ಮಾರುಕಟ್ಟೆಯ ಬೆಲೆಯ ಶೇ.25ರ ದರದಲ್ಲಿ ಹೆಣ್ಣು ಕರುಗಳ ವಿತರಣೆ : ಸಚಿವ ಪ್ರಭು ಚವ್ಹಾಣ್
Team Udayavani, Jul 3, 2021, 5:43 PM IST
ಬೆಂಗಳೂರು: ರಾಜ್ಯದಲ್ಲಿ ದೇಶಿ ತಳಿಗಳ ವಂಶಾವಳಿಯನ್ನು ಹೆಚ್ಚಿಸುವಲ್ಲಿ ಪಶುಸಂಗೋಪನಾ ಇಲಾಖೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಮೃತ ಸಿರಿ ಯೋಜನೆ ಅಡಿಯಲ್ಲಿ ವೀರಗತಿ ಹೊಂದಿದ ಯೋಧರ ಪತ್ನಿಯರಿಗೆ, ದೇವದಾಸಿಯರಿಗೆ, ಶವಸಂಸ್ಕಾರ ಕಾರ್ಮಿಕರಿಗೆ ಹಾಗೂ ವಿಧವೆಯರಿಗೆ ಉತ್ಕೃಷ್ಟ ತಳಿಯ ಕರುಗಳನ್ನು ನೀಡಲು ಇಲಾಖೆಯಿಂದ ಆದೇಶಿಸಲಾಗಿದೆ ಎಂದು ಪಶುಸಂಗೋಪನ ಸಚಿವ ಪ್ರಭು ಚವ್ಹಾಣ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಶುಸಂಗೋಪನಾ ಇಲಾಖೆಯ ತಳಿ ಸಂವರ್ಧನಾ ಕೇಂದ್ರಗಳಲ್ಲಿ ಹುಟ್ಟುವ ಕರುಗಳಲ್ಲಿ ಶೇ 50ರಷ್ಟು ಹೆಣ್ಣು ಕರುಗಳಿದ್ದು ಸಂವರ್ಧನೆಗೆ ಅಗತ್ಯ ಪ್ರಮಾಣದ ಕರುಗಳನ್ನಿಟ್ಟುಕೊಂಡು ಉಳಿದ ಹೆಣ್ಣು ಕರುಗಳನ್ನು ಮಾರುಕಟ್ಟೆ ದರದ ಶೇ 25 ಪ್ರತಿಶತ ದರದಲ್ಲಿ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಸದ್ಯ ಹಳ್ಳಿಕಾರ್, ಅಮೃತ್ ಮಹಲ್, ಮಲೆನಾಡಗಿಡ್ಡ, ಖಿಲಾರಿ, ಕೃಷ್ಣವ್ಯಾಲಿ ತಳಿಗಳನ್ನು ವೀರಗತಿ ಹೊಂದಿದ ಯೋಧರ ಪತ್ನಿಯರಿಗೆ, ದೇವದಾಸಿಯರಿಗೆ, ಶವಸಂಸ್ಕಾರ ಕಾರ್ಮಿಕರಿಗೆ ಹಾಗೂ ವಿಧವೆಯರಿಗೆ ನೀಡಲು ಕ್ರಮವಹಿಸಲಾಗಿದೆ. ದೇಶಿ ತಳಿಗಳ ವಂಶಾಭಿವೃದ್ಧಿ ಹೆಚ್ಚಿಸುವ ಉದ್ದೇಶ ಇದರಿಂದ ಈಡೇರಿದಂತಾಗುವುದಲ್ಲದೆ ಹಸುಗಳನ್ನು ಸಾಕುವುದರಿಂದ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಸಹ ಬದಲಾಗುವುದರಲ್ಲಿ ಯಾವ ಸಂಶಯವಿಲ್ಲ ಎಂದು ಅವರು ಹೇಳಿದ್ದಾರೆ.
ಆಯ್ಕೆ ವಿಧಾನ:
ರಾಜ್ಯದಲ್ಲಿ ಸುಮಾರು 19 ತಳಿ ಸಂವರ್ಧನಾ ಕೇಂದ್ರಗಳಿದ್ದು ಈ ವ್ಯಾಪ್ತಿಯ ಜಿಲ್ಲೆಗಳಲ್ಲಿ 927 ಕ್ಕೂ ಹೆಚ್ಚು ಹೆಣ್ಣು ಕರುಗಳನ್ನು ನೀಡಲಾಗುವುದು. ತಾಲೂಕು ಜಾನುವಾರು ವಿತರಣಾ ಸಮಿತಿಯಿಂದ ಆಯ್ಕೆ ಪ್ರಕ್ರಿಯೆ ನಡೆಯುವುದು ಅದರಲ್ಲಿ ವೀರಗತಿ ಹೊಂದಿದ ಯೋಧರ ಪತ್ನಿಯರಿಗೆ, ದೇವದಾಸಿಯರಿಗೆ, ಶವಸಂಸ್ಕಾರ ಕಾರ್ಮಿಕರಿಗೆ ಹಾಗೂ ವಿಧವೆಯರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿರುವವರಿಗೆ ತಮ್ಮ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಅಮೃತ ಸಿರಿ ಯೋಜನೆ ಸಹಕಾರಿಯಾಗಲಿದ್ದು ದೇಶಿ ತಳಿಗಳ ಸಂಖ್ಯೆ ಸಹ ರಾಜ್ಯದಲ್ಲಿ ವೃದ್ಧಿಯಾಗಲು ಪಶುಸಂಗೋಪನೆ ಇಲಾಖೆಯ ಪ್ರಸ್ತುತ ಕ್ರಮ ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.