ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ
Team Udayavani, Jun 2, 2024, 6:40 AM IST
ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ 11 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಸೋಮವಾರ (ಜೂ. 3) ಕೊನೆಯ ದಿನವಾಗಿದೆ. ಈ ವರೆಗೆ ಒಬ್ಬ ಅಭ್ಯರ್ಥಿಯಿಂದ ಮಾತ್ರ ನಾಮಪತ್ರ ಸಲ್ಲಿಕೆಯಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಪ್ರಕಟಿಸಿಲ್ಲ.
ಹನ್ನೊಂದು ಸ್ಥಾನಗಳ ಪೈಕಿ ಕಾಂಗ್ರೆಸ್ 7, ಬಿಜೆಪಿ 3 ಮತ್ತು ಜೆಡಿಎಸ್ 1 ಸ್ಥಾನವನ್ನು ಗೆಲ್ಲುವ ಅವಕಾಶವಿದ್ದು, ಈ ಪಕ್ಷಗಳ ಅಧಿಕೃತ ಅಭ್ಯರ್ಥಿಗಳು ಸೋಮವಾರವೇ ನಾಮಪತ್ರ ಸಲ್ಲಿಸಬೇಕಿದೆ.
ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 13ಕ್ಕೆ ಮತದಾನ ನಿಗದಿಯಾಗಿದ್ದು, ಅಂದೇ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.
ನಕಲಿ ಪಟ್ಟಿ: ಬಿಜೆಪಿ ದೂರು
ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ನಕಲಿ ದಾಖಲೆ ನೀಡಿ ಹೆಸರು ಸೇರ್ಪಡೆ ಮಾಡಲಾಗಿದೆ ಎಂದು ಬಿಜೆಪಿ ನಿಯೋಗವು ಆಕ್ಷೇಪ ವ್ಯಕ್ತಪಡಿಸಿದೆ. ಇಂತಹ ನಕಲಿ ಮತದಾರರನ್ನು ಸೇರಿಸಿರುವವರ ವಿರುದ್ಧ ಪ್ರಕರಣ ದಾಖಲಿಸಿ ಮತ್ತು ನಕಲಿ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಬಿಜೆಪಿ ನಿಯೋಗ ಚುನಾವಣ ಆಯೋಗಕ್ಕೆ ಮನವಿ ಮಾಡಿದೆ. ಶನಿವಾರ ನಗರದ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣ ಆಯೋಗದ ಕಚೇರಿಗೆ ಭೇಟಿ ನೀಡಿದ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ ನೇತೃತ್ವದ ನಿಯೋಗವು ಮನವಿ ಪತ್ರ ಸಲ್ಲಿಸಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.