POCSO Case: ಯಡಿಯೂರಪ್ಪ ವಿಚಾರಣೆ ಮುಂದಕ್ಕೆ
Team Udayavani, Jun 28, 2024, 11:10 PM IST
ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಪ್ರಕರಣದಲ್ಲಿ ನಿರೀಕ್ಷಣ ಜಾಮೀನು ಮಂಜೂರು ಮಾಡಲು ಹಾಗೂ ಪ್ರಕರಣವನ್ನು ರದ್ದುಪಡಿಸಲು ಕೋರಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸಿಐಡಿ ಪರ ವಾದ ಮಂಡಿಸಿ ಹೆಚ್ಚುವರಿ ಸರಕಾರಿ ವಿಶೇಷ ಅಭಿಯೋಜಕ ಬಿ.ಎನ್. ಜಗದೀಶ್, ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಈಗಾಗಲೇ ವಿಚಾರಣ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಅಲ್ಲದೆ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸ ಬೇಕಾಗಿದ್ದು ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಅಂಶ ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿ ಆದೇಶಿಸಿತು. ಅಲ್ಲದೇ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಈ ಹಿಂದೆ ನೀಡಿದ್ದ ಮಧ್ಯಾಂತರ ಆದೇಶವನ್ನು ಮುಂದಿನ ವಿಚಾರಣೆ ತನಕ ನ್ಯಾಯಾಲಯ ವಿಸ್ತರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಸೇನಾ ವಾಹನ ದುರಂತ; ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.