ರಾಜ್ಯದಲ್ಲಿ 300 ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆ : ಡಾ.ಕೆ.ಸುಧಾಕರ್
Team Udayavani, May 24, 2021, 2:18 PM IST
ಬೆಂಗಳೂರು : ರಾಜ್ಯದಲ್ಲಿ 300 ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಕಂಡುಬಂದಿದ್ದು, ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ವ್ಯವಸ್ಥೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 300 ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಸೋಂಕಿತರು ಇದ್ದಾರೆ ಎಂದು ಪ್ರಾಥಮಿಕ ವರದಿ ಬಂದಿದೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಇದೆ. 17 ಮೆಡಿಕಲ್ ಕಾಲೇಜುಗಳಲ್ಲಿ ಕೂಡ ವ್ಯವಸ್ಥೆ ಇದೆ. ಆದರೆ ಔಷಧಿ ಸ್ವಲ್ಪ ಕೊರತೆ ಇದೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಜೊತೆ ಈ ಬಗ್ಗೆ ಚರ್ಚಿಸಲಾಗಿದೆ ಎಂದರು.
ಇಡೀ ದೇಶದಲ್ಲಿ ವರ್ಷಕ್ಕೆ 100-200 ರಷ್ಟು ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗುತ್ತಿದ್ದರು. ಈಗ ರಾಜ್ಯದಲ್ಲೇ 300 ಕ್ಕೂ ಅಧಿಕ ಸೋಂಕಿತರಿರುವಾಗ ಔಷಧಿ ಕೊರತೆ ಕಂಡುಬರುತ್ತದೆ. ಇದಕ್ಕಾಗಿ ಔಷಧ ಉತ್ಪಾದನೆ ಹೆಚ್ಚಳ ಮಾಡಲಾಗಿದೆ. 1 ಸಾವಿರಕ್ಕೂ ಅಧಿಕ ವೈಲ್ ಗಳನ್ನು ಕಳುಹಿಸಿಕೊಡುವ ನಿರೀಕ್ಷೆಯೂ ಇದೆ. ಬ್ಲ್ಯಾಕ್ ಫಂಗಸ್ ಗೆ 1,150 ವೈಲ್ ಔಷಧಿ ರಾಜ್ಯಕ್ಕೆ ದೊರೆತಿದೆ. 20 ಸಾವಿರ ವೈಲ್ ಗೆ ಬೇಡಿಕೆ ಇಡಲಾಗಿದೆ ಎಂದರು.
ಈ ಸೋಂಕು ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಮಾಡಲು ಸಮಿತಿ ರಚಿಸಿದ್ದು, ಈ ಸಮಿತಿ ವರದಿ ನೀಡಿದೆ. ಸ್ಟೀರಾಯಿಡ್ ಜೊತೆಗೆ ಹ್ಯುಮಿಡಿಫೈರ್ ನಲ್ಲಿ ನಲ್ಲಿ ನೀರು ಬಳಕೆ, ಐಸಿಯು ವೆಂಟಿಲೇಟರ್ ಅನ್ನು ಇನ್ನೊಬ್ಬರಿಗೆ ಬಳಸುವಾಗ, ಒಂದೇ ಮಾಸ್ಕ್ ದೀರ್ಘಕಾಲ ಬಳಕೆ, ಟ್ಯೂಬ್, ಹಾಸಿಗೆ ಮೊದಲಾದ ಮೂಲಗಳಿಂದ ಸೋಂಕು ಬರುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದನ್ನು ತಡಗಟ್ಟುವ ಬಗೆಯನ್ನೂ ಇದರಲ್ಲಿ ತಿಳಿಸಲಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ಕಟ್ಟಡ ನವೀಕರಣ ಕಾಮಗಾರಿ ನಡೆಸಬಾರದು, ಹೊರಗಿನವರು ವಾರ್ಡ್‍ಗೆ ಬರಬಾರದು, ಪ್ರತಿ ಪಾಳಿ ಮುಗಿದ ಮೇಲೆ ಸ್ವಚ್ಛತೆ ಮಾಡಬೇಕು, ಪ್ರತಿ ಉಪಕರಣಗಳನ್ನು ಸ್ವಚ್ಛವಾಗಿಡಬೇಕು ಎಂದು ಸೂಚಿಸಲಾಗಿದೆ ಎಂದರು.
ಕೋವಿಡ್ ನಿಂದ ಗುಣಮುಖರಾದಾಗ ಇಎನ್ ಟಿ ವೈದ್ಯರು ಮತ್ತೆ ತಪಾಸಣೆ ಮಾಡಬೇಕು. 3, 7, 21 ನೇ ದಿನ ತಪಾಸಣೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.
ಆಶಾ ಕಾರ್ಯಕರ್ತರು ಸೇರಿದಂತೆ ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗೆ ವೇತನ ಪಾವತಿಸಲಾಗಿದೆ. ವೇತನ ಹೆಚ್ಚಳಕ್ಕೆ ಸಂಬಂಧಿಸಿದ ವಿಚಾರ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಬೇಕಿದೆ. ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಚರ್ಚಿಸಲಾಗುವುದು. 10 ಲಕ್ಷಕ್ಕೂ ಅದಿಕ ಪಿಪಿಇ ಕಿಟ್ ನಮ್ಮ ಬಳಿ ಇದೆ. ಈ ವಸ್ತುಗಳ ಗುಣಮಟ್ಟದ ಬಗೆಗಿನ ಆರೋಪ ಸುಳ್ಳು ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.