ಒಂದೇ ಕೊಠಡಿಯಲ್ಲಿ ಇಬ್ಬರು ಅಧಿಕಾರಿಗಳ ಕಾರ್ಯನಿರ್ವಹಣೆ
Team Udayavani, Jan 25, 2020, 3:00 AM IST
ಮಂಡ್ಯ: ಇಲ್ಲಿನ ಸುಭಾಷ್‌ನಗರದ ಸಹಕಾರ ಸಂಘಗಳ ಉಪ ನಿಬಂಧಕರ ಕುರ್ಚಿಗೆ ಇಬ್ಬರು ಅಧಿಕಾರಿಗಳ ನಡುವೆ ಕಿತ್ತಾಟ ಏರ್ಪಟ್ಟಿದ್ದು, ಪರಸ್ಪರ ನಿಂದಿಸಿಕೊಳ್ಳುತ್ತಲೇ ಒಂದೇ ಕೊಠಡಿಯಲ್ಲಿ ಕುಳಿತು ಕಡತ ಪರಿಶೀಲಿಸುತ್ತಾ ಕರ್ತವ್ಯ ನಿರ್ವಹಿಸುತ್ತಿರುವುದು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ.
ಸಹಕಾರ ಸಂಘಗಳ ಉಪ ನಿಬಂಧಕರ ಹುದ್ದೆಗೆ ಸರ್ಕಾರದಿಂದ ವರ್ಗಾವಣೆಯಾಗಿರುವ ವಿಕ್ರಮರಾಜೇ ಅರಸ್, ಅಧಿಕಾರ ಸ್ವೀಕರಿಸಿ ಕರ್ತವ್ಯಕ್ಕೆ ಹಾಜರಾಗಿದ್ದರೆ, ವರ್ಗಾವಣೆಗೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ ಬಿ.ಆರ್.ಕೃಷ್ಣಮೂರ್ತಿ ಕುರ್ಚಿಗಾಗಿ ಪೈಪೋಟಿ ನಡೆಸುತ್ತಿದ್ದಾರೆ.
ಆರೋಪವೊಂದರ ಹಿನ್ನೆಲೆಯಲ್ಲಿ ಇಲ್ಲಿನ ಸಹಾಯಕ ನಿಬಂಧಕ ಬಿ.ಆರ್.ಕೃಷ್ಣಮೂರ್ತಿ ಅವರನ್ನು ಚಾಮರಾಜನಗರಕ್ಕೆ ರಾಜ್ಯಸರ್ಕಾರ ವರ್ಗಾವಣೆ ಮಾಡಿತ್ತು. ಈ ಜಾಗಕ್ಕೆ ಮೈಸೂರು ಕಾಫಿ ಸಂಸ್ಕರಣ ಸಹಕಾರ ಸಂಘದಲ್ಲಿ ಸಹಾಯಕ ನಿಬಂಧಕರಾಗಿದ್ದ ವಿಕ್ರಮರಾಜೇ ಅರಸ್ ಅವರಿಗೆ ಬಡ್ತಿ ಜ.18ರಂದು ಆದೇಶ ಹೊರಡಿಸಿತ್ತು.
ವಿಕ್ರಮರಾಜೇ ಅರಸು ಜ.20ರಂದು ಕಚೇರಿಗೆ ಬಂದು ಅಧಿಕಾರ ವಹಿಸಿಕೊಂಡು ಕರ್ತವ್ಯ ನಿರ್ವಹಿಸಲು ಆರಂಭಿಸಿದರು. ಈ ನಡುವೆ, 5 ತಿಂಗಳ ಅಂತರದಲ್ಲಿ ವರ್ಗಾವಣೆ ಪ್ರಶ್ನಿಸಿ ಬಿ.ಆರ್.ಕೃಷ್ಣಮೂರ್ತಿ ಕೋರ್ಟ್ ಮೊರೆ ಹೋಗಿದ್ದರಿಂದ, ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸೂಚಿಸಿತ್ತು. ವರ್ಗಾವಣೆಗೆ ತಡೆಯಾಜ್ಞೆ ಸಿಕ್ಕಿರುವ ಕಾರಣ ಕೃಷ್ಣಮೂರ್ತಿ ಒಂದೇ ಕೊಠಡಿಯಲ್ಲಿ ಕುಳಿತು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಕಚೇರಿಯೊಳಗೆ ಗೊಂದಲದ ವಾತಾವರಣ ಸೃಷ್ಠಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.