Wrong message ಕೊಡಲು ಬಿಜೆಪಿಯವರಿಂದ ಪಾದಯಾತ್ರೆ : ಗೃಹ ಸಚಿವ ಡಾ. ಜಿ. ಪರಮೇಶ್ವರ್
ಹಿಂದೆ ಕಾಂಗ್ರೆಸ್ ನಡೆಸಿದ ಪಾದಯಾತ್ರೆಯಲ್ಲಿ...
Team Udayavani, Jul 28, 2024, 6:08 PM IST
ದಾವಣಗೆರೆ: ಬಿಜೆಪಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಗತ್ಯ ಆರೋಪ ಮಾಡಿ, ರಾಜ್ಯದ ಜನರಿಗೆ ತಪ್ಪು ಸಂದೇಶ ನೀಡುವ ಉದ್ದೇಶದಿಂದ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಲು ಹೊರಟಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ದೂರಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಿಂದೆ ನಡೆಸಿದ ಪಾದಯಾತ್ರೆಯಲ್ಲಿ ನಿಜಾಂಶವಿತ್ತು. ರಾಜ್ಯದ ಸಂಪತ್ತು ಉಳಿಸುವ ಸದುದ್ದೇಶದಿಂದ ಪಾದಯಾತ್ರೆ ನಡೆಸಿತು. ಆದರೆ, ಈಗ ಬಿಜೆಪಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ. ಯಾವುದೇ ರೀತಿ ಕಾನೂನು ಬಾಹಿರವಾಗಿ ನಡೆಯದೇ ಇರುವ ಪ್ರಕರಣವನ್ನು ಜನರಿಗೆ ಪಾದಯಾತ್ರೆ ಮಾಡುವ ಮೂಲಕ ತಪ್ಪು ಮಾಹಿತಿ ಕೊಡಲು ಪ್ರಯತ್ನಿಸುತ್ತಿದ್ದಾರೆ. ಪಾದಯಾತ್ರೆ ಅನವಶ್ಯಕ ಎಂದರು.
ಹಿಂದೆ ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿರುವವರ ಮತ್ತು ಅಕ್ರಮ ಗಣಿಗಾರಿಕೆ ವಿರುದ್ಧ ಕಾಂಗ್ರೆಸ್ ನಿಂದ ಪಾದಯಾತ್ರೆ ನಡೆಸಲಾಯಿತು ಎಂದು ತಿಳಿಸಿದರು.
ನಾವು ರಾಜ್ಯದ ಜನರಿಗೆ ಬಿಜೆಪಿಗರ ಪಾದಯಾತ್ರೆಯ ದುರುದ್ದೇಶ ಮತ್ತು ಹಿಂದಿನ ನಮ್ಮ ಪಾದಯಾತ್ರೆಯ ಸದುದ್ದೇಶದ ವ್ಯತ್ಯಾಸವನ್ನು ತಿಳಿಸುತ್ತೇವೆ. ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ, ಕಾನೂನುಬಾಹಿರವಾಗಿ ಯಾವುದು ನಡೆದಿಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿಸುತ್ತೇವೆ ಎಂದು ತಿಳಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರವನ್ನು ನಾವು ಸಮರ್ಥಿಸಿಕೊಳ್ಳುವ ಮಾತೇ ಇಲ್ಲ. ಈಗಾಗಲೇ ತಪ್ಪಿಲ್ಲದ ಕಾರಣಕ್ಕಾಗಿಯೇ ವಾಲ್ಮೀಕಿ ಹಗರಣ ಮತ್ತು ಮೂಡ ಬಗ್ಗೆ ಸರಿಯಾದ ತನಿಖೆ ನಡೆಸಲು ಸಿದ್ದರಾಮಯ್ಯ ಅವರು ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ. ವರದಿ ಬಂದ ನಂತರ ಜನರಿಗೆ ತಿಳಿಯುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಸಚಿವರ ಖಾತೆಗೆ ಹಣ ವರ್ಗಾವಣೆ ಆಗಿದೆ ಎಂದು ಹೇಳಲಾಗುತ್ತಿದೆ. ತನಿಖೆ ನಡೆಯುತ್ತಿದೆ. ವರದಿ ಬಂದ ಮೇಲೆ ತಪ್ಪು ಮಾಡಿದ್ದರೆ ಸಚಿವರ ವಿರುದ್ದವೂ ಕ್ರಮ ತೆಗೆದುಕೊಳ್ಳ ಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪೃಥ್ವಿ ಎಂಬ ಯುವಕ ನ್ಯಾಯ ಸಿಗದಿದ್ದರೆ ಭಯೋತ್ಪಾದಕ ಆಗುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿರುವುದರ ಬಗ್ಗೆ ಪ್ರತಿಕ್ರಿಸಿದ ಪರಮೇಶ್ವರ್, ಆ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಇಂತಹ ಆರೋಪಗಳು ಬಂದಾಗ ಯಾವುದೇ ಪೊಲೀಸ್ ಠಾಣೆಯಲ್ಲಿ ಇಲಾಖೆಯವರು ತನಿಖೆ ನಡೆಸಿ ಪೊಲೀಸರದ್ದೇ ತಪ್ಪಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಮೇಕೆ ಮಾಂಸ ಎಂಬುದು ಬಹಿರಂಗ
ನಾಯಿ ಮಾಂಸ ಮಾರಾಟ ಪ್ರಕರಣ ಕುರಿತು ಪ್ರತಿಕ್ರಿಯಿಸಿ ”ರಾಜಸ್ಥಾನದಿಂದ ಪ್ರತಿವಾರ ಅಥವಾ 15 ದಿನಗಳಿಗೊಮ್ಮೆ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ಆದರೆ ಕೆಲವರು ಅನಾವಶ್ಯಕವಾಗಿ ನಾಯಿ ಮಾಂಸ ಎಂದು ಆಪಾದನೆ ಮಾಡಿದ್ದರು. ಈಗ ಪ್ರಯೋಗಾಲಯ ನೀಡಿದ ವರದಿಯ ಅನ್ವಯ ಅದು ಮೇಕೆ ಮಾಂಸ ಎಂಬುದು ಬಹಿರಂಗಗೊಂಡಿದೆ. ಆದ್ದರಿಂದ ಅನಾವಶ್ಯಕವಾಗಿ ದುರುದ್ದೇಶ ಇಟ್ಟುಕೊಂಡು ಈ ರೀತಿ ಆರೋಪ ಮಾಡುವುದು ಸರಿಯಲ್ಲ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.