ತಿರುಚಿದ ನಾಡಗೀತೆ ಸಾಲು: ರೋಹಿತ್ ಚಕ್ರತೀರ್ಥ ಕ್ಷಮೆಗೆ ಒಕ್ಕಲಿಗರ ಸಂಘ ಆಗ್ರಹ
ಕುವೆಂಪುರವರಿಗೆ ಅವಮಾನ: 2017 ರಲ್ಲಿ ಪೋಸ್ಟ್ ಮಾಡಿದ್ದ ವಿಡಂಬನಾತ್ಮಕ ಸಾಲುಗಳ ವಿರುದ್ಧ ಈಗ ಆಕ್ರೋಶ !
Team Udayavani, May 23, 2022, 9:02 PM IST
ಬೆಂಗಳೂರು: ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥರವರು ಈ ಹಿಂದೆ ತಿರುಚಿದ ನಾಡಗೀತೆಯ ಸಾಲುಗಳನ್ನು ಮೆಚ್ಚಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿರುವುದು ನಾಡಗೀತೆಗೆ ಮಾಡಿರುವ ಅವಮಾನ ಎಂದು ರಾಜ್ಯ ಒಕ್ಕಲಿಗರ ಸಂಘ ಖಂಡನೆ ವ್ಯಕ್ತ ಪಡಿಸಿದೆ.
ಇದು ನಾಡಗೀತೆಗಷ್ಟೇ ಅಲ್ಲದೆ ಇಡೀ ಕನ್ನಡನಾಡಿಗೆ ಮತ್ತು ವಿಶ್ವಮಾನವತೆ ಸಾರಿದ ಕುವೆಂಪುರವರಿಗೆ ಮಾಡಿದ ಅವಮಾನವಾಗಿದ್ದು ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಸಂಘ ಪತ್ರಿಕಾ ಪ್ರಕಟಣೆ ನೀಡಿದೆ.
ರೋಹಿತ್ ಚಕ್ರತೀರ್ಥರವರು ತಮ್ಮ ಈ ಬೇಜವಾಬ್ದಾರಿ ಮತ್ತು ಅಗೌರವಯುತ ನಡವಳಿಕೆಗೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ರಾಜ್ಯ ಒಕ್ಕಲಿಗರ ಸಂಘ ಆಗ್ರಹಿಸಿದೆ.
ಕಿತ್ತು ಹಾಕಿ : ಸಿದ್ದರಾಮಯ್ಯ ಕಿಡಿ
ನಾಡಗೀತೆಯನ್ನು ಅವಹೇಳನ ಮಾಡಿದ, ರಾಷ್ಟ್ರಕವಿಯನ್ನುಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ ಬಿಜೆಪಿ ಸರಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು. ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
2017 ರಲ್ಲಿ ಜೈ ಕಾಂಗ್ರೆಸ್ ಜನನಿಯ ತನುಜಾತೆ ಜಯ ಹೇ ಅರೇಬಿಕ್ ಮಾತೆ..ಎಂದು ವಿಡಂಬನಾತ್ಮಕವಾಗಿ ಬರೆದ ಸಾಲನ್ನು ರೋಹಿತ್ ಚಕ್ರತೀರ್ಥ ಅವರು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದರು.
ಇದನ್ನೂ ಓದಿ : ನಾಗೇಶ್ ಇತಿಹಾಸದ ಕನಿಷ್ಠ ತಿಳುವಳಿಕೆ ಇಲ್ಲದ ಶಿಕ್ಷಣ ಸಚಿವ: ಬಿ.ಕೆ. ಹರಿಪ್ರಸಾದ್ ಕಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.