ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ
Team Udayavani, Jan 11, 2022, 4:55 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ 19 ಸೋಂಕು ದೃಢವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಆರೋಗ್ಯ ವಿಚಾರಣೆ ಮಾಡಿದರು.
ಮಂಗಳವಾರ ಸಂಜೆ 4:30ಕ್ಕೆ ದೂರವಾಣಿ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಬೊಮ್ಮಾಯಿ ಅವರಿಗೆ ಕರೆ ಮಾಡಿದ್ದು, ಸುಮಾರು ಐದು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಸೂಕ್ತ ಚಿಕಿತ್ಸೆ ಪಡೆಯಿರಿ ಎಂದು ಪ್ರಧಾನಿ ಮೋದಿ ಅವರು ಸಲಹೆ ನೀಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ತಮಗೆ ಕೋವಿಡ್ ತಗಲಿರುವ ಬಗ್ಗೆ ವಿವರಣೆ ನೀಡಿದ್ದಾರೆ. ಅಲ್ಲದೆ ತಮ್ಮ ಕುಟುಂಬದ ಇಬ್ಬರು ಸದಸ್ಯರಿಗೂ ಸೋಂಕು ತಗುಲಿದೆ ಎಂದಿದ್ದಾರೆ. ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಪ್ರಧಾನಿ ಸಲಹೆ ನೀಡಿದ್ದಾರೆ.
ಇದನ್ನೂ ಓದಿ:ಚುನಾವಣೆಗೂ ಮೊದಲೇ ಯೋಗಿಗೆ ಆಘಾತ: ಓರ್ವ ಸಚಿವ, ಮೂವರು ಶಾಸಕರು ರಾಜೀನಾಮೆ
ಇದೇ ವೇಳೆ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಪ್ರಧಾನಿ ಮೋದಿಯವರಿಗೆ ಸಿಎಂ ಮಾಹಿತಿ ನೀಡಿದರು. “ಇದೀಗ ಬೆಂಗಳೂರಿನಲ್ಲಿ ವರ್ಚುವಲ್ ಆಗಿ ಸಭೆ ನಡೆಸುತ್ತಿದ್ದೇನೆ. ಜನವರಿ 13ರಂದು ಸಂಜೆ ತಾವು ಕರೆದಿರುವ ಕೋವಿಡ್ ವರ್ಚುಯಲ್ ಸಭೆಗೆ ಪೂರ್ವಭಾವಿ ರೂಪದಲ್ಲಿ ಈ ಸಭೆ ನಡೆಸುತ್ತಿದ್ದೇನೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗಿದೆ. ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ಸಿಎಂ ವಿವರಣೆ ನೀಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.