Tulu ಎರಡನೇ ಅಧಿಕೃತ ಭಾಷೆಯ ಸ್ಥಾನ: ಅಧ್ಯಯನ ನಡೆಸಲು ಸಮಿತಿ
Team Udayavani, Feb 29, 2024, 6:20 AM IST
ಬೆಂಗಳೂರು: ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವ ಬಗ್ಗೆ ಈಗಾಗಲೇ ಎರಡು ಭಾಷೆಗಳಿಗೆ ರಾಜ್ಯ ಭಾಷೆಯ ಸ್ಥಾನಮಾನ ನೀಡಿರುವ ಬಿಹಾರ, ಪಶ್ಚಿಮ ಬಂಗಾಲ ಮತ್ತು ಆಂಧ್ರ ಪ್ರದೇಶಕ್ಕೆ ಅಧಿಕಾರಿಗಳ ತಂಡವನ್ನು ಕಳುಹಿಸಿ ವರದಿ ಪಡೆದು ಕಾನೂನು ಇಲಾಖೆಗೆ ಸಲ್ಲಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ವಿಧಾನ ಪರಿಷತ್ ಸದಸ್ಯ ಬಿ. ಎಂ. ಫಾರೂಖ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ತುಳುವಿಗೆ ರಾಜ್ಯದ ಎರಡನೇ ಭಾಷೆಯ ಸ್ಥಾನ ನೀಡುವುದು ನಮ್ಮ ಗಮನದಲ್ಲಿದೆ. ಆದರೆ ನಿಯಮಗಳ ಪಾಲನೆ ಆಗಬೇಕಿದೆ. ಡಾ| ಮೋಹನ್ ಆಳ್ವರ ಸಮಿತಿ ನೀಡಿದ ವರದಿ ನಮ್ಮ ಮುಂದಿದೆ. ಆದರೆ ಕಾನೂನು ಇಲಾಖೆಯು ಅನ್ಯ ರಾಜ್ಯಗಳ ಸ್ಥಿತಿಗತಿಯನ್ನು ತಿಳಿದುಕೊಳ್ಳಲು ಬಯಸಿರುವ ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳಿಗೆ ಸಮಿತಿ ಕಳುಹಿಸಲು ಸರಕಾರ ಮುಂದಾಗಿದೆ ಎಂದು ಸಚಿವರು ತಿಳಿಸಿದರು.
ನಾವು ಈಗಾಗಲೇ ಈ ಮೂರು ರಾಜ್ಯಗಳಿಗೆ ಪತ್ರ ಬರೆದು ದ್ವಿಭಾಷೆ ಅಳವಡಿಕೆ ಬಗ್ಗೆ ಮಾಹಿತಿ ನೀಡುವಂತೆ ಕೇಳಿದ್ದೆವು. ಆದರೆ ಈ ರಾಜ್ಯಗಳಿಂದ ಸಮರ್ಪಕ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ ನಾವೇ ಈಗ ತಂಡ ಕಳುಹಿಸಲು ಮುಂದಾಗಿದ್ದೇವೆ. ನಮ್ಮ ತಂಡ ನೀಡುವ ವರದಿಯನ್ನು ಕಾನೂನು ಇಲಾಖೆಗೆ ಸಲ್ಲಿಸುತ್ತೇವೆ ಎಂದು ಶಿವರಾಜ ತಂಗಡಿ ಭರವಸೆ ನೀಡಿದರು.
ಇದೇ ವೇಳೆ ರಾಜ್ಯ ಸರಕಾರಕ್ಕೆ ಸಂವಿಧಾನದ ಅನುಚ್ಛೇದ 345ರಡಿ ತುಳು ಭಾಷೆಯನ್ನು ಅಧಿಕೃತ ಭಾಷೆಯೆಂದು ಘೋಷಿಸುವ ಅಧಿಕಾರವಿದೆ ಎಂದು ಕಾನೂನು ಇಲಾಖೆ ಸ್ಪಷ್ಟಪಡಿಸಿದೆ. ಆದರೆ ಈ ಬಗ್ಗೆ ಕ್ರಮ ಕೈಗೊಳ್ಳುವ ಮುನ್ನ ಭಾಷೆಗೆ ಸಂಬಂಧಿಸಿ ಸೂಕ್ತ ಅಧ್ಯಯನ ಮಾಡಲು ಸಮಿತಿ ರಚಿಸಬೇಕು ಮತ್ತು ಆ ಸಮಿತಿಯ ವರದಿ ಆಧಾರದಲ್ಲಿ ಹಾಗೂ ವಿವಿಧ ರಾಜ್ಯಗಳಲ್ಲಿ ಎರಡನೇ ಭಾಷೆಯನ್ನು ಅಧಿಕೃತ ಭಾಷೆಯೆಂದು ಘೋಷಿಸಿರುವ ಬಗ್ಗೆ ಅಧ್ಯಯನ ನಡೆಸಿ ವರದಿ ಪಡೆದುಕೊಳ್ಳಬೇಕು ಎಂದು ತಿಳಿಸಿದೆ.
ಬೇರೆ ರಾಜ್ಯದ ಅಭಿಪ್ರಾಯ ಯಾಕೆ?
ವಿಷಯ ಪ್ರಸ್ತಾವಿಸಿದ ಫಾರೂಖ್, ತುಳುವಿಗೆ ಪ್ರಾಚೀನ ಇತಿಹಾಸ, ಲಿಪಿಯಿದೆ. ಲಕ್ಷಾಂತರ ಮಂದಿ ತುಳು ಭಾಷಿಕರಿದ್ದಾರೆ. ಆದ್ದರಿಂದ ಸರಕಾರ ಆದಷ್ಟು ಬೇಗ ತುಳುವನ್ನು ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಅನ್ಯ ರಾಜ್ಯಗಳಿಂದ ಅಭಿಪ್ರಾಯ ಪಡೆಯುವ ಆವಶ್ಯಕತೆ ಏನಿದೆ? ನಮ್ಮಲ್ಲೇ ತುಳು ಬಗ್ಗೆ ಅಧ್ಯಯನ ನಡೆಸಿದವರು, ಇತಿಹಾಸಕಾರರಿದ್ದಾರೆ. ಅವರಿಂದ ಮಾಹಿತಿ ಪಡೆಯಬಹುದಲ್ಲವೇ ಎಂದು ಪ್ರಶ್ನಿಸಿದರು.
ಪ್ರತಾಪಸಿಂಹ ನಾಯಕ್ ಮಾತನಾಡಿ, 20-25 ವರ್ಷಗಳಿಂದ ತುಳುವಿಗೆ ಅಧಿಕೃತ ಸ್ಥಾನಮಾನ ನೀಡುವ ಪ್ರಯತ್ನ ನಡೆಯುತ್ತಿದೆ. ಆದರೆ ಇನ್ನೂ ಸಿಕ್ಕಿಲ್ಲ. ಇದಕ್ಕೆ ಕಾರಣವೇನು ಎಂದು ಸರಕಾರ ತಿಳಿಸಬೇಕು ಎಂದು ಆಗ್ರಹಿಸಿದರು.
ಹರೀಶ್‌ಕುಮಾರ್ ಮಾತನಾಡಿ, ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನ ನಡೆಯಬೇಕು ಎಂದು ಆಗ್ರಹಿಸಿದರು. ಭಾರತಿ ಶೆಟ್ಟಿ ಹಾಗೂ ತೇಜಸ್ವಿನಿ ಅವರು ದನಿ ಗೂಡಿಸಿದರು.
ತುಳುವಲ್ಲೇ ಮಾತನಾಡಿದ ಉಪಸಭಾಪತಿ
ತುಳುವಿನ ಬಗ್ಗೆ ವಿಷಯ ಪ್ರಸ್ತಾವಗೊಂಡಾಗ ಪೀಠದಲ್ಲಿ ಕೂತಿದ್ದ ಸಭಾಪತಿ ಎಂ. ಕೆ. ಪ್ರಾಣೇಶ್, ತುಳುವಲ್ಲೇ ಮಾತನಾಡುವಂತೆ ಸದಸ್ಯರನ್ನು ಪ್ರೋತ್ಸಾಹಿಸಿದರು. ಹರೀಶ್ ಕುಮಾರ್ ಅವರಲ್ಲಿ ನೀವು ತುಳುವಲ್ಲೇ ಮಾತನಾಡಬಹುದು, ಗಮನ ಸೆಳೆಯುವ ಸೂಚನೆ ಆಗಿರುವ ಹಿನ್ನೆಲೆಯಲ್ಲಿ ನಿಯಮಗಳು ಅಡ್ಡಿ ಬರುವುದಿಲ್ಲ ಎಂದು ಹೇಳಿದರು. ಪ್ರತಾಪಸಿಂಹ ನಾಯಕ್, ತುಳುವಲ್ಲೇ ಭಾಷಣ ಆರಂಭಿಸಿದರು. ಅಷ್ಟರಲ್ಲಿ ಸಚಿವ ತಂಗಡಗಿ, ನನಗೆ ಕನ್ನಡ ಬಿಟ್ಟು ಬೇರೆ ಭಾಷೆ ಬರುವುದಿಲ್ಲ, ತುಳು ಅರ್ಥವಾಗುವುದಿಲ್ಲ ಎಂದು ಹೇಳಿದರು. ಆದರೂ ಪ್ರಾಣೇಶ್ ತುಳುವಲ್ಲೇ ಮಾತನಾಡುವಂತೆ ಸದಸ್ಯರನ್ನು ಹುರಿದುಂಬಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.