ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

Team Udayavani, May 7, 2024, 6:30 AM IST

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆಯ ಲಿದ್ದು, ಒಟ್ಟು 2.59 ಕೋಟಿ ಮತ ದಾರರು ಒಟ್ಟು 227 ಅಭ್ಯರ್ಥಿಗಳ ಭವಿಷ್ಯವನ್ನು ಬರೆಯಲಿದ್ದಾರೆ.

ಒಂದೂವರೆ ತಿಂಗಳಿಂದ ರಣ ಬಿಸಿಲನ್ನು ಲೆಕ್ಕಿಸದೆ ರಾಜಕೀಯ ಪಕ್ಷಗಳು ಭರ್ಜರಿಯಾಗಿ ಮತ ಬೇಟೆ ನಡೆಸಿದ್ದು, ಉತ್ತಮ ಫ‌ಸಲಿನ ನಿರೀಕ್ಷೆಯಲ್ಲಿವೆ. ಮತದಾರರನ್ನು ಸೆಳೆಯಲು ಎಲ್ಲ ತಂತ್ರಗಾರಿಕೆ, ರಾಜಕೀಯ ಪಟ್ಟುಗಳನ್ನು ಬಳ ಸಿದ ಬಿಜೆಪಿ ಹಾಗೂ ಕಾಂಗ್ರೆಸ್‌ ಅಂತಿಮವಾಗಿ ಮತದಾರರನ ಮೇಲೆ ಭಾರ ಹಾಕಿದ್ದಾರೆ.

ಒಟ್ಟು 28,257 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಶಾಂತಿ ಯುತ ಮತದಾನಕ್ಕೆ ಚುನಾವಣ ಆಯೋಗ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಮುಖ್ಯವಾಗಿ ಬಿಸಿಲು ನಿರ್ವಹಿಸುವುದಕ್ಕಾಗಿ ಶಾಮಿಯಾನ, ಫ್ಯಾನ್‌, ವಿಶ್ರಾಂತಿ ಕೊಠಡಿ, ಕುಡಿಯುವ ನೀರು, ಒಆರ್‌ಎಸ್‌ ಮತ್ತಿತರ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಕಾನೂನು-ಸುವ್ಯವಸ್ಥೆಗೆ ಪೊಲೀಸ್‌ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಚುನಾವಣ ಆಯೋಗ ಮತದಾನ ಪ್ರಕ್ರಿಯೆ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲಿದೆ.

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಎಲ್ಲ 14 ಕ್ಷೇತ್ರಗಳಲ್ಲಿ ಸದ್ಯ ಬಿಜೆಪಿ ಸಂಸದರಿದ್ದು, ಎಲ್ಲ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದ್ದರೆ, ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಕಾಂಗ್ರೆಸ್‌ ಹೊಂದಿದೆ.

ಘಟಾನುಘಟಿಗಳು ಕಣದಲ್ಲಿ
ಇಬ್ಬರು ಮಾಜಿ ಸಿಎಂಗಳು, ಇಬ್ಬರು ಹಾಲಿ ಕೇಂದ್ರ ಸಚಿವರು ಸ್ಪರ್ಧೆಯಲ್ಲಿ ರುವುದರಿಂದ ಚುನಾವಣೆ ಪ್ರತಿಷ್ಠೆ ಪಡೆದುಕೊಂಡಿದೆ. ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬೆಳಗಾವಿಯಿಂದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಸ್ಪರ್ಧಿಸಿದ್ದರೆ, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಷಿ ಧಾರವಾಡದಿಂದ, ಭಗವಂತ ಖೂಬಾ ಬೀದರ್‌ ಕ್ಷೇತ್ರದಿಂದ ಸ್ಪರ್ಧೆಗಿಳಿಸಿದ್ದಾರೆ.

ಬೆಳಗಾವಿಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌, ಚಿಕ್ಕೋಡಿಯಿಂದ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ಬಾಗಲಕೋಟೆಯಿಂದ ಸಚಿವ ಶಿವಾನಂದ ಪಾಟೀಲ್‌ ಅವರ ಪುತ್ರಿ ಸಂಯುಕ್ತ ಪಾಟೀಲ್‌, ಬೀದರ್‌ನಿಂದ ಸಚಿವ ಈಶ್ವರ್‌ ಖಂಡ್ರೆ ಅವರ ಪುತ್ರ ಸಾಗರ್‌ ಖಂಡ್ರೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರೆ, ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಬಿಜೆಪಿಯಿಂದ ಕಣದಲ್ಲಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರ ಸಹೋದರಿ ಗೀತಾ ಶಿವರಾಜ್‌ಕುಮಾರ್‌, ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರ ಪತ್ನಿ ಡಾ| ಪ್ರಭಾ ಮಲ್ಲಿಕಾರ್ಜುನ್‌ ದಾವಣಗೆರೆಯಿಂದ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್‌ ಅವರ ಸಹೋದರ ಕೆ. ರಾಜಶೇಖರ್‌ ಹಿಟ್ನಾಳ್‌ ಕೊಪ್ಪಳದಿಂದ ಸ್ಪರ್ಧೆಯಲ್ಲಿದ್ದಾರೆ. ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಸಂಡೂರು ಶಾಸಕ ತುಕಾರಾಂ ಸ್ಪರ್ಧಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಬಿಜೆಪಿ ವಿರುದ್ಧ ಬಂಡೆದಿದ್ದರೆ, ದಾವಣಗೆರೆಯಲ್ಲಿ ವಿನಯ್‌ ಕುಮಾರ್‌ ಕಾಂಗ್ರೆಸ್‌ ವಿರುದ್ಧ ಸೆಟೆದು ನಿಂತಿದ್ದಾರೆ.

ಒಟ್ಟು ಕ್ಷೇತ್ರಗಳು 14 (10 ಸಾಮಾನ್ಯ,
4 ಮೀಸಲು)

ಅತೀ ಹೆಚ್ಚು ಮತದಾರರು
ಕಲಬುರಗಿ: 20.98 ಲಕ್ಷ
ಅತೀ ಕಡಿಮೆ ಮತದಾರರು
ಉತ್ತರ ಕನ್ನಡ: 16.41 ಲಕ್ಷ
ಅತೀ ಹೆಚ್ಚು ಅಭ್ಯರ್ಥಿಗಳು
ದಾವಣಗೆರೆ: 30
ಅತೀ ಕಡಿಮೆ ಅಭ್ಯರ್ಥಿಗಳು
ವಿಜಯಪುರ: 8
ಅತೀ ಹೆಚ್ಚು ಮತಗಟ್ಟೆಗಳು
ರಾಯಚೂರು: 2,203
ಅತೀ ಕಡಿಮೆ ಮತಗಟ್ಟೆಗಳು
ಧಾರವಾಡ: 1,893

ಒಟ್ಟು ಮತದಾರರು

2.59 ಕೋಟಿ
ಪುರುಷರು 1,29,48,978
ಮಹಿಳೆಯರು 1,29,66,570
ಯುವ ಮತದಾರರು 6.90 ಲಕ್ಷ
ಪೊಲೀಸರು 45,000ಕ್ಕೂ ಹೆಚ್ಚು
ಒಟ್ಟು ಮತಗಟ್ಟೆಗಳು 28,257
ಒಟ್ಟು ಅಭ್ಯರ್ಥಿಗಳು 227

ಮೊದಲ ಹಂತದ 14 ಕ್ಷೇತ್ರಗಳಲ್ಲಿ ಮತದಾರರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಈಗ ಮಂಗಳವಾರ ಮತದಾನ ನಡೆಯಲಿರುವ 14 ಕ್ಷೇತ್ರಗಳ ಮತದಾರರು ತಮ್ಮ ಮನೆಗಳಿಂದ ದೊಡ್ಡ ಸಂಖ್ಯೆಯಲ್ಲಿ ಹೊರಬಂದು ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಬೇಕು. ಮೊದಲ ಹಂತದ ಮತದಾನ ದಾಖಲೆ ಹಿಂದಿಕ್ಕುವ ರೀತಿ ಮತದಾನ ಮಾಡಬೇಕು ಎಂಬುದು ಚುನಾವಣ ಆಯೋಗದ ಮನವಿಯಾಗಿದೆ.
ಮನೋಜ್‌ ಕುಮಾರ್‌ ಮೀನಾ,
ರಾಜ್ಯ ಮುಖ್ಯ ಚುನಾವಣಾಧಿಕಾರಿ

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.