Power Sharing: ಪಕ್ಷದಲ್ಲಿ ಒಪ್ಪಂದವಾಗಿದೆ ಎಂದಾದ್ರೆ ನಾವೆಲ್ಲ ಯಾಕಿರಬೇಕು?: ಪರಮೇಶ್ವರ್
ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಗೃಹ ಸಚಿವರು ಅಸಮಾಧಾನಗೊಂಡು ಹೇಳಿದ್ದೇನು?
Team Udayavani, Dec 5, 2024, 5:10 PM IST
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿ ಪಕ್ಷದಲ್ಲಿ ಒಪ್ಪಂದವಾಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು? ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಿ ಬಿಡಲಿ. ಬೇರೆಯವರು ಇರುವುದೇ ಬೇಡವಾ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಹಿರಂಗವಾಗಿಯೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಷ್ಟ್ರೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿ ಪಕ್ಷದಲ್ಲಿ ಒಪ್ಪಂದವಾಗಿದ್ದು ನಿಜ ಎಂಬ ಹೇಳಿಕೆಯು ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಗೃಹ ಸಚಿವ ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಯಾವ ಒಪ್ಪಂದ ಆಗಿದೆಯೋ ನಮಗೆ ಗೊತ್ತಿಲ್ಲ. ನಾನು 2-3 ಜನರನ್ನು ದೆಹಲಿಯಲ್ಲಿ ಕೇಳಿದೆ, ಇಲ್ಲೂ ಕೇಳಿದೆ. ಒಪ್ಪಂದ ಆಗಿದೆ ಎಂದು ಯಾರೂ ಹೇಳಿಲ್ಲ. ಡಿ.ಕೆ. ಶಿವಕುಮಾರ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಯಾವುದೇ ಒಪ್ಪಂದ ಆಗಿಲ್ಲ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಆ ರೀತಿ ಆಗಲು ಸಾಧ್ಯವಿಲ್ಲ, ಹೈಕಮಾಂಡ್ ಬಿಟ್ಟು ಹೋಗಲ್ಲ. ಹೈಕಮಾಂಡ್ ತೀರ್ಮಾನ ಒಪ್ಪಿಕೊಳ್ಳುತ್ತೇವೆ ಎಂದು ಪರಮೇಶ್ವರ್ ಹೇಳಿದರು.
ಡಿಕೆಶಿ ಹೇಳಿಕೆಗೆ ಬುಧವಾರ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದರು. ಇದೀಗ ಅಧಿಕಾರ ಹಂಚಿಕೆ ಒಪ್ಪಂದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಪಕ್ಷಗಳಿಗೆ ಉತ್ತರ ಕೊಡಲು ಹಾಸನ ಸಮಾವೇಶ: ಪರಮೇಶ್ವರ್
ಹಾಸನದಲ್ಲಿ ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶ ವಿಚಾರವಾಗಿ ಮಾತನಾಡಿ, ಜನರು ಸ್ವಾಭಿಮಾನಿ ಒಕ್ಕೂಟಗಳ ಮಾಡಿಕೊಂಡಿದ್ದಾರೆ. ಅವರು ನಮ್ಮ ಪಕ್ಷಕ್ಕೆ, ಸರ್ಕಾರದ ಬಗ್ಗೆ ಸಹಾನೂಭೂತಿವುಳ್ಳವರೊಂದಿಗೆ ಪಕ್ಷವೂ ಸೇರಿ ಎಲ್ಲರೂ ಒಟ್ಟಾಗಿ ಸಮಾವೇಶ ಮಾಡುತ್ತಿದ್ದೇವೆ. ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ವಿಚಾರ ಪ್ರಸ್ತಾಪ ಮಾಡಲು ಆಗಲ್ಲ. ಜನರಿಗೆ ಸತ್ಯಾಂಶ ತಿಳಿಸಬೇಕು. ವಿಪಕ್ಷಕ್ಕೆ ರಾಜಕೀಯವಾಗಿ ಉತ್ತರ ಕೊಡಬೇಕು. ರಾಜಕೀಯವಾಗಿ ಉತ್ತರ ಕೊಡಲು ಸಮಾವೇಶ ಮಾಡುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.