ತಳಮಟ್ಟದಲ್ಲಿ ಸಂಘಟನೆಗೆ “ಪಂಚರತ್ನ ಸಮಿತಿ’

Team Udayavani, Oct 16, 2020, 12:14 PM IST

bng-tdy-3

ಬೆಂಗಳೂರು: ಗ್ರಾಮ ಪಂಚಾಯ್ತಿ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಬಿಜೆಪಿಯು ಗ್ರಾಪಂ ಮಾತ್ರವಲ್ಲದೆ, ರಾಜ್ಯದಲ್ಲಿ ನಡೆಯುವ ಎಲ್ಲ ಚುನಾವಣೆಗಳಲ್ಲೂ ಬೂತ್‌ ಮಟ್ಟದಲ್ಲಿ ಸಕ್ರಿಯ ಕಾರ್ಯ ನಿರ್ವಹಿಸುವ “ಪಂಚ ರತ್ನ’ ಸಮಿತಿ ರಚನೆಕಾರ್ಯ ಸದ್ದಿಲ್ಲದೆ ಶುರು ಮಾಡಿದೆ.

ರಾಜ್ಯ ಬಿಜೆಪಿ ಅಧ್ಯಕ್ಷರಾದ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರ ಚಿಂತನೆಯಂತೆರಾಜ್ಯದಲ್ಲಿನ54,000ಕ್ಕೂ ಹೆಚ್ಚುಬೂತ್‌ಗಳಲ್ಲಿತಲಾ ಐದು ಮಂದಿಯ “ಪಂಚರತ್ನ ಸಮಿತಿ’ ಪಡೆ ರಚನೆಯಾಗುತ್ತಿದ್ದು, ಈಗಾಗಲೇ 30,000 “ರತ್ನ’ಗಳ ಗುಂಪು ರಚನೆಯಾಗಿದೆ. ಒಟ್ಟು 2.70 ಲಕ್ಷ ಮಂದಿಯ “ಪಂಚರತ್ನ ಸಮಿತಿ’ ಯು ಸಂಘಟನೆ ಜತೆಗೆ ಗ್ರಾಪಂ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸಲು ಸಜ್ಜಾಗುತ್ತಿದೆ.ರಾಜ್ಯದಲ್ಲಿ ಕೇಡರ್‌ಆಧಾರಿತವಾಗಿ ಪಕ್ಷ ಸಂಘಟನೆಯನ್ನು ಚುರುಕುಗೊಳಿಸಿರುವ ಬಿಜೆಪಿಯು ಗ್ರಾಮ ಪಂಚಾಯಿತಿ ಹಂತದಲ್ಲಿ ಅಧಿಕಾರ ಹಿಡಿಯುವುದು ಇದರ ಉದ್ದೇಶ.

ಪಂಚರತ್ನ ಸಮಿತಿ: ಗ್ರಾ. ಪಂ. ಚುನಾವಣೆಗೆ ಪ್ರತಿ ಬೂತ್‌ಮಟ್ಟದಲ್ಲಿ ಪಂಚರತ್ನ ಸಮಿತಿ ರಚನೆಯಾಗುತ್ತಿದೆ. ಬೂತ್‌ ಅಧ್ಯಕ್ಷ, ಬೂತ್‌ ಮಟ್ಟದ ಏಜೆಂಟ್‌, ಪರಿಶಿಷ್ಟ ಜಾತಿ ಇಲ್ಲವೇ ಪಂಗಡ, ಹಿಂದುಳಿದ ವರ್ಗದ ತಲಾ ಒಬ್ಬರು ಹಾಗೂ ಮಹಿಳಾ ಸದಸ್ಯೆ ಸೇರಿ ಒಟ್ಟು ಐದು ಮಂದಿ ಇರಲಿದ್ದಾರೆ.ಈ ಐದು ಮಂದಿ ಈ ಬಾರಿಯ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿ‌ಸುವುದಿಲ್ಲ. ಹಾಗಾಗಿ ಸಂಪೂರ್ಣ ಸಂಘಟನೆ, ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಒಂದು ಗ್ರಾಪಂ ವ್ಯಾಪ್ತಿಯಲ್ಲಿನ ಎಲ್ಲ ಬೂತ್‌ಗಳ ಪಂಚರತ್ನ ಸಮಿತಿಯು ಪಂಚಾಯ್ತಿ ವ್ಯಾಪ್ತಿಯ ಪ್ರಮುಖರನ್ನೆಲ್ಲಾ ಒಂದೆಡೆಸೇರಿಸಿ ಕುಟುಂಬ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲು ರೂಪುರೇಷೆ ಸಿದ್ಧವಾಗಿದೆ. ಆ ಮೂಲಕ ಸ್ಥಳೀಯರೊಂದಿಗೆ ಬಾಂದವ್ಯ ವೃದ್ಧಿಸಿಕೊಂಡು ಸಂಘಟನೆಗೆಒತ್ತು ನೀಡಲಿದೆ. ರಾಜ್ಯದಲ್ಲಿರುವ 6000 ಗ್ರಾಪಂಗಳಲ್ಲೂ ತಲಾ ಒಂದು ಕುಟುಂಬ ಸಮ್ಮಿಲನ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ನಡೆದಿದೆ ಎಂದು ಹೇಳಲಾಗಿದೆ.

ಬೂತ್‌ಮಟ್ಟದ ಸಮಿತಿ ಜತೆಗೆ ಹೊಸದಾಗಿ ಪಂಚರತ್ನ ಸಮಿತಿ ರಚನೆಯಾಗಲಿದೆ. ಜತೆಗೆ ಪೇಜ್‌ ಪ್ರಮುಖರನ್ನು ಆಯ್ಕೆ ಮಾಡಲಾಗುತ್ತದೆ. ಇಷ್ಟು ಮಂದಿ ಗ್ರಾಪಂ ಚುನಾವಣೆಗೆಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಈ ಸಮಿತಿ ಗ್ರಾಪಂ ಚುನಾವಣೆಗಷ್ಟೇ ಸೀಮಿತವಾಗಿರುವುದಿಲ್ಲ. ಮುಂದೆ ಎದುರಾಗುವ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ,ವಿಧಾನಸಭೆ, ಲೋಕಸಭಾ ಚುನಾವಣಾ ಕಾರ್ಯದಲ್ಲೂ ತೊಡಗಿಸಿಕೊಳ್ಳುವ ಕಾಯಂ ಸಮಿತಿಯಾಗಿರಲಿದೆ. ಸದಸ್ಯರಾದವರಿಗೆ ನಿಗದಿತ ಕಾಲಾವಧಿ ಇಲ್ಲವೇ 3 ವರ್ಷಕ್ಕೊಮ್ಮೆ ಬದಲಾಗುವ ವ್ಯವಸ್ಥೆ ರೂಪಿಸುವ ಬಗ್ಗೆಯೂ ಚರ್ಚೆ ನಡೆದಿದೆ. ನಳಿನ್‌ ಕುಮಾರ್‌ ಕಟೀಲ್‌ ಅವರು ಹಿಂದೆ ಕೇರಳದಲ್ಲಿ ಜಾರಿಗೊಳಿಸಿದ ಪ್ರಯೋಗವನ್ನು ಇದೀಗ ರಾಜ್ಯದಲ್ಲಿ ಜಾರಿಗೊಳಿಸಲು ಮುಂದಾಗಿದ್ದಾರೆ.

ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ನೇಮಿಸಿದ ಮೇಲೆ ಕೆಲವರು ಕರಾವಳಿ ಕಲ್ಪನೆಯನ್ನು ವಿಸ್ತರಿ ಸಿಬೆಂಕಿ ಹಚ್ಚುತ್ತಾರೆ ಎಂದು ಟೀಕಿಸಿದರು. ನಮ್ಮದು ಬೆಂಕಿ ಹಚ್ಚುವ ಕೆಲಸವಲ್ಲ. ದಕ್ಷಿಣ ಕರ್ನಾಟಕದಲ್ಲಿ ಇರುವ ಸಂಘಟನಾತ್ಮಕ ರಾಜಕಾರಣವನ್ನು ಹಳೆಯ ಮೈಸೂರು ಪ್ರಾಂತ್ಯದಲ್ಲೂ ವಿಸ್ತರಿಸುವ ಕೆಲಸ ಮಾಡುತ್ತೇವೆ. ನಳಿನ್‌ಕುಮಾರ್‌ಕಟೀಲ್‌, ರಾಜ್ಯ ಬಿಜೆಪಿ ಅಧ್ಯಕ

ಬೇರು ಮಟ್ಟದಲ್ಲಿ ಪಕ್ಷ ಸಂಘಟನೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರತಿ ಬೂತ್‌ನಲ್ಲಿ ಪಂಚರತ್ನ ಸಮಿತಿ ರಚನೆಗೆ ನಿರ್ಧರಿಸಲಾಗಿದೆ.ಕೇಡರ್‌ಆಧಾರಿತ ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಪ್ರಯತ್ನಆರಂಭಿಸಲಾಗಿದೆ. ಮಹೇಶ್‌ ಟೆಂಗಿನಕಾಯಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ

ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.