Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Team Udayavani, May 2, 2024, 12:45 PM IST
ಬೆಂಗಳೂರು: ಹಾಸನದ ಲೈಂಗಿಕ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೆಡಿಎಸ್ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.
ಮಂಗಳವಾರ ಹಾಜರಾಗುವಂತೆ ನೋಟಿಸ್ ನೀಡಿದ ನಂತರ ತಂದೆ-ಮಗ (ರೇವಣ್ಣ-ಪ್ರಜ್ವಲ್) ಇಬ್ಬರೂ ಎಸ್‌ಐಟಿ ಮುಂದೆ ಹಾಜರಾಗಲು ವಿಫಲವಾದ ನಂತರ ಈ ಬೆಳವಣಿಗೆ ನಡೆದಿದೆ.
ಸುತ್ತೋಲೆ ಹೊರಡಿಸಿರುವುದರಿಂದ, ಪ್ರಜ್ವಲ್ ಅವರು ದೇಶಕ್ಕೆ ಪ್ರವೇಶಿಸಿ ವಲಸೆ ಕೇಂದ್ರಗಳಲ್ಲಿ ವರದಿ ಮಾಡಿದ ತಕ್ಷಣ ಅವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಆ.28ರಂದು ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಪ್ರಜ್ವಲ್ ಹಾಗೂ ಆತನ ತಂದೆ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಶಂಕಿತ ಆರೋಪಿಗಳೆಂದು ಹೆಸರಿಸಲಾಗಿತ್ತು. ಆದರೆ, ಪ್ರಕರಣ ದಾಖಲಾಗುವ ಮುನ್ನವೇ ಪ್ರಜ್ವಲ್ ದೇಶ ತೊರೆದು ಜರ್ಮನಿಗೆ ತೆರಳಿದ್ದಾಗಿ ಎಂದು ವರದಿಯಾಗಿದೆ.
ಸರ್ಕಾರವು ಬಳಿಕ ಆರೋಪಗಳ ತನಿಖೆಗಾಗಿ ಅಪರಾಧ ತನಿಖಾ ಇಲಾಖೆ (ಸಿಐಡಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಬಿ ಕೆ ಸಿಂಗ್ ನೇತೃತ್ವದಲ್ಲಿ ಎಸ್‌ಐಟಿಯನ್ನು ಸ್ಥಾಪಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.