ಕೆಎಸ್‌ಎಫ್ಸಿಗೆ ಅನುಕಂಪ ಆಧಾರಿತ ನೇಮಕವಿಲ್ಲ
Team Udayavani, Feb 10, 2017, 3:45 AM IST
ವಿಧಾನ ಪರಿಷತ್: ಕರ್ನಾಟಕ ರಾಜ್ಯ ಹಣಕಾಸು ನಿಗಮದ (ಕೆಎಸ್‌ಎಫ್ಸಿ) ಕ್ರೋಡೀಕೃತ ನಷ್ಟ ಮೊತ್ತ ಹೆಚ್ಚಾಗಿರುವುದು ಹಾಗೂ ಈಗಾಗಲೇ ಅಗತ್ಯಕ್ಕಿಂತ ಹೆಚ್ಚು ನೌಕರ, ಸಿಬ್ಬಂದಿಯಿರುವುದರಿಂದ ಅನುಕಂಪದ ಆಧಾರದ ಮೇಲೆ ನೇಮಕ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗುರುವಾರ ಪ್ರಶ್ನೋತ್ತರದ ವೇಳೆ ಜೆಡಿಎಸ್‌ನ ಬಸವರಾಜ ಹೊರಟ್ಟಿ ಪ್ರಶ್ನೆಗೆ ಉತ್ತರಿಸಿದ ಅವರು, “ಕೆಎಸ್‌ಎಫ್ಸಿಯಲ್ಲಿ ಈಗಾಗಲೇ 925 ಮಂದಿ ಕಾರ್ಯ ನಿರ್ವಹಿಸುತ್ತಿದ್ದು, ಇದರಲ್ಲಿ ಅಗತ್ಯಕ್ಕಿಂತ 250 ಮಂದಿ ಹೆಚ್ಚಾಗಿದ್ದಾರೆ. ಆ ಹಿನ್ನೆಲೆಯಲ್ಲಿ 147 ಮಂದಿಯನ್ನು ಬೇರೆ ಇಲಾಖೆಗಳಿಗೆ ಕಳುಹಿಸಲಾಗಿದ್ದು, ಹೀಗಿರುವಾಗ ಅನುಕಂಪದ ಆಧಾರದ ಮೇಲೆ ನೇಮಕಕ್ಕೆ ಅವಕಾಶವಿಲ್ಲ’ ಎಂದರು.
ನಿಗಮವು 2001-02ನೇ ಸಾಲಿನಿಂದ ಈವರೆಗೆ 2001-02, 2002-03 ಹಾಗೂ 2008-09ನೇ ಸಾಲಿನಲ್ಲಿ ನಿವ್ವಳ ನಷ್ಟ ಅನುಭವಿಸಿದ್ದು ಹೊರತುಪಡಿಸಿದರೆ ಉಳಿದ ವರ್ಷಗಳಲ್ಲಿ ನಿವ್ವಳ ಲಾಭ ಗಳಿಸಿದೆ. ಆದರೆ ಕ್ರೋಡೀಕೃತ ನಷ್ಟ ಪ್ರಮಾಣ ಈವರೆಗೆ 437 ಕೋಟಿ ರೂ. ಇದೆ. ಹೊಸ ನೇಮಕ ಮಾಡಿಕೊಳ್ಳಬೇಕಾದರೆ ನಿಗಮವು ಸತತ 3 ವರ್ಷ ಲಾಭ ಗಳಿಸಬೇಕು ಹಾಗೂ 3 ವರ್ಷಗಳ ಲಾಭ ಪ್ರಮಾಣ ಕ್ರೋಡೀಕೃತ ನಷ್ಟ ಪ್ರಮಾಣದ ಶೇ.30ಕ್ಕಿಂತಲೂ ಹೆಚ್ಚು ಇರಬೇಕು ಎಂಬ ಷರತ್ತು ಇದೆ. ಆ ಹಿನ್ನೆಲೆಯಲ್ಲಿ ನಿಗಮದ ಮಂಡಳಿ ಸಭೆಯಲ್ಲಿ 2009ರ ಮಾ.9ರಿಂದ ಅನುಕಂಪದ ಆಧಾರದ ಮೇಲೆ ನೇಮಕಾತಿ ಸ್ಥಗಿತಗೊಳಿಸಲು ನಿರ್ಧರಿಸಿದೆ ಎಂದು ಮಾಹಿತಿ ನೀಡಿದರು.
ಇದಕ್ಕೆ ಸಮಾಧಾನಗೊಳ್ಳದ ಬಿಜೆಪಿಯ ಕೆ.ಬಿ.ಶಾಣಪ್ಪ, “ವಿಶ್ವವಿದ್ಯಾಲಯಗಳು, ಖಾಸಗಿ ಸಂಸ್ಥೆಗಳಲ್ಲಿ ಅನುಕಂಪ ಆಧಾರದ ಮೇಲೆ ನೇಮಕ ನಡೆಯುತ್ತಿದ್ದು, ಸರ್ಕಾರಕ್ಕೆ ಏಕೆ ಸಾಧ್ಯವಾಗುವುದಿಲ್ಲ’ ಎಂದು ಪ್ರಶ್ನಿಸಿದರು. ಇದಕ್ಕೆ ಬಸವರಾಜ ಹೊರಟ್ಟಿ ಧ್ವನಿಗೂಡಿಸಿದರು. ಆಗ ಬಿಜೆಪಿಯ ರಾಮಚಂದ್ರಗೌಡ, “ಶಾಸಕರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಅನುಕಂಪದ ಆಧಾರದ ಮೇಲೆ ಟಿಕೆಟ್ ನೀಡಲಾಗುವುದು. ಇನ್ನೂ ಕೆಲವರು ಅನುಕಂಪದ ಆಧಾರದ ಮೇಲೆ
ಪ್ರಧಾನಿ ಕೂಡ ಆಗಿದ್ದಾರೆ’ ಎಂದರು. ಆಗ ಸಿಎಂ, “ಪ್ರಧಾನಿ ಮೋದಿ ಅವರು ಯಾವ ಅನುಕಂಪದ ಮೇಲೆ ಆರಿಸಿ ಬಂದಿದ್ದಾರೆ’ ಎಂದು ನಗುತ್ತಲೇ ಪ್ರಶ್ನಿಸಿದರು. “ಅದಕ್ಕೆಲ್ಲಾ ನಿಯಮದಲ್ಲಿ ಅವಕಾಶವಿಲ್ಲ’ ಎನ್ನುವ ಮೂಲಕ ಚರ್ಚೆಗೆ ತೆರೆ ಎಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.