Pen Drive Case; ಪ್ರಜ್ವಲ್ ರೇವಣ್ಣ ಮತ್ತೆ 8 ದಿನ ಎಸ್‌ಐಟಿ ವಶಕ್ಕೆ
Team Udayavani, Jun 19, 2024, 8:53 PM IST
ಬೆಂಗಳೂರು: ಹಾಸನದ ಅಶ್ಲೀಲ ಪೆನ್‌ಡ್ರೈವ್ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 8 ದಿನಗಳ ಕಾಲ ಎಸ್‌ಐಟಿ ಮತ್ತೆ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕುತ್ತಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿಯಲ್ಲಿ ದಾಖಲಾಗಿರುವ 3ನೇ ಪ್ರಕರಣದಲ್ಲಿ ವಿಚಾರಣೆ ನಡೆಸಬೇಕಾದ ಹಿನ್ನೆಲೆಯಲ್ಲಿ ವಶಕ್ಕೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಮನವಿ ಮಾಡಿದ್ದರು. ಇದನ್ನು ಪುರಸ್ಕರಿಸಿದ 42ನೇ ಎಸಿಎಂಎಂ ನ್ಯಾಯಾಲಯವು ಪ್ರಜ್ವಲ್‌ರನ್ನು 8 ದಿನಗಳ ಕಾಲ ಎಸ್‌ಐಟಿ ವಶಕ್ಕೆ ಒಪ್ಪಿಸಿದೆ.
ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಸಿಐಡಿ ಕಚೇರಿಯಲ್ಲಿರುವ ಎಸ್‌ಐಟಿ ವಿಭಾಗಕ್ಕೆ ಕರೆತಂದು ವಿಚಾರಣೆ ನಡೆಸಲಾಗಿದೆ. ಕೆ.ಆರ್.ನಗರ ಸಂತ್ರಸ್ತೆ ಅತ್ಯಾಚಾರ ಪ್ರಕರಣದಲ್ಲಿ ಸ್ಥಳ ಮಹಜರು, ಹೇಳಿಕೆ ದಾಖಲು, ವಾಯ್ಸ… ಸ್ಯಾಂಪಲ್ , ವೈದ್ಯಕೀಯ ಪರೀಕ್ಷೆ ನಡೆಸಲು ವಶಕ್ಕೆ ಪಡೆಯಲಾಗಿದೆ.
ಇನ್ನೂ 1 ಪ್ರಕರಣದಲ್ಲಿ ವಿಚಾರಣೆ ಬಾಕಿ ಇದೆ:
ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿಯಲ್ಲಿ ದಾಖಲಾಗಿರುವ 4 ಪ್ರಕರಣಗಳ ಪೈಕಿ 3 ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಇದೀಗ 8 ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ನನ್ನು ಮತ್ತೆ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆಗಳಿವೆ. ಇದಾದ ನಂತರ 4ನೇ ಪ್ರಕರಣದಲ್ಲಿ ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ. ಪ್ರಜ್ವಲ್ ವಿರುದ್ಧದ 2ನೇ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದ ಎಸ್‌ಐಟಿ ಮಂಗಳವಾರಷ್ಟೆ (ಜೂ. 18) ಕೋರ್ಟ್‌ಗೆ ಹಾಜರುಪಡಿಸಿತ್ತು. ಕೋರ್ಟ್ ಪ್ರಜ್ವಲ್‌ರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.