ಕುರಿಗಾರರ ಅಭಿವೃದ್ದಿಗೆ ರೂ.350 ಕೋಟಿ ಘೋಷಿಸಿದ ಮುಖ್ಯಮಂತ್ರಿಗೆ ಪ್ರಭು ಚವ್ಹಾಣ್ ಅಭಿನಂದನೆ
Team Udayavani, Oct 30, 2022, 8:18 PM IST
ಬೆಂಗಳೂರು: ಕುರಿಗಾರರು ಆಕಸ್ಮಿಕ, ಅಕಾಲಿಕ ನಿಧನ ಹೊಂದಿದರೆ ವಿಮಾ ಸೌಲಭ್ಯ ಯೋಜನೆಯಡಿ ಕುರಿ ಸಾಕಾಣಿಕೆದಾರರ ಸಮಗ್ರ ಅಭಿವೃದ್ಧಿಗಾಗಿ ಸುಮಾರು 350 ಕೋಟಿ ರೂ.ಗಳ ಮೀಸಲಿಟ್ಟು ಅಮೃತ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ಜಾರಿಗೊಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕುರಿಗಾರರು ಆಕಸ್ಮಿಕ, ಅಕಾಲಿಕ ನಿಧನ ಹೊಂದಿದರೆ ವಿಮಾ ಸೌಲಭ್ಯ ಯೋಜನೆಯಡಿ ಅವರ ಕುಟುಂಬದ ಅವಲಂಬಿತರಿಗೆ ರೂ.5 ಲಕ್ಷ ಪರಿಹಾರ ನೀಡುವ ಯೋಜನೆಯನ್ನು ಜಾರಿಗೆ ತಂದು ಬಿಜೆಪಿ ಹಿಂದುಳಿದ ವರ್ಗದ ಅಭಿವೃದ್ಧಿಯೇ ಗುರಿ ಎನ್ನುವುದನ್ನು ನಿರೂಪಿಸಿದೆ ಎಂದರು.
ಹಿಂದುಳಿದ ಸಮುದಾಯ ಪ್ರತಿನಿಧಿಸುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕುರಿಗಾರರ ಅಭಿವೃದ್ಧಿಗೆ ಸ್ಪಂದಿಸಲಿಲ್ಲ. ನಮ್ಮ ಸರ್ಕಾರ ಕುರಿಗಾರರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಕುರಿಗಳು ಅಕಾಲಿಕ ಸಾವನ್ನಪ್ಪಿದರೆ ಅನುಗ್ರಹ ಯೋಜನೆಯಡಿ ಪ್ರತಿ ಕುರಿಗೆ ರೂ.5 ಸಾವಿರ ಪರಿಹಾರ ನೀಡುತ್ತಿರುವುದು ಸರ್ವ ಜನರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ತಿಳಿಸಿದ್ದಾರೆ.
ಕುರಿ ಸಾಕಾಣಿಕೆದಾರರ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಪ್ರಸಕ್ತ ಸಾಲಿನಿಂದ ಅಮೃತ ಸ್ವಾಭಿಮಾನಿ ಯೋಜನೆಯಡಿ 20+1 ಕುರಿ/ಮೇಕೆ ಘಟಕಗಳನ್ನು ರಾಜ್ಯದಲ್ಲಿನ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ 20000 ಪ್ರತಿ ಫಲಾನುಭವಿಗೆ ರೂ.1.75ಲಕ್ಷ ಆರ್ಥಿಕ ನೆರವು ಒದಗಿಸಲಾಗುತ್ತಿದೆ. ರೈತರಿಗೆ ಇದೊಂದು ಲಾಭದಾಯಕ ಯೋಜನೆಯಾಗಿದೆ. ಗೋಹತ್ಯೆ ನಿಷೇಧದ ನಂತರ ಈ ಯೋಜನೆ ಪ್ರಾಮುಖ್ಯತೆ ಹೆಚ್ಚಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಭು ಚವ್ಹಾಣ್ ಕರೆ ನೀಡಿದ್ದಾರೆ.
ಮೂಕ ಪ್ರಾಣಿಗಳ ಮನದ ಮಾತು ಅರಿತ ಗೋಪ್ರೇಮಿ ಮುಖ್ಯಮಂತ್ರಿ ಬೊಮ್ಮಾಯಿ ಪಶುಸಂಗೋಪನೆ ಇಲಾಖೆಯನ್ನು ಹಿಂದೆಂದು ಕಂಡರಿಯದಂತೆ ಅಭಿವೃದ್ಧಿಪಡಿಸುವಲ್ಲಿ ಶ್ರಮಿಸುತ್ತಿದ್ದಾರೆ ಎನ್ನುವುದನ್ನು ಅವರು ಜಾರಿಗೆ ತಂದಿರುವ ಜನಪರ ಯೋಜನೆಗಳು ತಿಳಿಸುತ್ತವೆ ಎಂದರು.
ಯೋಜನೆಗಳಾದ ಜಿಲ್ಲೆಗೊಂದು ಗೋಶಾಲೆಗಳ ಸಂಖ್ಯೆಯನ್ನು 100ಕ್ಕೆ ಏರಿಕೆ, 100 ಪಶು ಚಿಕಿತ್ಸಾಲಯಗಳು, ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್, ಗೋಮಾತಾ ಸಹಕಾರ ಸಂಘ ಸ್ಥಾಪನೆ, ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ, ಹಾವೇರಿ ಹೈಟೆಕ್ ಮೆಗಾ ಡೈರಿ, ಚರ್ಮಗಂಟು ರೋಗದಿಂದ ಮೃತಪಟ್ಟ ರಾಸುಗಳ ಮಾಲೀಕರುಗಳಿಗೆ ಪರಿಹಾರ ಧನ ವಿತರಣೆ, ಉಚಿತ ಚಿಕಿತ್ಸೆ ಮತ್ತು ಲಸಿಕೆ ನೀಡಿಕೆ, 400 ಪಶು ವೈದ್ಯರು, 250 ಪಶು ವೈದ್ಯ ಸಹಾಯಕರ ನೇಮಕ ಸೇರಿದಂತೆ ಹತ್ತಾರು ಯೋಜನೆಗಳನ್ನು ಜಾರಿಗೆ ತರುವ ಮಾದರಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಪ್ರಭು ಚವ್ಹಾಣ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ಅನುಗ್ರಹ ಕೊಡುಗೆ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ 3ರಿಂದ 6 ತಿಂಗಳ ವಯಸ್ಸಿನ ಕುರಿ, ಮೇಕೆಗಳು ನೀಡುವ ಪರಿಹಾರ ಧನವನ್ನು 2,500 ರಿಂದ 3,500ಕ್ಕೆ ಹೆಚ್ಚಿಸಲಾಗಿದೆ. ಕುರಿಗಾರರಿಗೆ ಮನೆ ನಿರ್ಮಾಣ ಸೇರಿದಂತೆ ಕುರಿಗಾರರಿಗೆ ಅನೇಕ ಸವಲತ್ತುಗಳನ್ನು ನೀಡಿ ಸಬಲರನ್ನಾಗಿಸಿ ಆರ್ಥಿಕ ಮಟ್ಟವನ್ನು ಸುಧಾರಿಸುವ ಮೂಲಕ ರೈತರ ಸಮಸ್ಯೆಗಳನ್ನು ಪಕಿಹಕಿಸಲು ಬಿಜೆಪಿ ಸರ್ಕಾರ ಪಣತೊಟ್ಟು ಅಭಿವೃದ್ಧಿ ಮಾರ್ಗದಲ್ಲಿ ಸಾಗುತ್ತಿದೆ ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.