6 ತಿಂಗಳ ಸಂಭ್ರಮಕ್ಕೆ ಒಗ್ಗಟ್ಟು; ಸರಕಾರಕ್ಕೆ ಅರ್ಧ ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಿಎಂ ಮಾತು


Team Udayavani, Jan 29, 2022, 7:15 AM IST

ನಮ್ಮದು ಬಲಿಷ್ಠ ತಂಡ: ಆಕ್ರಮಣಕಾರಿ ಆಟವಾಡಲು ಸಿದ್ದ: ಬೊಮ್ಮಾಯಿ

ಬೆಂಗಳೂರು: “ನಾವೆಲ್ಲರೂ ಜತೆಯಾಗಿಯೇ ಕೆಲಸ ಮಾಡುತ್ತಿದ್ದೇವೆ… ಅದು ಒಂದು ರೀತಿ ಫ‌ುಟ್ಬಾಲ್‌ ತಂಡದಂತೆ. ಎಲ್ಲರೂ ಸಕ್ರಿಯವಾಗಿದ್ದು, ಚೆಂಡನ್ನು ಪರಸ್ಪರ ಪಾಸ್‌ ಮಾಡುತ್ತಾ ಗೋಲ್‌ ತಲುಪಿಸುವ ಕೆಲಸ ಮಾಡುತ್ತಿದ್ದೇವೆ…’

ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾತುಗಳು. ತಮ್ಮ ನೇತೃತ್ವದ ಸರಕಾರಕ್ಕೆ ಆರು ತಿಂಗಳು ತುಂಬಿದ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ 20 ಸಚಿವರ ಜತೆ ಪಾಲ್ಗೊಂಡಿದ್ದ ಅವರು, ಒಗ್ಗಟ್ಟು ಪ್ರದರ್ಶಿಸುವಲ್ಲಿ ಯಶಸ್ವಿಯಾದರು. ಜತೆಗೆ ಸರಕಾರದ ಸಾಧನೆಯ ಪುಸ್ತಕವನ್ನು ಬಿಡುಗಡೆ ಮಾಡಿ, ರಾಜ್ಯದ ಸಮೃದ್ಧತೆ ಬಗ್ಗೆ ಮಾತನಾಡಿದರು. ವಿಶೇಷವೆಂದರೆ ಎಲ್ಲಿಯೂ ತಮ್ಮ ಭಾಷಣದಲ್ಲಿ ರಾಜಕೀಯ ತರಲಿಲ್ಲ. ಅಷ್ಟೇ ಅಲ್ಲ, ಪ್ರಧಾನಿ ನರೇಂದ್ರ ಮೋದಿ ಅವರಿಂದಾದ ಪ್ರೇರಣೆ ಮತ್ತು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಮಾರ್ಗದರ್ಶನವನ್ನು ಮರೆಯಲಿಲ್ಲ.

ಸವಾಲುಗಳೂ ಇವೆ
ನಮ್ಮ  ಗುರಿ ದೊಡ್ಡದು. ಇದರೊಂದಿಗೆ ಸವಾಲುಗಳೂ ಇವೆ. ಆ  ಸವಾಲುಗಳನ್ನು ಎದುರಿಸುವ ಆತ್ಮಸ್ಥೈರ್ಯವೂ ನಮಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.  ಭವಿಷ್ಯದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಲಾಗಿದೆ. ಪ್ರತಿ ಹೆಜ್ಜೆಯನ್ನೂ ಆತ್ಮವಿಶ್ವಾಸದಿಂದ ಇಟ್ಟು ಜನರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡುವುದಾಗಿ ತಿಳಿಸಿದರು. ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸಮಾಜದಲ್ಲಿ ಸ್ವಾಭಿಮಾನದ ಸ್ಥಾನ ಸಿಗಬೇಕು. ಸಮಾಜದ ಅಭಿವೃದ್ಧಿಯಲ್ಲಿ ಪಾಲು ಸಿಗಬೇಕೆನ್ನುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸವನ್ನು ಮಾಡುವ ಭರವಸೆಯನ್ನು ಕನ್ನಡದ ಮಹಾಜನತೆಗೆ ಈಗಾಗಲೇ ನೀಡಲಾಗಿದೆ. ನಮ್ಮದು ನುಡಿದಂತೆ ನಡೆಯುವ ಸರಕಾರ ಎಂದು ಮುಖ್ಯಮಂತ್ರಿ  ಪುನರುಚ್ಚರಿಸಿದರು.

ಜನಪರ ಕೆಲಸ
ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಪಕ್ಷದ ವರಿಷ್ಠರು, ಶಾಸಕರು, ಕರ್ನಾಟಕದ ಮಹಾಜನತೆಯ ಬಯಕೆಯಂತೆ ರಾಜ್ಯದ ಅಧಿಕಾರ ವಹಿಸಿಕೊಂಡು 6 ತಿಂಗಳು ಕಳೆದಿದೆ. ಈ ಅವಧಿಯಲ್ಲಿ ಹಲವಾರು ಜನಪರವಾದ ಕೆಲಸಗಳನ್ನು ಸರಕಾರ ಮಾಡಿದೆ. ಮುಂಬರುವ ದಿನಗಳಲ್ಲಿ  ಭವ್ಯ ಭವಿಷ್ಯ ಇರುವ ಕರ್ನಾಟಕವನ್ನು ಕಟ್ಟಲು ತೀರ್ಮಾನಿಸಿದ್ದೇವೆ. “ನವ ಭಾರತಕ್ಕಾಗಿ ನವ ಕರ್ನಾಟಕ’ ಎಂಬ ಧ್ಯೇಯವನ್ನಿಟ್ಟುಕೊಂಡು ಸರಕಾರ ಕೆಲಸ ಮಾಡುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ತಮ್ಮ ಮೊದಲನೇ ಬಜೆಟ್‌ ಮಾರ್ಚ್‌ ಮೊದಲನೇ ವಾರದಲ್ಲಿ ಮಂಡನೆಯಾಗಲಿದೆ ಎಂದು ತಿಳಿಸಿದರು.

ಸರಕಾರ  ಆರು ತಿಂಗಳಲ್ಲಿ ಜಾರಿಗೊಳಿಸಿರುವ ಯೋಜನೆಗಳಿಂದ ಭವಿಷ್ಯದಲ್ಲಿ ಆಗುವ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಕುರಿತು ಇನ್‌ಸ್ಟಿಟ್ಯೂಟ್‌ ಆಫ್ ಸೋಶಿಯಲ್‌ ಆ್ಯಂಡ್‌ ಎಕನಾಮಿಕ್‌ ಚೇಂಜಸ್‌ ಸಂಸ್ಥೆ  ಸಮೀಕ್ಷೆ ನಡೆಸಿದ್ದು, ವರದಿಯನ್ನು ಈ ಸಂದರ್ಭದಲ್ಲಿ ಒಪ್ಪಿಸಿತು.

ಟಾಪ್ ನ್ಯೂಸ್

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

arrested

ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ

hk-patil

John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್

Supreme Court: ಆರೋಪಿ, ಅಪರಾಧಿ ಮನೆಯನ್ನು ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

3-belagavi

Belagavi: ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಸ್ಥಾನಕ್ಕೆ ಢವಳೇಶ್ವರ ದಿಢೀರ್ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

hk-patil

John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

arrested

Salman Khan; ಬಾಲಿವುಡ್ ನಟನಿಗೆ ಬೆದರಿಕೆ ಹಾಕಿದ್ದ ಗೀತ ರಚನೆಕಾರ ರಾಯಚೂರಿನಲ್ಲಿ ಬಂಧನ

Loka-raid

Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

1(1

Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

arrested

ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.