ಸರ್ಕಾರಿ ಕಾಲೇಜುಗಳ ಪಿಜಿ ಕೋರ್ಸ್ ಶುಲ್ಕ ಪರಿಷ್ಕರಣೆ
Team Udayavani, Aug 8, 2019, 3:00 AM IST
ಬೆಂಗಳೂರು: ಪ್ರಸಕ್ತ ಸಾಲಿನಿಂದ ಸರ್ಕಾರಿ ಕಾಲೇಜುಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳ ಶುಲ್ಕ ಪರಿಷ್ಕರಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2019-20ನೇ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆರಂಭಿಸುತ್ತಿರುವ ವಿವಿಧ ಸ್ನಾತಕೋತ್ತರ ಕೋರ್ಸ್ಗಳ ಶುಲ್ಕವನ್ನು ಪರಿಷ್ಕರಿಸುವಂತೆ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಸರ್ಕಾರವು ಇಲಾಖೆಯ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದೆ.
ಎಂಬಿಎ ಹಾಗೂ ಎಂಸಿಎ ಕೋರ್ಸ್ಗಳನ್ನು ಒಳಗೊಂಡಂತೆ ವಿವಿಧ ಸ್ನಾತಕೋತ್ತರ ಕೋರ್ಸ್ಗಳಿಗೆ ಶುಲ್ಕ ನಿಗದಿಪಡಿಸಲಾಗಿದೆ ಎಂದು ಇಲಾಖೆ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ. ಅರ್ಜಿ ಶುಲ್ಕ 50ರೂ., ಪ್ರವೇಶ ಶುಲ್ಕ 100ರೂ., ಪಾಠ ಶುಲ್ಕ 1000 ರೂ., ಪ್ರಯೋಗಾಲಯ ಶುಲ್ಕ 300 ರೂ., ವೈದ್ಯಕೀಯ ತಪಾಸಣಾ ಶುಲ್ಕ 30 ರೂ., ವರ್ಗಾವಣೆ ಶುಲ್ಕ 50 ರೂ., ವಿದ್ಯಾಭ್ಯಾಸ ಪ್ರಮಾಣಪತ್ರ ಶುಲ್ಕ 20ರೂ., ವಾಚನಾಲಯ, ಕ್ರೀಡಾ ಹಾಗೂ ಗ್ರಂಥಾಲಯ ಶುಲ್ಕ ತಲಾ 100 ರೂ. ಮತ್ತು ಸ್ನಾತಕೋತ್ತರ ವಿಭಾಗ ಅಭಿವೃದ್ಧಿ ಶುಲ್ಕ 1000 ರೂ.ನಿಗದಿ ಮಾಡಲಾಗಿದೆ.
ಜತೆಗೆ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಪ್ರಾಧ್ಯಾಪಕರ ಸಹಾಯ ನಿಧಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನಿಗದಿಪಡಿಸಿರುವಷ್ಟು ಶುಲ್ಕ ಪಾವತಿಸಬೇಕು. ಪರೀಕ್ಷಾ ಶುಲ್ಕ ಹಾಗೂ ಇನ್ನಿತರ ವಿಶ್ವವಿದ್ಯಾಲಯ ಶುಲ್ಕವು ಆಯಾ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಸಂಬಂಧಿಸಿದ್ದಾಗಿರುತ್ತದೆ ಎಂದು ಇಲಾಖೆ ತಿಳಿಸಿದೆ. ಎಂಬಿಎ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾನ್ಯ ವಿದ್ಯಾರ್ಥಿಗಳಿಗೆ ಸರ್ಕಾರವು ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ನಿಗದಿಪಡಿಸಿದ್ದ ವಾರ್ಷಿಕ 20 ಸಾವಿರ ರೂ.ಗಳನ್ನೇ ಪ್ರಸಕ್ತ ಸಾಲಿಗೂ ನಿಗದಿಪಡಿಸಲಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.