ಬ್ರಿಟಿಷ್ ರಿಗೆ ಮುಚ್ಚಳಿಕೆ ಬರೆದುಕೊಟ್ಟ ಬಿಜೆಪಿಯವರದ್ದು ದೇಶ ಭಕ್ತಿಯಾ? ಸಿದ್ದರಾಮಯ್ಯ
Team Udayavani, Dec 28, 2020, 4:27 PM IST
ಬೆಂಗಳೂರು: ಸ್ವಾತಂತ್ರ್ಯಕ್ಕಾಗಿ ಬಿಜೆಪಿಯವರು ಯಾರಾದರೂ ಒಬ್ಬರು ಹುತಾತ್ಮರಾದ್ದಾರೆಯೇ? ಬ್ರಿಟಿಷ್ ರಿಗೆ ಬರೆದುಕೊಡೋದು ಬಿಜೆಪಿಯವರ ದೇಶಭಕ್ತಿಯೇ? ದೇಶಭಕ್ತಿ ಬಿಜೆಪಿಯ ಆಸ್ತಿಯಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಕಾಂಗ್ರೆಸ್ 136 ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ನಾವೆಲ್ಲರೂ ಗಾಂಧೀಜಿ ಹಿಂದುತ್ವದವರು. ಬಿಜೆಪಿಯವರದ್ದು ಸಾರ್ವಕರ್ ಹಿಂದುತ್ವ. ನಾನೂ, ಡಿ.ಕೆ ಶಿವಕುಮಾರ್ ಹಿಂದೂಗಳು. ಆದರೆ ಚುನಾವಣೆಗಾಗಿ ಬಿಜೆಪಿಯವರು ಹಿಂದೂತ್ವವನ್ನು ಚರ್ಚೆ ಮಾಡುತ್ತಾರೆ ಎಂದರು.
ಇದನ್ನೂ ಓದಿ:ನಾನು ದನದ ಮಾಂಸ ತಿನುತ್ತೇನೆ, ಆಹಾರ ಪದ್ಧತಿ ನನ್ನ ಹಕ್ಕು, ಕೇಳುವವರು ಯಾರು? ಸಿದ್ದರಾಮಯ್ಯ
ಜಾತಿ ವ್ಯವಸ್ಥೆಯನ್ನು ಫೋಷಣೆ ಮಾಡುವವರಿಗೆ ಯಾವುದೇ ಐಡಿಯಾಲಜಿ ಇಲ್ಲ. ಕಾಂಗ್ರೆಸ್ ನವರು 73 ವರ್ಷ ಏನು ಮಾಡಿದ್ದರೂ ಅಂತ ಬಿಜೆಪಿಯವರು ಕೇಳುತ್ತಾರೆ, ಈ ದೇಶಕ್ಕೆ ಸಂವಿಧಾನ ತಂದಿದ್ದೇ ಕಾಂಗ್ರೆಸ್ ನವರು ಎಂದರು.
ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದ ಮೇಲೆ ನಂಬಿಕೆ ಇಲ್ಲ. ಸಾಮಾಜಿಕ ನ್ಯಾಯದ ವಿರುದ್ಧವಾಗಿ ಬಿಜೆಪಿಯವರು ನಡೆದುಕೊಂಡಿದ್ದಾರೆ. ಇದನ್ನ ನಾವು ಜನರಿಗೆ ಹೇಳಬೇಕು ಎಂದ ಅವರು, ಕಾಂಗ್ರೆಸ್ ಪಕ್ಷದ ಸಾಂಪ್ರಾದಾಯಿಕ ಮತಗಳು ಎಲ್ಲವೂ ಛಿದ್ರವಾಗಿದೆ. ಅದನ್ನು ಮತ್ತೆ ಒಗ್ಗೂಡಿಸುವ ಕೆಲಸ ನಾವೆಲ್ಲರೂ ಮಾಡಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.