ಪಂಚಮಸಾಲಿ ಸಮುದಾಯ ಪ್ರವರ್ಗ 2ಎ ಸೇರಿಸುವ ವಿಚಾರ; ಅಧ್ಯಯನ ನಡೆಸಿ ವರದಿ: ಜಯಪ್ರಕಾಶ್ ಹೆಗ್ಡೆ


Team Udayavani, Feb 15, 2022, 4:05 PM IST

ಪಂಚಮಸಾಲಿ ಸಮುದಾಯ ಪ್ರವರ್ಗ 2ಎ ಸೇರಿಸುವ ವಿಚಾರ; ಅಧ್ಯಯನ ನಡೆಸಿ ವರದಿ: ಜಯಪ್ರಕಾಶ್ ಹೆಗ್ಡೆ

ಬೆಂಗಳೂರು : ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎಗೆ ಸೇರಿಸಬೇಕು, ಸೇರಿಸಬಾರದು ಎಂಬುದರ ವಿಚಾರವಾಗಿ ಈಗಾಗಲೇ ಪರ – ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಮಗ್ರ ಅಧ್ಯಯನ ನಡೆಸಿ ನಿಷ್ಪಕ್ಷಪಾತ ವರದಿಯನ್ನು ಸಲ್ಲಿಸಲಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಭರವಸೆ ನೀಡಿದ್ದಾರೆ.

ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎ ಗೆ ಸೇರಿಸಬಾರದು. ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಕರ್ನಾಟಕದ 70 ಜಾತಿ – ಉಪಜಾತಿಗಳನ್ನು  ಸೇರ್ಪಡೆಗೊಳಿಸಬೇಕು ಮತ್ತು ಸ್ಥಳೀಯ ಚುನಾವಣೆಗಳಲ್ಲಿ ಅತಿ ಹಿಂದುಳಿದ ವರ್ಗಗಳಿಗೂ ಮೀಸಲಾತಿ ನೀಡಬೇಕು ಹಾಗೂ  ಹೆಚ್. ಕಾಂತರಾಜ ವರದಿಯನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ, ಕರ್ನಾಟಕ ರಾಜ್ಯ ಅತೀ  ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಮನವಿ ಸಲ್ಲಿಸಲಾಯ್ತು.

ಮನವಿ ಸ್ವೀಕರಿಸಿ ಮಾತನಾಡಿದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು,  ಪ್ರವರ್ಗ 2 ಎಗೆ ಪಂಚಮಸಾಲಿ ಸಮುದಾಯವನ್ನು ಸೇರಿಸುವ ವರದಿಯನ್ನು  ಈಗಾಗಲೇ  ತಿರಸ್ಕರಿಸಲಾಗಿದೆ. ಈ ಬಗ್ಗೆ ಮತ್ತೆ ಪರ ವಿರೋಧ ಮಾತುಗಳು ಕೇಳಿಬರುತ್ತಿವೆ. ಎರಡು ಬಣಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಪಾರದರ್ಶಕ  ವರದಿಯನ್ನು ನೀಡುವುದಾಗಿ ಹೇಳಿದ್ರು.

ಇನ್ನು ಕರ್ನಾಟಕ ರಾಜ್ಯ ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಮ್. ಸಿ. ವೇಣುಗೋಪಾಲ್ ಮಾತನಾಡಿ, ಹಿಂದುಳಿದ  ವರ್ಗಗಳ ಕೇಂದ್ರ ಸರ್ಕಾರದ ಮೀಸಲಾತಿ ಪಟ್ಟಿಗೆ ಕರ್ನಾಟಕದ  70 ಜಾತಿ- ಉಪಜಾತಿಗಳನ್ನು ಸೇರಿಸಬೇಕು ಮತ್ತು ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಬಾರದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದ್ದೇವೆ. ಆಯೋಗದ ಅಧ್ಯಕ್ಷರು ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಅಲ್ಲದೆ ಅತೀ ಹಿಂದುಳಿದ ವರ್ಗಗಳಿಗೆ ಸೂಕ್ತ ನ್ಯಾಯ ನೀಡುವ ಭರವಸೆಯನ್ನು ನೀಡಿದ್ದಾರೆ ಎಂದರು.

ಪಂಚಮಸಾಲಿ ಸಮುದಾಯವು ವೀರಶೈವ-ಲಿಂಗಾಯಿತದ ಉಪಜಾತಿಯಾಗಿರುವುದರಿಂದ ಅಂತಹ ಉಪಜಾತಿಯನ್ನು ಮುಖ್ಯಜಾತಿಯಿಂದ ಬೇರ್ಪಡಿಸಿ ಬೇರೊಂದು ಪ್ರವರ್ಗಕ್ಕೆ ವರ್ಗಾಯಿಸುವುದು ಸರ್ವೋಚ್ಛ ನ್ಯಾಯಲಯ ಇಂದ್ರಾ ಸಹಾನಿ ಪ್ರಕರಣದಲ್ಲಿ ನೀಡಿರುವ ತೀರ್ಪಿಗೆ ವಿರುದ್ಧವಾಗಿರುತ್ತದೆ ಎಂದರು.

ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸುವುದು ಸರಿಯಲ್ಲ. ಇದ್ರಿಂದ ಅತೀ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ. ಒಂದು ವೇಳೆ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಿದ್ರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಮ್. ಸಿ.  ವೇಣುಗೋಪಾಲ್ ಹೇಳಿದ್ರು.

1992ರ ಮಂಡಲ್ ಆಯೋಗದ ವರದಿಯಂತೆ ಕರ್ನಾಟಕದ 323 ಜಾತಿ-ಉಪಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಆನಂತರದಲ್ಲಿ 283 ಜಾತಿ-ಉಪಜಾತಿಗಳನ್ನು ಮೀಸಲಾತಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲಾಯಿತು. ಆದರೂ ಸುಮಾರು 70 ಜಾತಿ ಉಪಜಾತಿಗಳು ರಾಜ್ಯ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದ್ದರೂ, ಕೇಂದ್ರದ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಹೀಗಾಗಿ. ಈ ವರ್ಗಗಳ ಸವಾರ್ಂಗೀಣ ಅಭಿವೃದ್ಧಿಗೆ ಅನುಕೂಲವಾಗಲು, ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಇವುಗಳನ್ನು ಸೇರಿಸಬೇಕು ಎಮ್. ಸಿ. ವೇಣುಗೋಪಾಲ್ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರು ಹಾಗೂ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಂ. ನಾಗರಾಜು, ಖಜಾಂಚಿ ಎಲ್.ಎ ಮಂಜುನಾಥ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

siddaramaiah

MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು

Ashok-Sha

Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.