40% ಕಮಿಷನ್ ಸರ್ಕಾರದ ಆಡಳಿತದಿಂದ ಜನತೆ ರೋಸಿ ಹೋಗಿದ್ದಾರೆ: ಸಿದ್ದರಾಮಯ್ಯ
ಬಿಜೆಪಿ ಸರ್ಕಾರ ಕಿತ್ತೂಗೆಯಲು ಜನ ಸಂಕಲ್ಪ
Team Udayavani, Nov 7, 2022, 6:45 AM IST
ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತೂಗೆಯಲು ಜನರು ಈಗಾಗಲೇ ಸಂಕಲ್ಪ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದರು.
ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಸರ್ವೋದಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದಿಂದ ಮುಳುಗಿ ಹೋಗಿರುವ ಬಿಜೆಪಿ ಇದೀಗ ಜನಸಂಕಲ್ಪ ಯಾತ್ರೆ ನಡೆಸುತ್ತಿದೆ. ಆದರೆ ಶೇ.40% ಕಮಿಷನ್ ಸರ್ಕಾರದ ಆಡಳಿತ ವೈಖರಿಯಿಂದ ನಾಡಿನ ಜನತೆ ರೋಸಿ ಹೋಗಿದ್ದು ಬಿಜೆಪಿಯನ್ನು ಕಿತ್ತೂಗೆಯಲು ಜನರು ಸಂಕಲ್ಪ ಮಾಡಿದ್ದಾರೆಂದು ವಾಗ್ಧಾಳಿ ನಡೆಸಿದರು.
ಇಂತಹ ಭಂಡ ಸರ್ಕಾರವನ್ನು ನಾವೆಂದೂ ನೋಡಿರಲಿಲ್ಲ. ಕಮಿಷನ್ ಇಲ್ಲದೆ ಯಾವ ಕೆಲಸವೂ ನಡೆಯುತ್ತಿಲ್ಲ. ಈಗಾಗಲೇ ಕಂಟ್ರಾಕ್ಟರ್ ಅಸೋಸಿಯೇಷನ್ ಪರ್ಸೆಂಟೆಜ್ ಬಗ್ಗೆ ಪ್ರಧಾನಿ ಮೋದಿ ಅವರಿಗೆ ದೂರು ನೀಡಿದೆ. ಆದರೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಪ್ರಧಾನಿಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಂಟ್ರಾಕ್ಟರ್ ಸಂತೋಷ್ ಪಾಟೀಲ್ ಕೂಡ ಆತ್ಮಹತ್ಯೆ ಪತ್ರ ಬರೆದು ಸಾವೀಗಿಡಾದ. ಈಗ ಮತ್ತೊಬ್ಬರು ದಯಾಮರಣಕ್ಕಾಗಿ ಮನವಿ ಮಾಡಿದ್ದಾರೆ ಎಂದರು.
ಇದರ ಬೆನ್ನಲ್ಲೇ ಇನ್ಸ್‌ಪೆಕ್ಟರ್ ನಂದೀಶ್ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ. ಆತ ಎಷ್ಟು ಹಣ ನೀಡಿದ್ದ ಎಂಬುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಚಿವರೇ ಹೇಳಿದ್ದಾರೆ ಎಂದು ಟೀಕಿಸಿದರು.
ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಿದೆ: ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಶಕ್ತಿ ಬಂದಿದೆ. ನಮ್ಮಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ನಾವೆಲ್ಲರೂ ಒಟ್ಟಾಗಿ ಮತ್ತೆ ಹೋರಾಟ ನಡೆಸಿ ಕಾಂಗ್ರೆಸ್ ಅಧಿಕಾರಕ್ಕೆ ತಂದೇ ತರುತ್ತೇವೆಂದು ಸಂಕಲ್ಪ ಮಾಡಿದರು. ಬಿಜೆಪಿ ಅಧಿಕಾರಕ್ಕೆ ಬಂದು ಮೂರು ವರ್ಷ ಆಯಿತು, ಆದರೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ರೈತರ, ಬಡವರ, ದೀನ ದಲಿತರ ವಿರೋಧಿ ಕೋಮುವಾದ ಬಿಜೆಪಿಯನ್ನು ಕಿತ್ತೂಗೆಯಲು ಕಾಂಗ್ರೆಸ್ ಕಾರ್ಯಕರ್ತರು ಕೂಡ ಪಣ ತೊಟ್ಟಿದ್ದಾರೆ ಎಂದರು.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಮಿಕರ ಮಗನಾಗಿ, ಶೋಷಿತ ವರ್ಗದ ಧ್ವನಿಯಾಗಿ ಬ್ಲಾಕ್ ಕಾಂಗ್ರೆಸ್ ಮಟ್ಟದಿಂದ ರಾಷ್ಟ್ರೀಯ ಕಾಂಗ್ರೆಸ್‌ವರೆಗೂ ಕೆಲಸ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ರಾಜ್ಯವಷ್ಟೇ ಅಲ್ಲ, ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ ಎಂದರು. ರಾಜ್ಯದ 40 ಪರ್ಸೆಂಟೇಜ್ ಸರ್ಕಾರವನ್ನು ಕಿತ್ತೂಗೆಯುವ ನಿಟ್ಟಿನಲ್ಲಿ ಮತ್ತಷ್ಟು ಕೆಲಸ ಮಾಡಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಪ್ರತಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಈ ಹಿಂದೆ ಬಿಜೆಪಿಯವರು ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವವಿಲ್ಲ ಎಂದು ಟೀಕಿಸುತ್ತಿದ್ದರು. ಆದರೆ ಅದಕ್ಕೆ ಈಗ ಉತ್ತರ ದೊರೆತಿದೆ. ಬಿಜೆಪಿಯವರಿಗೆ ಚುನಾವಣೆ ಮೂಲಕ ಅಧ್ಯಕ್ಷರನ್ನು ಆಯ್ಕೆ ಮಾಡುವ ತಾಕತ್ತು ಇಲ್ಲವಾಗಿದೆ ಎಂದು ವಾಗ್ಧಾಳಿ ನಡೆಸಿದರು.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ಕಾರ್ಮಿಕ ಸಚಿವರಾಗಿ ಉತ್ತಮ ಕೆಲಸ ಮಾಡಿದರು. ಇದೀಗ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದು ಮುಂದಿನ ದಿನಗಳಲ್ಲಿ ಯುಪಿಎ ಮಾದರಿಯ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಸಲೀಂ ಅಹಮದ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿ.ಎಸ್.ಉಗ್ರಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಸೇರಿ ಮಾಜಿ ಸಚಿವರು, ಹಾಲಿ ಕಾಂಗ್ರೆಸ್ ಶಾಸಕರು ಉಪಸ್ಥಿತರಿದ್ದರು.
ಬಿಜೆಪಿ ಸರ್ಕಾರರಿಂದ ಕಾಲಹರಣ: ಡಿಕೆಶಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬರುವ ಬಿಜೆಪಿ ಸರ್ಕಾರ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿತ್ತು. ಜತೆಗೆ ಡಬಲ್ ಎಂಜಿನ್ ಸರ್ಕಾರ ರೈತರ ಆದಾಯ ದ್ವಿಗುಣ ಮಾಡುವ ಆಶ್ವಾಸನೆ ನೀಡಿತ್ತು. ಆದರೆ ಸೋಲಾರ್ ಸಬ್ಸಿಡಿ ಬಗ್ಗೆ ಭರವಸೆ ನೀಡಿತ್ತು. ಆದರೆ ಈಗ ನಾಡಿನ ಜನತೆಗೆ ನೀಡಿದ ಭರವಸೆ ಈಡೇರಿಸದೆ ಕೇವಲ ಕಾಲಹರಣ ಮಾಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.