ಪಾವಂಜೆ: ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು
Team Udayavani, Sep 20, 2022, 8:54 PM IST
ಹಳೆಯಂಗಡಿ: ಗಾಳ ಹಾಕಿ ಮೀನು ಹಿಡಿಯಲೆಂದು ತೆರಳಿದ್ದ ವೃದ್ಧರೋರ್ವರು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ:ಮಂಗಳೂರು: ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿದ ಯುವಕನಿಗೆ ಜೈಲು
ಮೃತಪಟ್ಟವರನ್ನು ಮೂಲ್ಕಿ ಕೆ.ಎಸ್.ರಾವ್ ನಗರದ ನಿವಾಸಿ ಈಶ್ವರ (63) ಎಂದು ಗುರುತಿಸಲಾಗಿದೆ.
ಈಶ್ವರ ಅವರಿಗೆ ಗಾಳ ಹಾಕಿ ಮೀನು ಹಿಡಿಯುವ ಹವ್ಯಾಸ ಇದ್ದು, ಸಂಜೆ ಮನೆಯಿಂದ ಪಾವಂಜೆಯ ಸೇತುವೆಯ ಕೆಳಗೆ ಗಾಳ ಹಾಕುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಮೂಲ್ಕಿ ಪೊಲೀಸರು, ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಮೇಲೆತ್ತಿದ್ದು, ಮೂಲ್ಕಿ ಕಾರ್ನಾಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದಾರೆ.
ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.