ಪೋಕ್ಸೋ: ಬೆರಳೆಣಿಕೆ ಪ್ರಕರಣಗಳಲ್ಲಷ್ಟೇ ಶಿಕ್ಷೆ!
2018ರಲ್ಲಿ 2,061 ಪ್ರಕರಣ,12 ಮಂದಿಗೆ ಶಿಕ್ಷೆ; 1,145 ಪ್ರಕರಣ ವಿಚಾರಣೆ ಹಂತದಲ್ಲಿ
Team Udayavani, Sep 12, 2022, 6:30 AM IST
ಬೆಂಗಳೂರು: ರಾಜ್ಯದಲ್ಲಿ ನಾಲ್ಕೈದು ವರ್ಷಗಳಿಂದ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿ ಪೋಕ್ಸೋ ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇವೆ. ಆದರೆ ಶಿಕ್ಷೆಯ ಪ್ರಮಾಣ ಮಾತ್ರ ಕಡಿಮೆ.
ಕೊರೊನಾ ಸಮಯದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ಅತ್ಯಾಚಾರ, ದೌರ್ಜನ್ಯ ಮತ್ತು ಕಳ್ಳಸಾಗಣೆ ಪ್ರಕರಣಗಳು ಹೆಚ್ಚು ದಾಖಲಾಗಿವೆ. ಅದರಲ್ಲೂ ಪೋಕ್ಸೋ ಪ್ರಕರಣಗಳ ಸಂಖ್ಯೆಯೂ ಹೆಚ್ಚಿದೆ.
ರಾಜ್ಯದಲ್ಲಿ 2018ರಲ್ಲಿ 2,061
ಪೋಕ್ಸೋ ಪ್ರಕರಣಗಳು ವರದಿಯಾ ಗಿದ್ದು, ಕೇವಲ ಮಂದಿಗೆ ಶಿಕ್ಷೆಯಾಗಿದೆ. 1,145 ಪ್ರಕರಣಗಳು ಇಂದಿಗೂ ನ್ಯಾಯಾಲಯದ ವಿಚಾರಣೆಯ ಹಂತದಲ್ಲಿವೆ. ಇದೇ ರೀತಿ ಸಾವಿರಾರು ಪ್ರಕರಣಗಳು ನ್ಯಾಯಾಲಯ ವಿಚಾ ರಣೆ ಹಂತದಲ್ಲಿವೆ.
ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣಗಳು ಆರು ತಿಂಗಳೊಳಗೆ ಇತ್ಯರ್ಥವಾಗಬೇಕು. ಆದರೆ ಬಹುತೇಕ ಆರೋಪಿಗಳು ಸಾಕ್ಷಿಗಳನ್ನು ನಾಶಪಡಿಸುತ್ತಾರೆ, ಕೆಲವು ಪ್ರಕರಣಗಳಲ್ಲಿ ಮಕ್ಕಳ ಮೇಲೆ ಒತ್ತಡ ಹೇರಲಾಗುತ್ತದೆ. ಸಂತ್ರಸ್ತರು ನ್ಯಾಯಾಲಯಕ್ಕೆ ಹಾಜರಾಗುವುದಿಲ್ಲ ಹಾಗೂ ಸಂಬಂಧಿಕರಿಂದಲೇ ಇಂತಹ ಕೃತ್ಯ ನಡೆಯುವುದರಿಂದ ಸಾಕ್ಷಿ ಹೇಳಲು ಮುಂದಾಗುವುದಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸುತ್ತಾರೆ.
ಇದೇ ರೀತಿ 2022ರ ಜನವರಿ ಯಿಂದ ಜುಲೈವರೆಗೆ 1,511 ಪೋಕ್ಸೋ ಪ್ರಕರಣಗಳು ದಾಖಲಾಗಿವೆ ಎಂದು ಎಸ್‌ಸಿಆರ್‌ಬಿ ವರದಿ ತಿಳಿಸುತ್ತದೆ. ಈ ವರದಿ ಪ್ರಕಾರ 12ರಿಂದ 18 ವರ್ಷದೊಳಗಿನ ಬಾಲಕಿಯರ ಮೇಲೆ ಹೆಚ್ಚು ಅತ್ಯಾಚಾರದ ಪ್ರಕರಣಗಳು ದಾಖಲಾಗಿವೆ.
ಹೆಚ್ಚಿನ ಪೋಕ್ಸೋ ಪ್ರಕರಣಗಳಲ್ಲಿ ನೆರೆಮನೆಯವರು ಅಥವಾ ಸಂಬಂಧಿಕರೇ ಆರೋಪಿಗಳಾಗಿರು ವುದರಿಂದ ಸಾಕ್ಷಿಗಳು ದೊರಕುವುದಿಲ್ಲ. ಆದ್ದರಿಂದ ಈ ಪ್ರಕರಣಗಳಲ್ಲಿ ಶಿಕ್ಷೆ ಯಾಗುವ ಪ್ರಮಾಣ ಕಡಿಮೆ ಇರುತ್ತದೆ.
-ಸುಬ್ರಹ್ಮಣ್ಯೇಶ್ವರ ರಾವ್,
ಹೆಚ್ಚುವರಿ ಪೊಲೀಸ್ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.