ಪಿಕ್ ಪಾಕೆಟ್ ಸರ್ಕಾರ; ಡಿ.ಕೆ. ಶಿವಕುಮಾರ್ ಆರೋಪ
Team Udayavani, Sep 4, 2022, 9:31 PM IST
ಬೆಂಗಳೂರು: ಕಮಿಷನ್ ಜತೆಗೆ ಇದು “ಪಿಕ್ ಪಾಕೆಟ್’ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಭಾನುವಾರ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ನಿತ್ಯ ಜನಸಾಮಾನ್ಯರ ಜೇಬು “ಪಿಕ್ ಪಾಕೆಟ್’ ಮಾಡುತ್ತಿದೆ. ಇದರಿಂದ ಜನ ರೋಸಿ ಹೋಗಿದ್ದಾರೆ. ಈ ಧೋರಣೆ ವಿರುದ್ಧ ಹೋರಾಟ ಅನಿವಾರ್ಯವಾಗಿದ್ದು, ಕಾಂಗ್ರೆಸ್ ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನೆಗೆ ಜನ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಅಗತ್ಯವಸ್ತುಗಳ ಬೆಲೆ ಗಗನಕ್ಕೇರಿದೆ. ಮತ್ತೊಂದೆಡೆ ಜನರ ಆದಾಯ ಪಾತಾಳಕ್ಕೆ ಕುಸಿದಿದೆ. ಈ ಮೂಲಕ ಯುವಕರು, ಮಹಿಳೆಯರು ಸೇರಿ ಸಮಾಜದ ಪ್ರತಿಯೊಬ್ಬ ಪ್ರಜೆಯನ್ನು ಸುಲಿಗೆ ಮಾಡಲಾಗುತ್ತಿದೆ. ಇದರ ವಿರುದ್ಧ ಕಾಂಗ್ರೆಸ್ ದೆಹಲಿ ಚಲೋ ಹಮ್ಮಿಕೊಂಡಿದೆ. ಜನಸಾಮಾನ್ಯರ ಬದುಕು ಹಸನಾಗಬೇಕು, ಬೆಲೆ ಏರಿಕೆಯಿಂದ ಆಗುತ್ತಿರುವ ತೊಂದರೆಯಿಂದ ಎÇÉಾ ವರ್ಗದ ಜನರನ್ನು ರಕ್ಷಿಸಲು ಹೋರಾಟ ನಡೆಸಲಾಗುತ್ತಿದೆ. ಎಲ್ಲರೂ ಈ ಪ್ರತಿಭಟನೆಗೆ ಬೆಂಬಲಿಸಬೇಕು ಎಂದು ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ
MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
IPL 2025: ಸಾತಂತ್ರ್ಯ ನೀಡುವ ತಂಡವೇ ನನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.