ಗಾಂಧೀಜಿಯನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ಮಂದಿ ಹೆಚ್ಚಾಗಿದ್ದಾರೆ: ಸಿದ್ದರಾಮಯ್ಯ
Team Udayavani, Jan 30, 2021, 1:32 PM IST
ಬೆಂಗಳೂರು: ಮಹಾತ್ಮಾ ಗಾಂಧಿಯವರನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದರು.
ಮಹಾತ್ಮ ಗಾಂಧಿಯವರ ಪುಣ್ಯ ಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಹಾತ್ಮಗಾಂಧೀಜಿಯವರು ಹುತಾತ್ಮರಾದ ದಿನವನ್ನು ನಾವು ಹುತಾತ್ಮರ ದಿನವಾಗಿ ಆಚರಿಸುತ್ತಿದ್ದೇವೆ. ಈ ಮೂಲಕ ಸ್ವಾತಂತ್ರ್ಯ ಹೋರಾಟಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸಾವಿರಾರು ದೇಶಭಕ್ತರಿಗೆ ಗೌರವವನ್ನು ಅರ್ಪಿಸುತ್ತಿದ್ದೇವೆ. ಇವರಲ್ಲಿ ಬಹಳಷ್ಟು ಹುತಾತ್ಮರು ಅನಾಮಿಕರಾಗಿಯೇ ಉಳಿದಿದ್ದಾರೆ. ಅವರ ನಿಸ್ವಾರ್ಥವಾದ ದೇಶಭಕ್ತಿ ನಮಗೆಲ್ಲರಿಗೂ ಆದರ್ಶವಾಗಬೇಕು. ಮಹಾತ್ಮ ಗಾಂಧೀಜಿಯವರು ಯಾರನ್ನೂ ಶತ್ರುಗಳು ತಿಳಿದು ಅವರ ವಿರುದ್ಧ ಹೋರಾಡಿದರೋ, ಅವರು ಗಾಂಧೀಜಿಯವರನ್ನು ಹತ್ಯೆಮಾಡಲಿಲ್ಲ. ದೇಶಪ್ರೇಮದ ಪಾಠ ಹೇಳುವ ಸಂಘಟನೆಯ ನಾಯಕ ನಾಥುರಾಮ್ ಗೋಡ್ಸೆ ಎಂಬ ದೇಶದ್ರೋಹಿ ಗಾಂಧೀಜಿಯವರನ್ನು ಹತ್ಯೆಮಾಡಿದ್ದ ಎಂಬುದನ್ನು ನಾವು ಮರೆಯಬಾರದು ಎಂದರು.
ಇದನ್ನೂ ಓದಿ:ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವೀಕ್ಷಣೆ ವಿಚಾರ:ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ವಾಗ್ವಾದ
ಗಾಂಧೀಜಿ ಕಾಂಗ್ರೆಸ್ ಪಕ್ಷದ ನಾಯಕರಾಗಿ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ್ದರೂ ಅಂತರಂಗದಲ್ಲಿ ಅವರೊಬ್ಬ ಸಮಾಜ ಸುಧಾರಕರಾಗಿದ್ದರು. ಪ್ರೀತಿ, ಸೋದರತೆ, ಅನುಕಂಪ, ಸತ್ಯ ಮತ್ತು ಅಹಿಂಸೆ ಎಂಬ ಪಂಚ ಸೂತ್ರಗಳ ಮೇಲೆ ತಮ್ಮ ಜೀವನ ಪಯಣ ನಡೆಸಿದ ಗಾಂಧೀಜಿ ಮಹಾನ್ ಸಮಾಜ ಪರಿವರ್ತಕ. ಗಾಂಧೀಜಿ ಜೀವನ ಮತ್ತು ಸಾಧನೆ ಹೇಗೆ ನಮ್ಮ ಆದರ್ಶಪ್ರಾಯವೋ, ಅದೇ ರೀತಿ ಅವರ ಸಾವು ಕೂಡಾ ನಮಗೆ ಪಾಠವಾಗಿದೆ. ಗಾಂಧೀಜಿಯವರು ಕೇವಲ ಸ್ವಾತಂತ್ರ್ಯಕ್ಕಾಗಿ, ಅಸ್ಪೃರ್ಶತೆಯ ನಿವಾರಣೆಗಾಗಿ, ಗ್ರಾಮೀಣ ಪ್ರದೇಶದ ಅಭಿವೃದ್ದಿಗಾಗಿ ಮಾತ್ರ ಹೋರಾಡಲಿಲ್ಲ. ಅವರು ಬಹುಮುಖ್ಯವಾದ ಕೋಮು ಸಾಮರಸ್ಯಕ್ಕಾಗಿ ಕೂಡಾ ತನ್ನ ಕೊನೆ ಉಸಿರಿರುವ ತನಕ ಹೋರಾಡಿದರು. ಈ ತನ್ನ ಹೋರಾಟಕ್ಕಾಗಿಯೇ ತನ್ನ ಪ್ರಾಣವನ್ನು ಕಳೆದುಕೊಂಡರು ಎಂದು ಸಿದ್ದರಾಮಯ್ಯ ಹೇಳಿದರು.
ಆದರೆ ಗಾಂಧೀಜಿ ಅವರು ಯಾವ ಉದ್ದೇಶಕ್ಕಾಗಿ ಹೋರಾಡಿದರೋ, ಆ ಕೋಮುಸೌಹಾರ್ದತೆಯ ಸ್ಥಾಪನೆಯ ಕಾರ್ಯ ಇನ್ನೂ ಅಪೂರ್ಣವಾಗಿಯೇ ಉಳಿದಿದೆ. ಗಾಂಧೀಜಿಯವರ ಚಿಂತನೆಗಳು ಒಂದೊಂದಾಗಿ ನಮ್ಮ ಕಣ್ಣಮುಂದೆಯೇ ನಾಶಗೊಳಿಸುವ ಪ್ರಯತ್ನ ನಡೆಯುತ್ತಿದೆ. ಧರ್ಮಧರ್ಮಗಳ ನಡುವೆ ವೈಮನಸ್ಸು ಹುಟ್ಟಿಸಿ, ಗಲಭೆ ಸೃಷ್ಟಿಸಿ ಅದರ ಮೂಲಕ ರಾಜಕೀಯ ಲಾಭ ಪಡೆಯುವ ಹುನ್ನಾರ ನಡೆದಿದೆ ಎಂದು ಟೀಕಿಸಿದರು.
ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಬಾವುಟ ಹಾರಿಸಿದ್ದು ಬಿಜೆಪಿ ಕಾರ್ಯಕರ್ತರೇ: ಐವನ್ ಡಿಸೋಜ
ಸ್ವಾತಂತ್ರ್ಯ ಹೋರಾಟದ ಮೂಲಕ ಬ್ರಿಟಿಷರ ಗುಲಾಮಗಿರಿಯಿಂದ ನಮ್ಮನ್ನು ಬಿಡುಗಡೆಗೊಳಿಸಿ ನಮಗೆ ರಾಜಕೀಯ ಸ್ವಾತಂತ್ರ್ಯವನ್ನು ನಮಗೆ ಗಳಿಸಿಕೊಟ್ಟರು. ಈಗ ನಾವು ನವ ವಸಾಹತುಷಾಹಿಗಳ ವಿರುದ್ಧ ಹೋರಾಡಿ ಸಾಮಾಜಿಕ ಸ್ವಾತಂತ್ರ್ಯವನ್ನು ಪಡೆಯಲು ಇನ್ನೊಂದು ಸ್ವಾತಂತ್ರ್ಯಹೋರಾಟ ನಡೆಸಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಇಂದಿನ ಭಾರತದಲ್ಲಿ ಅತ್ಯಂತ ಶೋಷಿತ ಸಮುದಾಯಗಳಾದ ರೈತರು, ಕಾರ್ಮಿಕರು, ಮಹಿಳೆಯರು, ದಲಿತರು ಮಾತ್ರವಲ್ಲ ಈ ದೇಶದ ಯಾವ ಸಾಮಾನ್ಯ ಮನುಷ್ಯ ಕೂಡಾ ಸುರಕ್ಷಿತವಾಗಿಲ್ಲ. ಈ ಅನ್ಯಾಯ, ಶೋಷಣೆ, ಅವಮಾನದ ವಿರುದ್ದ ನಾವು ದನಿ ಎತ್ತದೆ ಹೋದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ. ಇಂದು ಕೃಷಿ ವಿರೋಧಿ ಕಾನೂನುಗಳನ್ನು ವಿರೋಧಿಸಿ ಹೋರಾಡುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ದೌರ್ಜನ್ಯ ನಡೆಸುತ್ತಿದೆ. ಇದು ಹಿಂಸೆಯನ್ನು ಕೂಡಾ ಅಹಿಂಸೆಯ ಮೂಲಕ ಹೋರಾಡಿ ಗೆದ್ದ ಮಹಾತ್ಮ ಗಾಂಧೀಜಿ ಅವರಿಗೆ ತೋರುವ ಅಗೌರವವಾಗಿದೆ ಎಂದರು.
ಪ್ರಸನ್ನವದನ ಪ್ರಧಾನಿ: ರೈತರು ಎರಡು ತಿಂಗಳಿನಿಂದ ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೂ ಪ್ರಧಾನಿಯವರು ಏನೂ ನಡೆದಿಲ್ಲ ಎಂಬಂತೆ ಪ್ರಸನ್ನವದನರಾಗಿದ್ದಾರೆ. ಕಾಯಿದೆಗಳು ರೈತರ ಪರ ಎಂದು ರಾಷ್ಟ್ರಪತಿಯವರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ರಾಷ್ಡ್ರಪತಿಗಳಿಂದ ಸುಳ್ಳು ಹೇಳಿಸಿದೆ ಎಂದು ಸಿದ್ದರಾಮಯ್ಯ ಅವರು ಟೀಕಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.