ಮನೆ ಬಾಗಿಲಿಗೆ ಪಿಂಚಣಿ: 3.52 ಲಕ್ಷ ಮಂದಿಗೆ ಆದೇಶ ಪತ್ರ
Team Udayavani, Sep 10, 2021, 7:20 AM IST
ಬೆಂಗಳೂರು: ಅರವತ್ತು ವರ್ಷ ಮೇಲ್ಪಟ್ಟವರು ವೃದ್ಧಾಪ್ಯ ವೇತನಕ್ಕಾಗಿ ಅರ್ಜಿ ಹಿಡಿದು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೊಳಿಸಲಾದ “ಮನೆ ಬಾಗಿಲಿಗೆ ಪಿಂಚಣಿ’ಯಡಿ 3.52 ಲಕ್ಷ ಜನರಿಗೆ ಸೌಲಭ್ಯ ದೊರೆಯಲಿದೆ.
ಯೋಜನೆ ಪ್ರಾರಂಭವಾದ ಒಂದು ವರ್ಷದಲ್ಲಿ ಈವರೆಗೆ 2.30 ಲಕ್ಷ ಜನರಿಗೆ “ಮನೆ ಬಾಗಿಲಿಗೆ ಪಿಂಚಣಿ’ ಆದೇಶ ಪತ್ರ ದೊರೆತಿದ್ದು, ಪ್ರಸಕ್ತ ವರ್ಷ 1.22 ಲಕ್ಷ ಮಂದಿಯನ್ನು ತಲುಪಲು ಕಂದಾಯ ಇಲಾಖೆ ಸಜ್ಜಾಗಿದೆ.
ಬೋಗಸ್ ಹಾಗೂ ಮಧ್ಯವರ್ತಿಗಳ ಕಾಟ ತಪ್ಪಿಸುವ ದೃಷ್ಟಿಯಿಂದ ರೂಪಿಸಿರುವ ಈ ಯೋಜನೆಯಡಿ ಪ್ರತಿ ಗ್ರಾಮದಲ್ಲೂ ಗ್ರಾಮ ಲೆಕ್ಕಿಗರು ಮನೆ ಮನೆಗೆ ಹೋಗಿ 60 ವರ್ಷ ಮೇಲ್ಪಟ್ಟವರ ಆಧಾರ್ ಹಾಗೂ ಪಡಿತರ ಚೀಟಿ ಮಾಹಿತಿ ಸಂಗ್ರಹಿಸಿ ಭಾವಚಿತ್ರ ಹಿಡಿದು ಅಲ್ಲೇ ಅಪ್‌ಲೋಡ್ ಮಾಡುತ್ತಿದ್ದು, 1.22 ಲಕ್ಷ ಮಂದಿಗೆ ಪಿಂಚಣಿ ಆದೇಶ ಪತ್ರ ತಲುಪಿಸಲು ಪಟ್ಟಿ ಸಿದ್ಧವಾಗುತ್ತಿದೆ. ಅಂಥವರ ಬ್ಯಾಂಕ್ ಖಾತೆಗೆ ನೇರವಾಗಿ ಪಿಂಚಣಿ ಜಮೆ ಆಗಲಿದೆ ಹಾಗೂ ಫಲಾನುಭವಿ ಅಥವಾ ಅವರ ಕುಟುಂಬ ಸದಸ್ಯರಿಗೆ ಎಸ್‌ಎಂಎಸ್ ಸಂದೇಶವೂ ರವಾನೆಯಾಗಲಿದೆ.
68 ಲಕ್ಷ ಜನರಿಗೆ ಪಿಂಚಣಿ :
ಸಾಮಾಜಿಕ ಭದ್ರತಾ ಯೋಜನೆಡಿ ವೃದ್ಧಾಪ್ಯ, ವಿಧವಾ, ವಿಕಲಚೇತನ ಸಹಿತ 68 ಲಕ್ಷ ಜನರಿಗೆ ಪ್ರತಿ ತಿಂಗಳು ಪಿಂಚಣಿ ನೀಡಲಾಗುತ್ತಿದ್ದು, ಒಂದೇ ಹೆಸರಿನಲ್ಲಿ ಮೂರ್‍ನಾಲ್ಕು ಕಡೆ ಪಿಂಚಣಿ ಪಡೆಯುತ್ತಿದ್ದ 4 ಲಕ್ಷ ಬೋಗಸ್ ಪ್ರಕರಣಗಳನ್ನು ಪತ್ತೆ ಮಾಡಿ ರದ್ದುಪಡಿಸಿದ್ದರಿಂದ 400 ಕೋಟಿ ರೂ.ವರೆಗೆ ಉಳಿತಾಯವಾಗಿದೆ. ಆ ಮೊತ್ತವನ್ನು ಹೊಸದಾಗಿ ಪಟ್ಟಿಗೆ ಸೇರುವವರಿಗೆ ಪಿಂಚಣಿ ನೀಡಲು ಬಳಸಲಾಗುತ್ತಿದೆ.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಮತ್ತೆ ಆರಂಭ :
ಈ ಮಧ್ಯೆ, ಗ್ರಾಮೀಣ ಭಾಗದಲ್ಲಿ ಸ್ಥಳದಲ್ಲಿಯೇ ಅರ್ಜಿಗಳನ್ನು ಇತ್ಯರ್ಥಪಡಿಸುವ ಉದ್ದೇಶದಿಂದ ಪ್ರಾರಂಭಿಸಲಾಗಿದ್ದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ’ಯನ್ನು ಮತ್ತೆ ಆರಂಭಿಸಲು ಸೂಚನೆ ನೀಡಲಾಗಿದೆ. ವಿಧಾನಮಂಡಲ ಅಧಿವೇಶನ ಮುಗಿದ ತತ್‌ಕ್ಷಣ ಅದಕ್ಕೆ ಚಾಲನೆ ಸಿಗಬಹುದು ಎಂದು ಹೇಳಲಾಗಿದೆ.
ಮನೆ ಬಾಗಿಲಿಗೆ ಪಿಂಚಣಿ ಹಿರಿಯ ನಾಗರಿಕರ ಪಾಲಿಗೆ ವರದಾನ. ಇಲಾಖೆ ಅಧಿಕಾರಿಗಳೇ 60 ವರ್ಷ ಮೇಲ್ಪಟ್ಟವರ ಮನೆ ಬಾಗಿಲಿಗೆ ಹೋಗಿ ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿ ಪರಿಶೀಲಿಸಿ ಸ್ಥಳದಲ್ಲೇ ಪಿಂಚಣಿ ಮಂಜೂರಾತಿ ಆದೇಶ ನೀಡುತ್ತಿದ್ದಾರೆ. ಇದೊಂದು ಕ್ರಾಂತಿಕಾರಕ ನಿರ್ಧಾರವಾಗಿದ್ದು, ಬೋಗಸ್ ಹಾಗೂ ಮಧ್ಯವರ್ತಿಗಳ ಕಾಟ ತಪ್ಪಿಸಿ ನೈಜ ಫಲಾನುಭವಿಗಳಿಗೆ ಪಿಂಚಣಿ ತಲುಪುವಂತೆ ಮಾಡುವುದು ನಮ್ಮ ಉದ್ದೇಶ. – ಆರ್.ಅಶೋಕ್, ಕಂದಾಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.