‘ಇನ್ನು ಮುಂದೆ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಭಾಗವಹಿಸಲ್ಲ’
Team Udayavani, Jan 14, 2019, 6:05 AM IST
ಬಾಗಲಕೋಟೆ: ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಇನ್ನು ಹೋರಾಟ ಮಾಡುವ ಅಗತ್ಯವಿಲ್ಲ. ಇನ್ನೇನಿದ್ದರೂ ಕಾನೂನು ಸಮರ ಮಾತ್ರ. ಈ ವಿಷಯದಲ್ಲಿ ಯಾವುದೇ ಹೋರಾಟ ನಡೆಸಿದರೂ ನಾನು ಒಬ್ಬ ಗೃಹ ಸಚಿವನಾಗಿ ಯಾವ ಹೋರಾಟದಲ್ಲೂ ಭಾಗವಹಿಸುವುದಿಲ್ಲ ಎಂದು ಗೃಹ ಸಚಿವ ಎಂ.ಬಿ. ಪಾಟೀಲ ಸ್ಪಷ್ಟಪಡಿಸಿದರು.
ಜಿಲ್ಲೆಯ ಕೂಡಲಸಂಗಮದಲ್ಲಿ ನಡೆದ ಶರಣ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಲಿಂಗಾಯತ ಒಂದು ಸ್ವತಂತ್ರ ಧರ್ಮ. ಇದನ್ನು ನಾನಾಗಲಿ ಅಥವಾ ಮತ್ಯಾರೋ ಹುಟ್ಟು ಹಾಕಿದ್ದಲ್ಲ. 12ನೇ ಶತಮಾನದಲ್ಲೇ ಬಸವಣ್ಣನವರು ಹುಟ್ಟು ಹಾಕಿದ್ದಾರೆ. ಲಿಂಗಾಯತ ಒಂದು ಸ್ವತಂತ್ರ ಧರ್ಮ ಎಂಬುದಕ್ಕೆ ನನ್ನ ಬಳಿ ಇರುವಷ್ಟು ದಾಖಲೆ ಇನ್ಯಾರ ಬಳಿಯೂ ಇರಲು ಸಾಧ್ಯವಿಲ್ಲ. ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೆ ಅಣಿಯಾಗುವ ಮುಂಚೆ ಸಾಕಷ್ಟು ಅಧ್ಯಯನ ಮಾಡಿದ್ದೇನೆ. ಎಲ್ಲವನ್ನೂ ಖಾತ್ರಿ ಮಾಡಿಕೊಂಡೇ ಹೋರಾಟಕ್ಕೆ ಮುಂದಾಗಿದ್ದೆ. ಸುಮ್ಮನೆ ಹೋರಾಟ ನಡೆಸಿಲ್ಲ. 12ನೇ ಶತಮಾನದಲ್ಲಿ ಲಿಂಗಾಯತ ಧರ್ಮ ಹುಟ್ಟಿಕೊಂಡಿದೆ. ಆದರೂ, ನನ್ನ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ನಡೆಸಲಾಯಿತು. ಲಿಂಗಾಯತ ಧರ್ಮವನ್ನು ನಾವು ಹುಟ್ಟು ಹಾಕಿದ್ದೇವಾ? ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಸ್ಥಾನಮಾನ ಸಿಗಬೇಕು ಎಂಬ ನಮ್ಮ ಆಶಯಕ್ಕೆ ರಾಜ್ಯದಲ್ಲಿ ಯಶಸ್ಸು ಸಿಕ್ಕಿದೆ ಎಂದರು.
ಲಿಂಗಾಯತ ಪ್ರತ್ಯೇಕ ಧರ್ಮ ನನ್ನ ಅಸ್ಮಿತೆ. ಈಗ ಗೃಹ ಸಚಿವನಾಗಿದ್ದರಿಂದ ನಾನು ಬಹಳಷ್ಟು ಸೂಕ್ಷ್ಮತೆಯಿಂದ ಮಾತನಾಡಬೇಕಾಗುತ್ತದೆ. ಯಾವುದೇ ಹೋರಾಟದಲ್ಲಿ ಭಾಗವಹಿಸಲು ಶಿಷ್ಟಾಚಾರ ಅಡ್ಡಿ ಬರುತ್ತದೆ. ಹೀಗಾಗಿ, ನಾನು ಹೋರಾಟ ಮಾಡುವುದಿಲ್ಲ. ಹೋರಾಟ ಮಾಡುವವರು ಮಾಡಲಿ. ಇದಕ್ಕಾಗಿ ಈಗ ಉಳಿದಿರುವುದು ಕಾನೂನು ಹೋರಾಟ. ಲಿಂಗಾಯತ ಸ್ವತಂತ್ರ ಧರ್ಮ ಎಂಬುದು ಸತ್ಯವಾದರೆ ಹೋರಾಟಕ್ಕೆ ಜಯ ಸಿಗುತ್ತದೆ ಎಂದರು.
ಪಲ್ಲಕ್ಕಿ ಉಳಿಸಿಕೊಳ್ಳಲು ಕೆಲವರಿಂದ ಅಡ್ಡಿ
ಬಾಗಲಕೋಟೆ: ಪಲ್ಲಕ್ಕಿ ಉಳಿಸಿಕೊಳ್ಳಲು ಕೆಲವರಿಂದ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಅಡ್ಡಿಯಾಗುತ್ತಿದೆ ಎಂದು ಕೂಡಲಸಂಗಮದ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಡಾ|ಮಾತೆ ಮಹಾದೇವಿ ಟೀಕಿಸಿದರು.
ಕೂಡಲಸಂಗಮದಲ್ಲಿ ನಡೆದ ಶರಣ ಮೇಳದಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಧರ್ಮಕ್ಕಾಗಿ ಹೋರಾಟ ನಡೆಸಿದ ಎಂ.ಬಿ. ಪಾಟೀಲ ಮತ್ತು ನಮ್ಮ ಹೋರಾಟದ ಒತ್ತಾಯಕ್ಕೆ ಸ್ಪಂದಿಸಿದ ಆಗಿನ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯದಲ್ಲಿ ದೊಡ್ಡ ಅಪಪ್ರಚಾರ ನಡೆಸಿದರು. ಇದಕ್ಕೆ ನಮ್ಮ ಲಿಂಗಾಯತರೂ ಬಲಿಯಾದರು ಎಂದರು.
ಲಿಂಗಾಯತರು ಜಾತಿವಾದಿಗಳಲ್ಲ. ಮಾನ ವತಾವಾದಿಗಳು. ಆದರೆ, ವೀರಶೈವವಾದಿಗಳು ತಮ್ಮ ಹೆಸರು ಮತ್ತು ಪಲ್ಲಕ್ಕಿ ಉಳಿಸಿಕೊಳ್ಳಲು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ವಿರೋಧ ಮಾಡುತ್ತಿದ್ದಾರೆ. ನಾವು ಪ್ರತ್ಯೇಕ ಧರ್ಮ ಹೋರಾಟ ವಿಷಯದಲ್ಲಿ ರಾಜ್ಯದಲ್ಲಿ ಈಗಾಗಲೇ ಯಶಸ್ಸು ಕಂಡಿದ್ದೇವೆ. ಪ್ರತ್ಯೇಕ ಧರ್ಮ ಹೋರಾಟಕ್ಕೆ ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿಯ ವರದಿಯೇ ನಮಗೆ ದೊಡ್ಡ ಅಸ್ತ್ರ. ರಾಜ್ಯ ಸರ್ಕಾರದಿಂದ ಈಗಾಗಲೇ ಕೇಂದ್ರಕ್ಕೆ ಶಿಫಾರಸು ಆಗಿದ್ದು, ಕೇಂದ್ರದಲ್ಲೂ ಹೋರಾಟ ಮುಂದುವರಿದಿದೆ. ಆದರೆ, ಲಿಂಗಾಯತ ಕೋಟಾದಡಿ ಟಿಕೆಟ್ ಪಡೆದು ಗೆದ್ದವರು ಇಂದು ಲಿಂಗಾಯತ ಧರ್ಮದ ಮಾತು ಎತ್ತುತ್ತಿಲ್ಲ. ಪ್ರತ್ಯೇಕ ಧರ್ಮಕ್ಕಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರುವ ಕುರಿತು ಚಿಂತನೆ ನಡೆದಿದೆ ಎಂದರು.
ಪ್ರತ್ಯೇಕ ಧರ್ಮ ಹೋರಾಟ, ರಾಜ್ಯದಲ್ಲಿ ಯಶಸ್ವಿಯಾಗಲು ಗೃಹ ಸಚಿವ ಎಂ.ಬಿ. ಪಾಟೀಲ, ವಿನಯ ಕುಲಕರ್ಣಿ ಹಾಗೂ ಬಸವರಾಜ ಹೊರಟ್ಟಿ ಕಾರಣ. ಎಂ.ಬಿ. ಪಾಟೀಲರೇ ನಮ್ಮ ಲಿಂಗಾಯತ ನಾಯಕ ಎಂದು ಈಚೆಗೆ ದೆಹಲಿಯಲ್ಲಿ ನಡೆದ ಹೋರಾಟದ ವೇಳೆ ನಾವು ಸಂಕಲ್ಪ ಮಾಡಿದ್ದೇವೆ. ಇದನ್ನು ಅವರು ಒಪ್ಪಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.