Pilikula: ಕಂಬಳ ಉತ್ಸವ ಆಯೋಜನೆ ಅಧ್ಯಯನಕ್ಕಾಗಿ ತಾಂತ್ರಿಕ ಸಮಿತಿ ರಚನೆ
Team Udayavani, Nov 21, 2024, 6:51 AM IST
ಬೆಂಗಳೂರು: ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ಉತ್ಸವ ಆಯೋಜನೆಯಿಂದ ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳಿಗೆ ತೊಂದರೆ ಆಗಲಿದೆಯೇ ಎಂಬ ಬಗ್ಗೆ ಅಧ್ಯಯನ ನಡೆಸಲು ದ.ಕ. ಜಿಲ್ಲಾಧಿಕಾರಿಯವರು ನಾಲ್ವರು ಸದಸ್ಯರ ತಾಂತ್ರಿಕ ಸಮಿತಿಯೊಂದನ್ನು ರಚಿಸಿದ್ದಾರೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಪಿಲಿಕುಳ ಜೈವಿಕ ಉದ್ಯಾನವನ (ನಿಸರ್ಗಧಾಮ)ದ ಬಳಿ ಕಂಬಳ ಆಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ “ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಎನಿಮಲ್’ (ಪೆಟಾ) ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ ರಾಜ್ಯ ಸರಕಾರದ ಪರವಾಗಿ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಪಿಲಿಕುಳದಲ್ಲಿ ಕಂಬಳ ಆಯೋಜನೆಯಿಂದ ಅಲ್ಲಿನ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಮೈಸೂರಿನ ಶ್ರೀಚಾಮರಾಜೇಂದ್ರ ಮೃಗಾಲಯದ ಉಪ ನಿರ್ದೇಶಕಿ ಸಿ.ವಿ. ದೀಪ, ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಮಂಗಳೂರು ಉಪ ನಿರ್ದೇಶಕ ಡಾ| ಅರುಣಕುಮಾರ್ ಶೆಟ್ಟಿ, ಎನ್‌ಐಟಿಕೆ ಸುರತ್ಕಲ್‌ನ ಪ್ರಾಧ್ಯಾಪಕ ಪ್ರೊ| ಶ್ರೀನಿಕೇತನ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೈಕಂಪಾಡಿ, ಮಂಗಳೂರು ಇಲ್ಲಿನ ಪರಿಸರ ಅಧಿಕಾರಿ ಲಕ್ಷ್ಮೀಕಾಂತ್ ಅವರನ್ನೊಳಗೊಂಡ ಸಮಿತಿಯನ್ನು ರಚಿಸಿ ದ.ಕ. ಜಿಲ್ಲಾಧಿಕಾರಿ ನ.15ರಂದು ಆದೇಶ ಹೊರಡಿಸಿದ್ದಾರೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಅಲ್ಲದೇ ಆದೇಶದ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.
ಈ ಸಮಿತಿಯು ಪಿಲಿಕುಳ ಕಂಬಳ ಉತ್ಸವ ನಡೆಸುವ ಸ್ಥಳ ಮತ್ತು ಪಿಲಿಕುಳ ಜೈವಿಕ ಉದ್ಯಾನವನವನ್ನು ಪರಿಶೀಲನೆ ನಡೆಸಿ, ಪಿಲಿಕುಳದಲ್ಲಿ ಕಂಬಳ ಉತ್ಸವ ನಡೆಸುವುದರಿಂದ ಅಲ್ಲಿನ ಜೈವಿಕ ಉದ್ಯಾನವನದ ಪ್ರಾಣಿಗಳಿಗೆ ಏನಾದರೂ ತೊಂದರೆ ಆಗಲಿದೆಯೇ ಎಂಬ ಬಗ್ಗೆ ತಾಂತ್ರಿಕವಾಗಿ ಅಧ್ಯಯನ ನಡೆಸಿ ಸ್ಪಷ್ಟ ಅಭಿಪ್ರಾಯದೊಂದಿಗೆ ಎರಡು ವಾರದೊಳಗೆ ವರದಿ ಸಲ್ಲಿಸಲಿದೆ. ಆ ವರದಿಯನ್ನು ನ್ಯಾಯಾಲಯದ ಮುಂದೆ ಮಂಡಿಸಲಾಗುವುದು ಎಂದು ಅಡ್ವೋಕೇಟ್ ಜನರಲ್ ವಿವರಿಸಿದರು.
ಅಡ್ವೋಕೇಟ್ ಜನರಲ್ ಅವರ ಮನವಿ ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಡಿ. 4ಕ್ಕೆ ಮುಂದೂಡಿತು. ಇದೇ ವೇಳೆ ಅರ್ಜಿಯಲ್ಲಿ ಹೊಸದಾಗಿ ಪ್ರತಿವಾದಿಗಳನ್ನಾಗಿ ಸೇರಿಸಲಾದ ದ.ಕ. ಜಿಲ್ಲಾಧಿಕಾರಿ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತಿತರರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.