![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 16, 2024, 12:00 AM IST
ಬೆಂಗಳೂರು: ಸರಕಾರದಿಂದ ಅನುಮತಿ ಪಡೆದ ವ್ಯಾವಹಾರಿಕ ಸ್ಥಳಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯವಾಗಿ ಪ್ರದರ್ಶಿಸಬೇಕೆಂಬ ಕಾನೂನು ಜಾರಿಗೊಳಿಸುವುದಕ್ಕೆ ಪೂರಕವಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ-2024ಕ್ಕೆ ವಿಧಾನಸಭೆಯಲ್ಲಿ ಗುರುವಾರ ಅನುಮೋದನೆ ದೊರೆಯಿತು.
ವಿಧಾನ ಪರಿಷತ್ತಿನಲ್ಲಿ ಇದಕ್ಕೆ ಅನುಮೋದನೆ ದೊರೆತು ರಾಜ್ಯಪಾಲರ ಅಂಕಿತ ಬಿದ್ದ ಬಳಿಕ ಕಾನೂನಾಗಿ ಜಾರಿಗೊಳ್ಳಲಿದೆ. ರಾಜ್ಯ ಸರಕಾರದ ಇಲಾಖೆಗಳು, ಉದ್ಯಮಗಳು, ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಬ್ಯಾಂಕ್, ಇತರೆ ಹಣಕಾಸು ಸಂಸ್ಥೆಗಳು, ಸರಕಾರದಿಂದ ಅನುಮತಿ ಪಡೆದ ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವವಿದ್ಯಾನಿಲಯಗಳ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಬೇಕು. ನಾಮಫಲಕಗಳ ಒಟ್ಟಾರೆ ವಿಸ್ತೀರ್ಣದಲ್ಲಿ ಕನ್ನಡ ಭಾಷೆಯನ್ನು ಮೇಲ್ಭಾಗದಲ್ಲಿ ಶೇ.60ರಷ್ಟು ಪ್ರದರ್ಶಿಸುವುದು ಕಡ್ಡಾಯ ಮಾಡಲಾಗಿದೆ. ಶೇ.40ರಷ್ಟು ಇತರ ಭಾಷೆಯನ್ನು ಕೆಳಭಾಗದಲ್ಲಿ ಬಳಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ಸ್ಥಳದಲ್ಲೇ ದಂಡ ವಿಧಿಸಲು ಅವಕಾಶ ನೀಡಿ
ಮಸೂದೆ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಬಹುರಾಷ್ಟ್ರೀಯ ಕಂಪೆನಿಗಳು, ಮಾಲ್‌ಗಳು ಕಾನೂನು ಪಾಲನೆ ಮಾಡುತ್ತವೆಯೇ ಎನ್ನುವ ಪ್ರಶ್ನೆ ಇದೆ. ಅವರು ನೋಟಿಸ್, ನ್ಯಾಯಾಲಯಗಳಿಗೂ ಹೆದರುವುದಿಲ್ಲ. ಸ್ಥಳದಲ್ಲೇ ದಂಡ ವಿಧಿಸುವ ಕಾನೂನು ತರಬೇಕು ಎಂದು ಆಗ್ರಹಿಸಿದರು.
ನಿಯಮ ರಚಿಸುವಾಗ ದಂಡ ವಿಧಿಸುವ ಹಾಗೂ ಪರವಾನಿಗೆ ರದ್ದುಪಡಿಸುವ ಅಂಶಗಳನ್ನೂ ಸೇರಿಸುವುದಾಗಿ ಸಚಿವ ತಂಗಡಗಿ ಭರವಸೆ ನೀಡಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.