POCSO case; ಮುರುಘಾ ಶರಣರ ಬಿಡುಗಡೆಗೆ ನ್ಯಾಯಾಲಯ ಆದೇಶ
Team Udayavani, Nov 15, 2023, 7:25 PM IST
ಚಿತ್ರದುರ್ಗ: ಕಳೆದ 14 ತಿಂಗಳಿಂದ ಜಿಲ್ಲಾ ಕಾರಾಗೃಹದಲ್ಲಿದ್ದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಬಿಡುಗಡೆಗೆ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
ಮೊದಲ ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಶ್ಯೂರಿಟಿಗಳ ಪರಿಶೀಲನೆ ನಂತರ ಬಿಡುಗಡೆಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಕೆ.ಕೋಮಲ ಆದೇಶ ಮಾಡಿದರು.ಮುರುಘಾ ಶರಣರ ಪರವಾಗಿ ಹೈಕೋರ್ಟ್ ನ್ಯಾಯವಾದಿ ಸಂದೀಪ್ ಪಾಟೀಲ್ ನ್ಯಾಯಾಲಯಕ್ಕೆ ಹಾಜರಾಗಿ ವಾದ ಮಂಡಿಸಿದರು. ನ್ಯಾಯಾಲಯದ ಎಲ್ಲ ಪ್ರಕ್ರಿಯೆಗಳು ಮುಗಿದು ಕಾರಾಗೃಹಕ್ಕೆ ಆದೇಶ ಪ್ರತಿ ತಲುಪಿದರೆ ಶರಣರು ಇಂದೇ ಹೊರಗೆ ಬರಲಿದ್ದಾರೆ.
ನ್ಯಾಯಾಲಯದ ಕಲಾಪಗಳ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಂದೀಪ್ ಪಾಟೀಲ್, ಹೈಕೋರ್ಟ್ ಜಾಮೀನು ಆದೇಶದಂತೆ ಇಂದು ಮೊದಲನೇ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರಿಗೆ ಜಾಮೀನು ಮಂಜೂರಾಗಿದ್ದು, ಜಿಲ್ಲಾ ನ್ಯಾಯಾಲಯ ಬಿಡುಗಡೆ ಆಗಲಿದ್ದಾರೆ ಎಂದು ತಿಳಿಸಿದರು.
ಇನ್ನೂ ಎರಡನೇ ಪ್ರಕರಣದಲ್ಲಿ ಅರೆಸ್ಟ್ ಅಥವಾ ಕಸ್ಟಡಿಗೆ ಹೋಗಿರಲಿಲ್ಲ. ಅದರಲ್ಲಿ ತನಿಖೆ ಮುಗಿದಿದೆ, ಚಾರ್ಜ್ ಶೀಟ್ ಹಾಕಲಾಗಿದೆ. ಆದರೂ, ಸರ್ಕಾರಿ ವಕೀಲರು ನ್ಯಾಯಾಂಗ ಬಂಧನಕ್ಕೆ ಕೇಳಿದ್ದರು.ತನಿಖೆಯ ವ್ಯಾಪ್ತಿ ಮುಗಿದು ಹೋಗಿದೆ. ಬಾಡಿ ವಾರೆಂಟ್ (ಪ್ರೊಡಕ್ಷನ್ ಅಂಡ್ ಟ್ರಾನ್ಸಿಟ್) ಆದೇಶ ಇದ್ದರೂ ಅವರನ್ನು ಕಾರಾಗೃಹದಲ್ಲಿ ಇಡುವಂತಿಲ್ಲ ಎಂದು ಅಭಿಪ್ರಾಯಪಟ್ಟರು.
ಎರಡನೇ ಪೋಕ್ಸೊ ಪ್ರಕರಣದಲ್ಲಿ ಸರ್ಕಾರಿ ವಕೀಲರು ನಾಳೆಯವರೆಗೆ ಬಾಡಿ ವಾರೆಂಟ್ ಮುಂದುವರೆಸಲು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.