Gram Panchayat ಸಮಸ್ಯೆಗೆ ಪಂಚಮಿತ್ರ ವಾಟ್ಸ್‌ಅಪ್ ಚಾಟ್
ದೇಶದಲ್ಲೇ ಪ್ರಥಮ ಬಾರಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ: ಪ್ರಿಯಾಂಕ್ ಖರ್ಗೆ
Team Udayavani, Mar 2, 2024, 12:13 AM IST
ಬೆಂಗಳೂರು: ಗ್ರಾಮ ಪಂಚಾಯತ್‌ಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಮತ್ತು ಗ್ರಾಮ ಪಂಚಾಯತ್‌ಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಲು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಪಂಚಮಿತ್ರ ವಾಟ್ಸ್‌ಅಪ್ ಚಾಟ್‌ನ್ನು ಆರಂಭಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಂಚಮಿತ್ರ ಪೋರ್ಟಲ್‌ನ ಲಾಂಛನ ಅನಾವರಣಗೊಳಿಸಿ ಮಾತನಾಡಿದ ಅವರು, ಸಾರ್ವಜನಿಕರು ತಮಗೆ ಅವಶ್ಯವಿರುವ ಗ್ರಾಪಂಗಳ ವಿವಿಧ ಮಾಹಿತಿ, ವಿವರಗಳನ್ನು ಪಡೆಯಲು ಮತ್ತು ಗ್ರಾಪಂಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಹಲವಾರು ವೆಬ್‌ಸೈಟ್ ಮತ್ತು ಪೋರ್ಟಲ್‌ಗಳಿಗೆ ಭೇಟಿ ನೀಡಬೇಕಾಗಿತ್ತು. ಅಲ್ಲದೆ ಎಲ್ಲ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಿಸಿಕೊಳ್ಳಲು ಯಾವುದೇ ನಿರ್ದಿಷ್ಟವಾದ ವೆಬ್‌ಸೈಟ್ ಅಥವಾ ಪೋರ್ಟಲ್‌ಗಳು ಇರಲಿಲ್ಲ. ಹೀಗಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯಡಿ ಬರುವ ರಾಜ್ಯದ ಎಲ್ಲ ಗ್ರಾಪಂಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಬಹುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯು ಇ-ಆಡಳಿತ ಇಲಾಖೆಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ವಾಟ್ಸ್‌ಆಪ್ ಚಾಟ್ ತಂತ್ರಜ್ಞಾನವನ್ನು ದೇಶದಲ್ಲೇ ಪ್ರಪ್ರಥಮವಾಗಿ ಅನುಷ್ಠಾನಗೊಳಿಸಲಾಗಿದೆ ಎಂದರು.
ಇನ್ನು ಮುಂದೆ ಗ್ರಾಪಂಗಳ ಮಾಹಿತಿ ಮತ್ತು ವಿವರಗಳನ್ನು, ಸೇವೆಗಳಿಗೆ ಅರ್ಜಿ ಮತ್ತು ಕುಂದುಕೊರತೆಗಳನ್ನು ವಾಟ್ಸ್‌ಅಪ್ ಚಾಟ್ ಸಂಖ್ಯೆ 8277506000 ಮೂಲಕ ದಾಖಲಿಸಬಹುದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಹದೇವನ್ ಸೇರಿದಂತೆ ಇನ್ನಿತರ ಅಧಿ ಕಾರಿಗಳು ಇದ್ದರು.
ಏನಿದು ಪಂಚಮಿತ್ರ?
ಪಂಚಮಿತ್ರ ಪೋರ್ಟಲ್ ಮೂಲಕ ಗ್ರಾಪಂಗಳ ಮಾಹಿತಿಗಳಾದ ಚುನಾಯಿತ ಪ್ರತಿನಿ ಧಿಗಳ ವಿವರ, ಸಿಬಂದಿ ವಿವರ, ಪೂರ್ಣಗೊಂಡ ಗ್ರಾಮ ಪಂಚಾಯತ್ ಸಭೆಗಳ ನಡಾವಳಿ, ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಸೇವೆಗಳ ವಿವರಗಳು, ಸ್ವ ಸಹಾಯ ಗುಂಪಿನ ವಿವರಗಳು, ಗ್ರಾ.ಪಂ.ಗಳ ಕಾರ್ಯಕ್ರಮಗಳು ಮತ್ತು ಉಪಕ್ರಮಗಳು, 4 (1) (ಎ) 4 (1) (ಬಿ) ಆರ್‌ಟಿಐ ದಾಖಲೆಗಳ ವಿವರಗಳನ್ನು ಪಡೆಯಬಹುದಾಗಿದೆ.
ಯಾವೆಲ್ಲ ಸೇವೆ ಲಭ್ಯ?
ಗ್ರಾಪಂಗಳಿಗೆ ಸಂಬಂಧಿ ಸಿ ಕಟ್ಟಡ ನಿರ್ಮಾಣ ಪರವಾನಿಗೆ ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜು ಸಂಪರ್ಕದ ಕಡಿತ, ಕುಡಿಯುವ ನೀರಿನ ನಿರ್ವಹಣೆ, ಬೀದಿ ದೀಪದ ನಿರ್ವಹಣೆ, ಗ್ರಾಮ ನೈರ್ಮಲ್ಯದ ನಿರ್ವಹಣೆ, ವ್ಯಾಪಾರ ಪರವಾನಿಗೆ, ಸ್ವಾಧಿಧೀನ ಪ್ರಮಾಣಪತ್ರ, ರಸ್ತೆ, ಅಗೆಯಲು ಅನುಮತಿ, ಕೈಗಾರಿಕೆ/ಕೃಷಿ ಆಧಾರಿತ ಉತ್ಪಾದನ ಘಟಕ ಸ್ಥಾಪನೆಗೆ ಅನುಮತಿ, ನಿರಾಕ್ಷೇಪಣ ಪತ್ರ, ಅಡಿಯಲ್ಲಿ ಕಾರ್ಮಿಕರಿಗೆ ಜಾಬ್‌ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ಹೊಸ ಅಥವಾ ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ, ನಿಯಮಿತಗೊಳಿಸುವಿಕೆ, ಓವರ್ ಗ್ರೌಂಡ್ ಕೇಬಲ್ ಮೂಲಸೌಕರ್ಯ, ಭೂಗತ ಕೇಬಲ್ ಮೂಲಸೌಕರ್ಯಕ್ಕಾಗಿ ಅನುಮತಿ, ನಮೂನೆ 9/11ಎ, ನಮೂನೆ 11ಬಿ ಸೇವೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ಸೇವೆಗಳನ್ನು ಪಡೆಯಬಹುದಾಗಿದೆ ಹಾಗೂ ಅರ್ಜಿಗಳ ಸ್ಥಿತಿಗತಿಯನ್ನು ಸಹ ಪರಿಶೀಲಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
Waqf ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್
ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ
Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.