ಬೆಳ್ತಂಗಡಿ: ಪಿಎಫ್‌ಐ ಜಿಲ್ಲಾ ಸಮಿತಿ ಸದಸ್ಯ ಹೈದರ್ ನೀರ್ಸಾಲ್ ಹೃದಯಾಘಾತದಿಂದ ನಿಧನ
Team Udayavani, Jun 22, 2022, 12:21 PM IST
ಬೆಳ್ತಂಗಡಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಜಿಲ್ಲಾ ಸಮಿತಿ ಸದಸ್ಯ, ಸಾಮಾಜಿಕ ಮುಂದಾಳು, ಸಂಘಟಕ ಹೈದರ್ ನೀರ್ಸಾಲ್(55) ಉಜಿರೆ ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಸರಕಾರದ ಸಿಎಸ್‌ಸಿ ಆನ್ಲೈನ್ ಕೇಂದ್ರವನ್ನೂ ನಡೆಸುತ್ತಿದ್ದ ಅವರು ಸಿಎಸ್‌ಸಿ ವಿಎಲ್‌ಇ ಸೊಸೈಟಿ ಬೆಳ್ತಂಗಡಿ ಭಾಗದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
ನಿರಂತರ ಕಾರ್ಯತತ್ಪರರಾಗಿಯೇ ಇರುತ್ತಿದ್ದ ಅವರು ಮಂಗಳವಾರ “ಗ್ರಾಮ ಒನ್” ಇದರ ಸಭೆಗಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ.
ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಜಿ ಅಧ್ಯಕ್ಷರಾಗಿದ್ದ ಅವರು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಶಿರ್ಲಾಲು ಮಸೀದಿ ಗೌರವಾಧ್ಯಕ್ಷರಾಗಿ, ತಾಲೂಕು ಮುಸ್ಲಿಂ ಒಕ್ಕೂಟ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.
ಇದನ್ನೂ ಓದಿ: ಮಂಗಳೂರಿನಿಂದ ಉಡುಪಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಬಾಣಸಿಗ
ಹೈದರ್ ನಿರ್ಸಾಲ್ ಅವರ ಮಯ್ಯತ್ ಇದೀಗ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದು, 3 ಗಂಟೆಗೆ ಅವರ ಮನೆಗೆ ತಲುಪಲಿದೆ. ಅಲ್ಲಿ ಅಂತಿಮ ವಿಧಿ ಪೂರೈಸಿ ಉಜಿರೆ ಹಳೆಪೇಟೆ ಮಸೀದಿಯ ಹೊರಾಂಗಣದಲ್ಲಿ ಸಾರ್ವಜನಿಕರಿಗೆ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸುವ್ಯವಸ್ಥೆಯ ದೃಷ್ಟಿಯಿಂದ ಎಲ್ಲರೂ ಅಲ್ಲಿಯೇ ಅಂತಿಮ ದರ್ಶನ ಪಡೆಯುವಂತೆ ಕುಟುಂಬದವರು ವಿನಂತಿಸಿದ್ದಾರೆ.
ಮೃತರು ತಾಯಿ, ಪತ್ಮಿ, ಓರ್ವ ಗಂಡು, ಮೂವರು ಹೆಣ್ಣು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರ ಈಗಾಗಲೇ ಮಂಗಳೂರಿನಿಂದ ಹೊರಟಿದ್ದು, ನೂರಾರು ವಾಹನಗಳ ಜಾಥದೊಂದಿಗೆ ಉಜಿರೆಯತ್ತ ಆಗಮಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.