PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Team Udayavani, Sep 16, 2024, 11:58 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನವಾದ ಸೆ. 17ರಿಂದ ಅ. 2ರ ಗಾಂಧಿ ಜಯಂತಿ ಬಿಜೆಪಿ ಸೇವಾ ಪಾಕ್ಷಿಕ ನಡೆಯಲಿದ್ದು, ಹಲವು ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸೆ. 17 ಮೋದಿಯವರ ಜನ್ಮದಿನ, ಸೆ. 25 ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನ ಮತ್ತು ಅ. 2ರಂದು ಗಾಂಧಿ ಜಯಂತಿ ನಿಮಿತ್ತ ಈ ಸೇವಾ ಕಾರ್ಯ ನಡೆಯಲಿದೆ. ಒಟ್ಟು 15 ದಿನಗಳ ಸೇವಾ ಕಾರ್ಯ ಚಟುವಟಿಕೆಗಳ ಮೇಲ್ವಿಚಾರಣೆಗೆ ರಾಜ್ಯಮಟ್ಟದಲ್ಲಿ ಉಸ್ತುವಾರಿ ನೇಮಕವಾಗಿದೆ.
ಹಾಗೆಯೇ ತಲಾ 4 ಜನರನ್ನು ಒಳಗೊಂಡ ಜಿಲ್ಲಾ , ಮಂಡಲಮಟ್ಟದಲ್ಲಿ ಉಸ್ತುವಾರಿ ಸಮಿತಿಗಳನ್ನು ರಚಿಸಲಾಗಿದೆ ಎಂದರು.
ಯುವ ಮೋರ್ಚಾ ನೇತೃತ್ವದಲ್ಲಿ ಮಂಗಳವಾರ ರಕ್ತದಾನ ಶಿಬಿರ, ಸೆ. 18ರಿಂದ 24ರ ವರೆಗೆ ಶಾಲೆ, ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆ, ಸಾಧಕ ಅಂಗವಿಕಲ ಕ್ರೀಡಾಪಟುಗಳಿಗೆ ಸನ್ಮಾನ, ಸಹಾಯಕ ಸಲಕರಣೆ ವಿತರಿಸಲಾಗುವುದು. ಸೆ. 23ರ ಆಯುಷ್ಮಾನ್ ಭಾರತ್ ಯೋಜನೆ ಕಾರ್ಯಕ್ರಮದಡಿ ಮೋದಿಯವರ ಜೀವನ, ಸಾಧನೆ ಕುರಿತು ಚಿತ್ರಪ್ರದರ್ಶನ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ನಡೆಯಲಿದೆ. ವಿವಿಧೆಡೆ ವಿಚಾರಗೋಷ್ಠಿ ಜಿಲ್ಲಾ ಮಟ್ಟದಲ್ಲಿ ಕಲೆ, ಚಿತ್ರಕಲೆ, ರಂಗೋಲಿ, ಭಾಷಣ, ಪ್ರಬಂಧ, ಮರಳು ಕಲೆ, ಗ್ರಾಫಿಕ್ ವಿನ್ಯಾಸ ಸ್ಪರ್ಧೆಗಳು ನಡೆಯಲಿವೆ ಎಂದರು. ಸೆ.25ರಂದು ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪನಮನ, ಅ. 2ರ ಗಾಂಧಿ ಹಾಗೂ ಲಾಲ್ ಬಹದೂರ್ ಶಾಸ್ತ್ರಿ ಜಯಂತಿ ನಿಮಿತ್ತ ಮಹನೀಯರ ಪ್ರತಿಮೆಗಳನ್ನು ಸ್ವಚ್ಛಗೊಳಿಸಿ ಪುಷ್ಪ ನಮನ ಸಲ್ಲಿಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.