡಿದ್ದಾರೆ, ಪಕ್ಷವನ್ನು ಮುನ್ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
ನಳಿನ್ ಕಟೀಲ್ ಸಂತಾಪ: ಆಸ್ಕರ್ ಫನಾರ್ಂಡಿಸ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜ್ಯಸಭಾ ಸದಸ್ಯರಾಗಿದ್ದ ಅವರು ಕಾಂಗ್ರೆಸ್ ಹಿರಿಯ ಮುಖಂಡರೂ ಆಗಿದ್ದು, ಹಿಂದೆ ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು ಎಂದು ನಳಿನ್‍ಕುಮಾರ್ ಸ್ಮರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.