ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಡ್ಯಾಂಗೆ ನವಲಿಯಲ್ಲಿ ಜಾಗ
Team Udayavani, Feb 13, 2019, 1:28 AM IST
ವಿಧಾನಪರಿಷತ್: ತುಂಗಭದ್ರಾ ಜಲಾಶಯಕ್ಕೆ ಪೂರಕವಾಗಿ ಗಂಗಾವತಿ ಜಿಲ್ಲೆಯ ನವಲಿ ಗ್ರಾಮದ ಬಳಿ ಸಮಾನಾಂತರ ಜಲಾಶಯ ನಿರ್ಮಿಸಲು ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಇದಕ್ಕಾಗಿ ಜಾಗ ಗುರುತಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕಾಂಗ್ರೆಸ್ ಸದಸ್ಯ ಎನ್.ಎಸ್. ಬೋಸರಾಜು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿರುವುದರಿಂದ ಜಲಾಶಯದ ಸಾಮರ್ಥ್ಯಕ್ಕಿಂತ ಸುಮಾರು 33 ಟಿಎಂಸಿಯಷ್ಟು ನೀರು ಕಡಿಮೆ ಸಂಗ್ರಹ ಆಗುತ್ತಿದೆ. ಈ ಬಗ್ಗೆ ತಜ್ಞರಿಂದಲೂ ಅಭಿಪ್ರಾಯ ಸಂಗ್ರಹಿಸಿ, ಸಮಾ ನಾಂತ ರ ಜಲಾಶಯ ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಗಿದೆ. ಇದರಿಂದ ರಾಜ್ಯಕ್ಕೆ 20 ಟಿಎಂಸಿ ಹಾಗೂ ನೆರೆಯ ಆಂಧ್ರಪ್ರದೇಶಕ್ಕೆ 11 ಟಿಎಂಸಿ ನೀರು ಸಿಗಲಿದೆ. ಇದಕ್ಕೆ ಆಂಧ್ರದಿಂದಲೂ ಸ್ಪಂದನೆ ದೊರಕಿದೆ ಎಂದರು. ಅಲ್ಲದೆ, ಕೃಷ್ಣಾ ನದಿಪಾತ್ರದಿಂದ ಗಣೇಕಲ್ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆಯನ್ನು 2019-20ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿದೆ ಎಂದು ಹೇಳಿದರು.
ಕೃಷ್ಣಾ ಯೋಜನೆ ಸಂತ್ರಸ್ತರಿಗೆ ಮೂಲಸೌಕರ್ಯ
ವಿಧಾನಪರಿಷತ್: ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತರ ಪುನರ್‌ವಸತಿ ಕೇಂದ್ರಗಳಿಗೆ ಸ್ಮಶಾನ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸರ್ಕಾರ ಬದಟಛಿ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬಿಜೆಪಿ ಸದಸ್ಯ ಹನುಮಂತಪ್ಪ ರುದ್ರಪ್ಪ ನಿರಾಣಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೂಲಸೌಕರ್ಯಗಳನ್ನು ಕಲ್ಪಿಸುವುದು ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಸೌಲಭ್ಯಗಳನ್ನು ಒದಗಿಸಲಾಗುವುದು. ಜತೆಗೆ ಸ್ಮಶಾನಕ್ಕಾಗಿ ಜಾಗವನ್ನು ಖರೀದಿಸಲಾಗುವುದು. ಯಾವುದಾದರೂ ಜಾಗದ ಲಭ್ಯತೆ ಇದ್ದರೆ, ಮಾಹಿತಿ ನೀಡುವಂತೆಯೂ ಹೇಳಿದರು. ಕೃಷ್ಣಾ ಮೇಲ್ದಂಡೆ ಯೋಜನೆ ಅಡಿ 137 ಪುನರ್‌ವಸತಿ ಕೇಂದ್ರಗಳನ್ನು ನಿರ್ಮಿಸಿದ್ದು, 107 ಕೇಂದ್ರಗಳಿಗೆ ಸಂತ್ರಸ್ತರು ಸ್ಥಳಾಂತರಗೊಂಡಿದ್ದಾರೆ.
ಯೋಜನೆ ಹಂತ-1 ಘಟ್ಟ 3ರಡಿ ಉಳಿದ ಮುಳುಗಡೆ ಗ್ರಾಮಗಳು ಹಿನ್ನೀರಿನಿಂದ ಸದ್ಯಕ್ಕೆ ಯಾವುದೇ ಬಾಧೆ ಆಗದಿರುವುದರಿಂದ ಸ್ಥಳಾಂತರಗೊಂಡಿಲ್ಲ. ಈ ಕೇಂದ್ರಗಳಿಗೆ 2016 ಮತ್ತು 2017ರಲ್ಲಿ ಒಟ್ಟಾರೆ 325.34 ಕೋಟಿ ರೂ. ವಿಶೇಷ ಅನುದಾನದಲ್ಲಿ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
MUST WATCH
ಹೊಸ ಸೇರ್ಪಡೆ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.