ಪೊಲೀಸ್ ದೂರು ಪ್ರಾಧಿಕಾರ: ಸ್ಥಾನ ಭರ್ತಿಗೆ 2 ವಾರ ಕಾಲಾವಕಾಶ
Team Udayavani, Jul 25, 2023, 6:21 AM IST
ಬೆಂಗಳೂರು: ಹಲವು ತಿಂಗಳುಗಳಿಂದ ಖಾಲಿ ಉಳಿದಿರುವ ಕರ್ನಾಟಕ ಪೊಲೀಸ್ ಪ್ರಾಧಿಕಾರದ ಅಧ್ಯಕ್ಷ ಮತ್ತು ಇಬ್ಬರ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಎರಡು ವಾರ ಗಡುವು ನೀಡಿರುವ ಹೈಕೋರ್ಟ್, ಒಂದೊಮ್ಮೆ ಈ ಅವಧಿಯಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗಿ ವಿವರಣೆ ನೀಡಬೇಕೆಂದು ತಾಕೀತು ಮಾಡಿದೆ.
ವಕೀಲೆ ಸುಧಾ ಕಾಟ್ವಾ ಸಲ್ಲಿಸಿದ್ದ ಅರ್ಜಿಯು ಮು| ನ್ಯಾ| ಪ್ರಸನ್ನ ಬಿ.ವರಾಲೆ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಸೋಮವಾರ ವಿಚಾರಣೆಗೆ ಬಂದಿತ್ತು. ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕ ಮಾಡಲು ಸರಕಾರದ ಕೋರಿಕೆಯಂತೆ ಕೊನೆಯ ಅವಕಾಶವಾಗಿ ಮೂರು ವಾರಗಳ ಕಾಲಾವಕಾಶ ನೀಡಿ ಹೈಕೋರ್ಟ್ 2023ರ ಜೂ. 21ರಂದು ಆದೇಶಿಸಿತ್ತು. ಸೋಮವಾರ ಅರ್ಜಿ ವಿಚಾರಣೆಗೆ ಬಂದಾಗ ಸರಕಾರದ ಪರ ವಕೀಲರು ವಾದ ಮಂಡಿಸಿ, ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಇನ್ನಷ್ಟು ಕಾಲಾವಕಾಶ ಬೇಕು ಎಂದು ಕೋರಿದರು.
ಅದಕ್ಕೆ ಕಳೆದ ಬಾರಿಯೇ ಕೊನೆಯ ಅವಕಾಶ ನೀಡಲಾಗಿತ್ತು. ಆದರೆ ಸರಕಾರದ ಪರ ವಕೀಲರು ಕೋರಿಕೊಂಡಿರುವ ಹಿನ್ನಲೆಯಲ್ಲಿ ಎರಡು ವಾರ ಕಾಲಾವಕಾಶ ನೀಡಲಾಗುತ್ತಿದೆ ಎಂದು ಹೇಳಿ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.