ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ : ಸಿದ್ದರಾಮಯ್ಯ ಕಿಡಿ
ಹಣ ಬೇಡ, ನ್ಯಾಯ ಕೊಡಿ ಎಂದು ನೊಂದ ಕುಟುಂಬದವರು ಕೇಳಿದ್ದಾರೆ
Team Udayavani, Jul 15, 2022, 7:26 PM IST
ಬೆಂಗಳೂರು : ‘ರಾಜ್ಯದಲ್ಲಿನ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕೆಟ್ಟುಹೋಗುತ್ತಿದ್ದು ಅನ್ಯಾಯ-ದೌರ್ಜನ್ಯಗಳಿಗೆ ಬಲಿಯಾಗಿರುವ ಜನರು ಪೊಲೀಸರ ನಿಷ್ಕ್ರೀಯತೆಯಿಂದಾಗಿ ಹತಾಶರಾಗಿದ್ದಾರೆ. ಅಸಮರ್ಥ ಗೃಹಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಿಡಿ ಕಾರಿ ಟ್ವೀಟ್ ಮಾಡಿದ್ದಾರೆ.
‘ಬಾಗಲಕೋಟೆಯ ಕೆರೂರ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಗಲಭೆಯಲ್ಲಿ ಗಾಯಗೊಂಡವರು ಮತ್ತು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ. ಘಟನೆಯ ಸುದ್ದಿ ಗೊತ್ತಾದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠರ ಜೊತೆ ಮಾತನಾಡಿ ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದೆ, ಉದ್ರಿಕ್ತ ಸ್ಥಿತಿಯಲ್ಲಿ ಭೇಟಿ ನೀಡುವುದು ಸೂಕ್ತ ಅಲ್ಲವೆಂದು ತಿಳಿದು ಕೆಲವು ದಿನಗಳ ನಂತರ ಇಂದು ಬಂದು ಎರಡೂ ಗುಂಪಿನವರನ್ನು ಭೇಟಿ ಮಾಡಿದೆ. ಇಂತಹ ಘಟನೆಗಳಲ್ಲಿ ಅನವಶ್ಯಕವಾಗಿ ಪ್ರಚೋದನೆ ನೀಡಿ ಶಾಂತಿ-ಸೌಹಾರ್ದತೆ ಕೆಡಿಸುವ ಕೆಲಸವನ್ನು ಯಾರೂ ಮಾಡಬಾರದು’ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.
‘ಗಲಭೆಯಲ್ಲಿ ಗಾಯಗೊಂಡವರ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ರೂಪದಲ್ಲಿ ಒಂದಷ್ಟು ಹಣ ನೀಡಿದ್ದೆ. ಹಣ ಬೇಡ, ನ್ಯಾಯ ಕೊಡಿ ಎಂದು ನೊಂದ ಕುಟುಂಬದವರು ಕೇಳಿದ್ದಾರೆ. ಅವರ ನೋವನ್ನು ಅರ್ಥಮಾಡಿಕೊಳ್ಳಬಲ್ಲೆ. ನಿಷ್ಪಕ್ಷಪಾತ ತನಿಖೆ ನಡೆಸಿ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸುವುದು ರಾಜ್ಯ ಬಿಜೆಪಿ ಸರ್ಕಾರದ ಕರ್ತವ್ಯವಾಗಿದೆ’ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.
ಸಿದ್ದರಾಮಯ್ಯ ಅವರು ಗುಂಪು ಘರ್ಷಣೆ ಗಾಯಾಳುಗಳ ಭೇಟಿಗೆ ಬಾಗಲಕೋಟೆಗೆ ಆಗಮಿಸಿದ ವೇಳೆ, ಗಾಯಾಳುಗಳ ಸಂಬಂಧಿಗಳು ಆಕ್ರೋಶ ಹೊರ ಹಾಕಿದ್ದು, ಗಾಯಾಳುಗಳಿಗೆ ನೀಡಿದ ಹಣವನ್ನೇ ಮರಳಿ ಸಿದ್ದರಾಮಯ್ಯಗೆ ನೀಡಲು ಮುಂದಾಗಿದ್ದರು, ನಮಗೆ ನ್ಯಾಯ ಬೇಕು, ಹಣ ಬೇಡ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದರು.
ವಿದ್ಯುತ್ ಗೆ ಬಲಿಯಾದವಳ ನಿವಾಸಕ್ಕೆ ಭೇಟಿ
ಬಾದಾಮಿ ವಿಧಾನಸಭೆ ಕ್ಷೇತ್ರದ ಗೋವಿನಕೊಪ್ಪ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮೃತರಾದ ದೇವಕ್ಕ ಬಸವರಾಜು ಮೊರಬದ ಅವರ ನಿವಾಸಕ್ಕೆ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ, ವೈಯಕ್ತಿಕ ಪರಿಹಾರವಾಗಿ 50 ಸಾವಿರ ರೂ. ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.