Nikhil kumaraswamy ನಾಮಪತ್ರಕ್ಕೆ ಜನ: 96 ಬಸ್‌ ಮಾಲಕರ ವಿರುದ್ಧ ಕ್ರಮ

ನಮ್ಮ ಕಾರ್ಯಕ್ರಮಕ್ಕೆ ಜನರು ಬರಬಾರದಾ?: ವಾಹನಗಳಿಗೆ ನೋಟಿಸ್‌ಗೆ ಎಚ್‌ಡಿಕೆ ಕಿಡಿ

Team Udayavani, Oct 27, 2024, 6:42 AM IST

NIkhil KUMMI

ರಾಮನಗರ: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಅಖಾಡ ರಂಗೇರುತ್ತಿದ್ದು ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ರಾಜಕೀಯ ಪಕ್ಷಗಳ ವಿರುದ್ಧ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸುತ್ತಿದ್ದಾರೆ.

ಶುಕ್ರವಾರ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಅಂಗವಾಗಿ ಅನುಮತಿ ಪಡೆಯದೆ ಖಾಸಗಿ ಬಸ್‌ಗಳಲ್ಲಿ ಜನರನ್ನು ಕರೆತಲಾಗಿದೆ ಎಂದು ಚುನಾವಣಾಧಿ ಕಾರಿಗಳು ಚನ್ನಪಟ್ಟಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ 96 ಖಾಸಗಿ ಬಸ್‌ಗಳ ಮಾಲೀಕರು ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ದೂರು ದಾಖಲಾಗಿದೆ.

ಚುನಾವಣಾಧಿಕಾರಿಗಳು ದಾಖಲಿಸಿದ ದೂರು, ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್‌ ಮಧ್ಯೆ ಜಟಾಪಟಿಗೆ ಕಾರಣವಾಗಿದೆ.

ಯೋಗೇಶ್ವರ್‌ ಕಾರು ತಪಾಸಣೆ
ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್‌ ಅವರ ಕಾರನ್ನು ಚುನಾವಣಾಧಿಕಾರಿಗಳು ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿಯಲ್ಲಿ ತಪಾಸಣೆ ಮಾಡಿದರು. ತಿಟ್ಟಮಾರನಹಳ್ಳಿಯ ಚೇತನಾ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಪಾಲ್ಗೊಳ್ಳಲು ಯೋಗೇಶ್ವರ್‌ ತಮ್ಮ ಕಾರಿನಲ್ಲಿ ಆಗಮಿಸಿದ್ದರು. ಈ ಸಂದರ್ಭ ಚುನಾವಣಾಧಿಕಾರಿಗಳು ಕಾರಿನಲ್ಲಿದ್ದ ಬ್ಯಾಗ್‌ ಹಾಗೂ ಇತರ ವಸ್ತುಗಳನ್ನು ಪರಿಶೀಲಿಸಿದರು. ನೀತಿಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಯಾವುದೇ ವಸ್ತುಗಳು ಸಿಗಲಿಲ್ಲ.

ನಮ್ಮ ಕಾರ್ಯಕ್ರಮಕ್ಕೆ ಜನರು ಬರಬಾರದಾ?: ವಾಹನಗಳಿಗೆ ನೋಟಿಸ್‌ಗೆ ಎಚ್‌ಡಿಕೆ ಕಿಡಿ
ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಪಕ್ಷ ವಿಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಆದರೆ ನಾವು ಇದಕ್ಕೆಲ್ಲ ಹೆದರುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖೀಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಆಗ ಕ್ಷೇತ್ರದ ಕಾರ್ಯಕರ್ತರು, ಸಾರ್ವಜನಿಕರು ದೊಡ್ಡ ಪ್ರಮಾಣದಲ್ಲಿ ಸೇರಿದ್ದರು. ಇದು ಕಾಂಗ್ರೆಸ್‌ ನಾಯಕರ ಕಣ್ಣು ಕುಕ್ಕಿದೆ ಎಂದು ದೂರಿದರು.

ಜನ ಕಾರ್ಯಕ್ರಮಕ್ಕೆ ಬರಬಾರದಾ? ಶುಕ್ರವಾರ ನಾಮಪತ್ರ ಸಲ್ಲಿಕೆಯ ಅನಂತರ ಒಂದು ನೋಟಿಸ್‌ ಕೊಟ್ಟಿದ್ದಾರೆ. ಇವರು ಬರುವವರ ಮೇಲೆಲ್ಲ ಕೇಸ್‌ ಹಾಕಿಕೊಂಡು ಚುನಾವಣೆ ನಡೆಸಲು ಹೊರಟಿದ್ದಾರೆ. ಶುಕ್ರವಾರ ನಮ್ಮ ಪಕ್ಷದ ಅಧ್ಯಕ್ಷರಿಗೆ ನೋಟಿಸ್‌ ಕೊಟ್ಟಿದ್ದಾರೆ. ಸರಕಾರ ಈ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ನೋಟಿಸ್‌ ನೀಡಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯಾದಿಯಾಗಿ ಕಾಂಗ್ರೆಸ್‌ ಕಡೆಯಿಂದ ಎಲ್ಲರೂ ಚನ್ನಪಟ್ಟಣಕ್ಕೆ ಹೋಗಿದ್ದರಲ್ಲವೇ? ಹಾಗಿದ್ದರೆ ಅವರ ಸಭೆಗಳಿಗೆ ಬಂದ ಜನರಿಗೆ ವಾಹನದ ವ್ಯವಸ್ಥೆ ಮಾಡಿರಲಿಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಶನಿವಾರ ನಮ್ಮ ಕಾರ್ಯಕ್ರಮಕ್ಕೆ ಬಂದವರ ವೀಡಿಯೋ ಮಾಡಿಕೊಂಡು, ಅಧಿಕಾರಿಗಳಿಗೆ ಹೇಳಿ ಕೇಸ್‌ ಹಾಕಿಸಿ ಯಾವ ಚುನಾವಣೆ ನಡೆಸಲು ಹೋಗುತ್ತಿದ್ದಾರೆ ಇವರು? ಸರ್ಕಾರ ಅಧಿಕಾರ ದುರುಪಯೋಗ ಮಾಡುತ್ತಿದೆ. ಇದೆಲ್ಲವನ್ನೂ ನಾವು ಮೊದಲೇ ನಿರೀಕ್ಷೆ ಮಾಡಿದ್ದೆವು ಎಂದು ಅವರು ಹೇಳಿದರು.

ಕುಮಾರಸ್ವಾಮಿಯವರ ಭಾವನಾತ್ಮಕ ಮಾತು ಮತ್ತು ಕಣ್ಣೀರು ಜನರಿಗೆ ಬೇಸರವಾಗಿ ಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇವರು ಎಂದೂ ಜನರ ಮುಂದೆ ಕಣ್ಣೀರೇ ಹಾಕಿಲ್ಲವೇ? ಹೌದು, ನಾನು ಜನರ ಕಷ್ಟ ನೋಡಿ ಕಣ್ಣೀರು ಹಾಕ್ತಿದ್ದೇನೆ. ಇವರು ಅಧಿಕಾರ, ಹಣದ ದುರ್ಬಳಕೆಯಿಂದ ಗೆ¨ªಾಗಿದೆ ಎಂದು ಬೀಗುತ್ತಿ¨ªಾರೆ. ಇವರಿಗೆ ಚನ್ನಪಟ್ಟಣದಲ್ಲಿ ನಿಲ್ಲಿಸೋಕೆ ಕಾಂಗ್ರೆಸ್‌ ಪಕ್ಷದಿಂದ ಒಬ್ಬ ಅಭ್ಯರ್ಥಿ ಸಿಗಲಿಲ್ಲ. ಬಿಜೆಪಿಯಿಂದ ಅಭ್ಯರ್ಥಿ ಹೈಜಾಕ್‌ ಮಾಡಿಕೊಂಡು ಹೋಗಿದ್ದಾರೆ. ಇಷ್ಟಾದರೂ ಕುತಂತ್ರ ಬೇರೆ ಮಾಡಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ನೀತಿ ಸಂಹಿತೆ ಗೊತ್ತಿಲ್ಲದಿದ್ದರೆ ಪ್ರಧಾನಿ ಬಳಿ ಕೇಳಲಿ: ಡಿಕೆಸು
ಸಾಮಾನ್ಯ ಪರಿಜ್ಞಾನ ಇಲ್ಲದೆ ಕೇಂದ್ರ ಮಂತ್ರಿಯಾಗಿರುವ ಕುಮಾರಸ್ವಾಮಿ ಆರೋಪ ಮಾಡುವುದನ್ನು ಬಿಟ್ಟು ಚುನಾವಣೆ ಎದುರಿಸಲಿ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ವಾಗ್ಧಾಳಿ ನಡೆಸಿದರು.

ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, ಕುಮಾರಸ್ವಾಮಿ ಅವರು ಅನೇಕ ಚುನಾವಣೆಗಳನ್ನು ಮಾಡಿದ್ದಾರೆ. ನೀತಿ ಸಂಹಿತೆ ಬಗ್ಗೆ ಅವರಿಗೂ ಜ್ಞಾನವಿದೆ. ನೀತಿ ಸಂಹಿತೆ ಸಮಯದಲ್ಲಿ ಯಾರು ಯಾವ ಪಾತ್ರ ವಹಿಸುತ್ತಾರೆ, ಪ್ರಕ್ರಿಯೆ ಹೇಗಿರುತ್ತದೆ ಎಂದು ಎಲ್ಲರಿಗೂ ಗೊತ್ತಿದೆ. ನೀತಿ ಸಂಹಿತೆ ಉಲ್ಲಂಘನೆ ಆಗಿದ್ದರೆ ಅದು ಚುನಾವಣಾಧಿಕಾರಿಗಳಿಗೆ ಸಂಬಂಧಪಟ್ಟ ವಿಚಾರ, ನಮಗೆ ಸಂಬಂಧಿಸುವುದಿಲ್ಲ ಎಂದರು. ಬಸ್‌ಗಳಲ್ಲಿ ಜನರನ್ನು ಕರೆ ತಂದಿದ್ದರೆ ಅದಕ್ಕೆ ಲೆಕ್ಕ ಕೊಡಬೇಕು, ಅನುಮತಿ ಪಡೆಯಬೇಕು ಎಂಬ ಸಾಮಾನ್ಯ ಜ್ಞಾನ ಕೇಂದ್ರ ಸಚಿವರಿಗೆ ಇಲ್ಲವಾದರೆ ಹೇಗೆ? ಗೊತ್ತಿಲ್ಲವಾದರೆ ಹೋಗಿ ಪ್ರಧಾನಮಂತ್ರಿ ಬಳಿ ಕೇಳಲಿ ಎಂದು ಲೇವಡಿ ಮಾಡಿದರು.

ಟಾಪ್ ನ್ಯೂಸ್

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.