10 ಕಡೆಗೆ ಪ್ರಧಾನಿ ಭೇಟಿ ಸಾಧ್ಯತೆ
Team Udayavani, Feb 9, 2023, 11:00 PM IST
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಂತ್ರಗಾರಿಕೆ ಪ್ರಾರಂಭಿಸಿರುವ ಬಿಜೆಪಿ ಇನ್ನೂ ಹತ್ತು ಸ್ಥಳಗಳಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲು ನಿರ್ಧರಿಸಿದೆ.
ಇದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಕಚೇರಿಯಲ್ಲಿ ಚರ್ಚೆ ನಡೆಸಲಾಗಿದ್ದು, ಇನ್ನೆರಡು ದಿನಗಳಲ್ಲಿ ಪ್ರಧಾನಿ ಕಾರ್ಯಾಲಯ ಹಾಗೂ ದಿಲ್ಲಿಯ ಕೇಂದ್ರ ಬಿಜೆಪಿ ಕಚೇರಿಗೆ ಪಟ್ಟಿ ಮನವಿ ಕಳುಹಿಸಲು ನಿರ್ಧರಿಸಲಾಗಿದೆ. ಫೆ.13 ಹಾಗೂ 27ರಂದು ರಾಜ್ಯಕ್ಕೆ ಮೋದಿ ಆಗಮಿಸುವುದು ಈಗಾಗಲೇ ಖಚಿತವಾಗಿದೆ. ಮಾರ್ಚ್ 6 ರಂದು ಮಂಗಳೂರಿಗೆ ಮೋದಿ ಭೇಟಿ ಬಹುತೇಕ ಅಂತಿಮಗೊಂಡಿದೆ. ಗದಗ, ಉತ್ತರ ಕನ್ನಡ ಜಿಲ್ಲೆಯಲ್ಲೂ ಪ್ರಧಾನಿ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ನಡೆಯುತ್ತಿದೆ. ಮಾರ್ಚ್ 20 ರಿಂದ 23ರ ಮಧ್ಯೆ ದಾವಣಗೆರೆಯಲ್ಲಿ ನಡೆಯುವ ಕೇಸರಿ ಮಹಾಸಂಗಮ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದು, ಇದು ಚುನಾವಣಾ ದೃಷ್ಟಿಯಿಂದ ರಾಜ್ಯ ಬಿಜೆಪಿ ನಡೆಸುತ್ತಿರುವ ಅತಿದೊಡ್ಡ ಪ್ರಚಾರ ಸಭೆಯಾಗಲಿದೆ.
ಫೆಬ್ರವರಿ ಅಂತ್ಯದಲ್ಲಿ ರಾಜ್ಯದ ನಾಲ್ಕು ದಿಕ್ಕುಗಳಿಂದ ಪ್ರಾರಂಭವಾಗುವ ವಿಜಯ ಸಂಕಲ್ಪ ಯಾತ್ರೆ ಮಾ.20ರಿಂದ 23ರ ಅವಧಿಯಲ್ಲಿ ದಾವಣಗೆರೆಗೆ ಬಂದು ತಲುಪುವಂತೆ ರೂಟ್ ಮ್ಯಾಪ್ ಸಿದ್ಧಪಡಿಸಲಾಗುತ್ತಿದ್ದು, ಅಲ್ಲಿ ಮಹಾ ಸಂಗಮ ಕಾರ್ಯಕ್ರಮ ನಡೆಸಲು ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಈಗಾಗಲೇ ನಿರ್ಧಾರ ತೆಗೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.