Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ
Team Udayavani, May 5, 2024, 6:40 AM IST
ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾಗಿ ಒಂದೂವರೆ ತಿಂಗಳು ಕಳೆದಿದ್ದು, ಮೇ 7ರ ಮತದಾನದ ಅನಂತರ ರಾಜ್ಯದಲ್ಲಿ ನೀತಿ ಸಂಹಿತೆಯನ್ನು ಸಡಿಲಿಸುವಂತೆ ಚುನಾವಣ ಆಯೋಗಕ್ಕೆ ಮನವಿ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಮಾ. 16ರಂದು ದೇಶಾದ್ಯಂತ ಚುನಾವಣೆ ಘೋಷಣೆಯಾಗಿದ್ದು, ಎ. 26ರಂದು ರಾಜ್ಯದ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದಿದೆ.
ಉಳಿದ 14 ಕ್ಷೇತ್ರಗಳಿಗೆ ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಆ ಬಳಿಕ ರಾಜ್ಯದಲ್ಲಿ ಮತದಾನ ಇಲ್ಲ. ಮತದಾನ ಮುಗಿದರೂ ಮತ ಎಣಿಕೆ ಮತ್ತು ಫಲಿತಾಂಶಕ್ಕಾಗಿ ಜೂ. 4ರ ವರೆಗೆ ಕಾಯಲೇಬೇಕಿದೆ. ಆದರೆ ರಾಜ್ಯದಲ್ಲಿ ಒಂದೂವರೆ ತಿಂಗಳಿನಿಂದ ಸರಕಾರ, ಆಡಳಿತ ಯಂತ್ರ ಸ್ಥಗಿತವಾಗಿದೆ. ಅದರಲ್ಲೂ ಬರಗಾಲ ಇರುವುದರಿಂದ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕಿದ್ದು, ಅದಕ್ಕೆ ನೀತಿ ಸಂಹಿತೆ ಬಾಧಕವಲ್ಲದಿದ್ದರೂ ಕೆಲವೆಡೆ ಅಧಿಕಾರಿಗಳು, ಸಿಬಂದಿ ನೀತಿ ಸಂಹಿತೆಯ ನೆಪವೊಡ್ಡಿ ಎಲ್ಲವನ್ನೂ ಮುಂದೂಡುತ್ತಿದ್ದಾರೆ.
ಈ ಎಲ್ಲ ಕಾರಣಗಳಿಂದ ಮೇ 7ರ ಮತದಾನ ಪ್ರಕ್ರಿಯೆ ಮುಗಿದ ಬಳಿಕ ಕರ್ನಾಟಕಕ್ಕೆ ಸೀಮಿತವಾಗಿ ನೀತಿ ಸಂಹಿತೆಯನ್ನು ಸಡಿಲಿಸಲು ಚುನಾವಣ ಆಯೋಗದ ಅನುಮತಿ ಕೋರುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ. ಸದ್ಯದಲ್ಲೇ ಚುನಾವಣ ಆಯೋಗಕ್ಕೆ ಈ ಸಂಬಂಧ ಪತ್ರ ಬರೆಯಲು ಸರಕಾರ ಸಿದ್ಧತೆ ಮಾಡಿಕೊಂಡಿದೆ.
ತಮಿಳುನಾಡಿನಲ್ಲಿ ಈಗಾಗಲೇ ಮತದಾನ ಮುಗಿದಿದ್ದು, ನೀತಿ ಸಂಹಿತೆ ಸಡಿಲಗೊಳಿಸಲು ಆಯೋಗಕ್ಕೆ ಮನವಿ ಮಾಡಿದರೂ ನೀತಿ ಸಂಹಿತೆ ತೆರವಾಗಿಲ್ಲ. ಕರ್ನಾಟಕದಲ್ಲಿ ಮತದಾನ ಮುಗಿದರೂ ದೇಶದ ಬೇರೆ ಭಾಗಗಳಲ್ಲಿ ಚುನಾವಣೆಗಳು ನಡೆಯಲಿದ್ದು, ಕರ್ನಾಟಕದ ಅಕ್ಕ-ಪಕ್ಕದ ರಾಜ್ಯಗಳಲ್ಲಿ ಮತದಾನ ಇರುವುದರಿಂದ ನೀತಿ ಸಂಹಿತೆ ಬಿಗಿಯಾಗಿಯೇ ಇರುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.