ಸರ್ಕಾರದ ನಡೆಗೆ ಖಂಡನೆ: ಕುವೆಂಪು ಪ್ರತಿಷ್ಠಾನಕ್ಕೆ ನಾಡೋಜ ಹಂಪನಾ ರಾಜೀನಾಮೆ
Team Udayavani, May 30, 2022, 2:19 PM IST
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಮತ್ತು ಅವರ ಬರೆದ ನಾಡಗೀತೆಯನ್ನು ಅವಮಾನ ಮಾಡಿದ ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳದ ಸರ್ಕಾರದ ನಡೆಯನ್ನು ಖಂಡಿಸಿ ಖ್ಯಾತ ಸಾಹಿತಿ ನಾಡೋಜ ಹಂಪನಾಗರಾಜಯ್ಯ ಅವರು ಇಂದು ರಾಷ್ಟ್ರಕವಿ ಕುವೆಂಪು ಪತ್ರಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ನಾಡೋಜ ಹಂಪನಾಗರಾಜಯ್ಯ ಅವರು ಅದೇ ಪತ್ರವನ್ನು ಸುದ್ದಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.
ತಮ್ಮ ಅಮೂಲ್ಯ ಕೃತಿಗಳಿಂದ ಹೊಸಗನ್ನಡ ಸಾಹಿತ್ಯ ದ ಎಲ್ಲಾ ಪ್ರಕಾರಗಳನ್ನೂ ಸಪ್ರಾಣಿಸಿ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ ಕರ್ನಾಟಕಕ್ಕೂ ಮಹಾಕವಿ ಕುವೆಂಪುರವರು ಗೌರವ ತಂದರು. ಅವರು ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದ ಮೊದಲಿಗರು. ಇದನ್ನರಿತು ಸರ್ಕಾರ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾವನ ವನ್ನು ಪ್ರಾರಂಭಿಸಿತಲ್ಲದೆ ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿಯನ್ನಿತ್ತು ಗೌರವಿಸಿತು. ಆದರೆ ಇಂದು ಕುವೆಂಪು ರವರನ್ನೂ ಅವರು ಹುಟ್ಟಿದ ಗೌರವಾನ್ವಿತ ದೊಡ್ಡ ಜನಾಂಗವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ ನಮ್ಮ ರಾಷ್ಟ್ರಗೀತೆಯಾದ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮಕೈಗೊಳ್ಳುವ ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ. ಇದು ಅಪಾಯಕಾರಿಯಾದ ಬೆಳವಣಿಗೆ. ಇದರಿಂದ ಪುಣ್ಯಶ್ಲೋಕರ ಮೇಲೆ ಕೆಟ್ಟ ಮಾತುಗಳ ಮಳೆ ಸುರಿಸಿದರೆ ಅಂಥವರಿಗೆ ಸರಕಾರದ ಸಮಿತಿಗಳಲ್ಲಿ ಸದಸ್ಯರಾಗುವ ಸದಾವಕಾಶಗಲಿವೆ ಎಂಬ ತಪ್ಪು ಸಂದೇಶ ರವಾನೆ ಮಾಡಿದಂತಾಗಿದೆ ಎಂದು ಹಂಪನಾಗರಾಜಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.
ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ. ರಾಷ್ಟ್ರಕವಿ ಕುವೆಂಪುರವನ್ನೂ ನಮ್ಮ ಪವಿತ್ರ ನಾಡಗೀತೆಯನ್ನೂ ಅಪಮಾನಿಸುತ್ತಿದ್ದರೂ ನೋಡಿಕೊಂಡು ತೆಪ್ಪಗಿರುವುದು ನನಗೆ ಕಷ್ಟವಾಗಿದೆ. ಸಕಾರ ಸ್ಥಾಪಿಸಿರುವ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೂ ಸದಸ್ಯತ್ವಕ್ಕೂ ನನ್ನ ರಾಜೀನಾಮೆಯನ್ನು ಮಾನ್ಯ ಮುಖ್ಯಮಂತ್ರಿಗಳು ಅಂಗೀಕರೀಸಬೇಕೆಂದು ಹಂಪನಾ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.