ಸಮಸ್ಯೆಗಳ ನಡುವೆಯೂ ಸಮಾಜಮುಖಿ ಬಜೆಟ್: ಗೋವಿಂದ ಕಾರಜೋಳ
Team Udayavani, Feb 1, 2021, 8:28 PM IST
ಬೆಂಗಳೂರು: ಕೋವಿಡ್ ಸಂಕಷ್ಟದಲ್ಲೂ ಎಲ್ಲಾ ವರ್ಗಗಳ, ಸಮುದಾಯಗಳ, ವಲಯಗಳ ಅಭಿವೃದ್ಧಿಗಾಗಿ ದೂರದೃಷ್ಠಿಯುಳ್ಳ, ಅತ್ಯುತ್ತಮವಾದ ಹಾಗೂ ಜನಪರವಾದ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಈ ಬಜೆಟ್ ಅನ್ನು ಮುಕ್ತಕಂಠದಿಂದ ಸ್ವಾಗತಿಸುವುದಾಗಿ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.
ಬಡವರ, ಪರಿಶಿಷ್ಟರ, ಕೃಷಿಕರ, ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಒತ್ತು ನೀಡಲಾಗಿದೆ. ಹಲವಾರು ಅಭಿವೃದ್ಧಿ ಕ್ಷೇತ್ರಗಳಿಗೆ ಈ ಬಾರಿಯ ಬಜೆಟ್‍ನಲ್ಲಿ ಹೆಚ್ಚಿನ ಒತ್ತು ಕೊಡಲಾಗಿದೆ. ಎಲ್ಲವುದಕ್ಕಿಂತ ಮುಖ್ಯವಾಗಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನವನ್ನು ಮೀಸಲಿಡಲಾಗಿದೆ. ಕೋವಿಡ್ ಹೆಮ್ಮಾರಿಯನ್ನು ತಡೆಗಟ್ಟಲು ಈ ಬಾರಿಯ ಬಜೆಟ್ ವಿಶೇಷ ಗಮನ ನೀಡಿದೆ. 11,000 ಕಿಮೀ. ಹೆಚ್ಚುವರಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, 650 ಕಿ.ಮೀ. ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಉನ್ನತೀಕರಿಸಲು ಅನುದಾನ ಮೀಸಲಿರಿಸಲಾಗಿದೆ. ವಿದ್ಯಾವಂತ ನಿರುದ್ಯೋಗಗಳಿಗೆ ಉದ್ಯೋಗ ನೀಡುವ ಸದುದ್ದೇಶದಿಂದ 7 ಹೊಸ ಟೆಕ್ಸ್‍ಟೈಲ್ಸ್ ಸ್ಥಾಪನೆ, ಹಾಗೂ ಕೌಶಲ್ಯಾಭಿವೃದ್ಧಿ ಯೋಜನೆಯಡಿ ತರಬೇತಿ ನೀಡಲು 3000 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.
ಶಿಕ್ಷಣಕ್ಕೂ ಆದ್ಯತೆ ನೀಡಲಾಗಿದ್ದು, 15000 ಶಾಲೆಗಳನ್ನು ಮೇಲ್ದರ್ಜೆಗೇರಿಸುವುದು, ಗಿರಿಜನ ಪ್ರದೇಶಗಳಲ್ಲಿ 750 ಏಕಲವ್ಯ ಮಾದರಿ ಶಾಲೆಗಳ ಸ್ಥಾಪನೆ, 100 ಹೊಸ ಸೈನಿಕ ಶಾಲೆಗಳ ಸ್ಥಾಪನೆಯ ಗುರಿ ಹೊಂದಿದ್ದು, ಐತಿಹಾಸಿಕ ವಿಷಯವಾಗಿದೆ ಎಂದರು.
ಕೃಷಿ ಕ್ಷೇತ್ರವನ್ನು ಸಬಲಗೊಳಿಸಲು ಹಾಗೂ ಕೃಷಿ ಉತ್ಪನ್ನಗಳಿಗೆ ಯೋಗ್ಯ ಮಾರುಕಟ್ಟೆ ದೊರಕಿಸುವ ಸಲುವಾಗಿ 1000 ಎ.ಪಿ.ಎಂ.ಸಿ.ಗಳಿಗೆ ಡಿಜಿಟಲ್ ಮಾರ್ಕೆಟಿಂಗ್ ವ್ಯವಸ್ಥೆ ಹಾಗೂ ಬೆಂಬಲ ಬೆಲೆ (ಎಂ.ಎಸ್.ಪಿ.) ಅಡಿ ಸರ್ಕಾರದಿಂದಲೇ ಧಾನ್ಯಗಳ ಖರೀದಿಗೆ ನಿರ್ಧರಿಸಿದೆ. ಅಸಂಘಟಿತ ಕಾರ್ಮಿಕರಿಗೆ ಇ.ಎಸ್.ಐ. ಸೌಲಭ್ಯ, ಕನಿಷ್ಠ ವೇತನ ಕಾಯಿದೆ ಸೌಲಭ್ಯ ಜಾರಿಗೊಳಿಸುವ ಮೂಲಕ ಕಾರ್ಮಿಕ ಹಿತ ಕಾಯಲು ಗುರಿಹೊಂದಲಾಗಿದೆ ಎಂದರು.
ಇದನ್ನೂ ಓದಿ:ಕೇಂದ್ರ ಸರ್ಕಾರದಿಂದ ಜನಪರ ಬಜೆಟ್: ಸಚಿವ ಡಾ. ನಾರಾಯಣಗೌಡ
ಕ್ಷೇತ್ರ ಸಂಪರ್ಕ ವ್ಯವಸ್ಥೆ, ನಗರ ಪ್ರದೇಶಗಳ ಸಾರಿಗೆ ಸಂಪರ್ಕ ಅಭಿವೃದ್ಧಿ ಪಡಿಸಲು ಗಮನ ನೀಡಲಾಗಿದೆ. ಮೆಟ್ರೋ ವಿಸ್ತರಣೆಗೆ ಹೆಚ್ಚು ಒತ್ತು ನೀಡಲಾಗಿದೆ. ಬೆಂಗಳೂರು ನಗರಕ್ಕೆ ಇನ್ನೂ 2 ಮಾರ್ಗಗಳ ಮೆಟ್ರೋ ರೈಲು ಯೋಜನೆಗೆ ಅನುದಾನ ಒದಗಿಸಲಾಗಿದೆ. ಅತಿಮುಖ್ಯವಾಗಿ ಅಭಿವೃದ್ಧಿ ಅಂಶವೆಂದರೆ ವಸತಿ ಸೌಕರ್ಯಗಳ ವಿತರಣೆ, ಕರ್ನಾಟಕವೂ ಸೇರಿದಂತೆ ಈಗ ಕೈಗೊಳ್ಳಲಾಗಿರುವ ವಸತಿ ಕಾರ್ಯಯೋಜನೆಗಳಿಗೆ ಹೆಚ್ಚು ಅನುದಾನ ದೊರಕಲಿದೆ. ತೆರಿಗೆ ವಂಚನೆಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಜಿ.ಎಸ್.ಟಿ. ಯನ್ನು ಬಿಗಿಗೊಳಿಸಿ ಆದಾಯ ಹೆಚ್ಚಳಕ್ಕೆ ಕ್ರಮವಹಿಸಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.