ಪಶುಸಂಗೋಪನೆಯಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ಕೇಂದ್ರದ ಅನುದಾನಕ್ಕೆ ಮನವಿ: ಪ್ರಭು ಚವ್ಹಾಣ್
Team Udayavani, Jul 20, 2021, 5:48 PM IST
ದೆಹಲಿ : ಕೋವಿಡ್ ನಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೈತರು ಹಾಗೂ ಪಶುಪಾಲಕರು ಮತ್ತು ಜಾನುವಾರು ಸಾಕಣೆದಾರರಿಗೆ ರಾಷ್ಟ್ರೀಯ ಜಾನುವಾರು ಮಿಷನ್ ಅಡಿಯಲ್ಲಿ ಉದ್ಯಮಶೀಲತೆ ಹಾಗೂ ಉದ್ಯೋಗಾವಕಾಶ ಹೆಚ್ಚಿಸಲು ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಈ ಮೂಲಕ ಜಾನುವಾರು ಸಾಕಣೆಯಲ್ಲಿ ತೊಡಗಿದವರಿಗೆ ಉದ್ಯೋಗ ಸೃಷ್ಟಿಸಲು ಪಶುಸಂಗೋಪನೆ ಇಲಾಖೆ ಮುಂದಾಗಿದ್ದು ಈ ಕುರಿತಾಗಿ ಕೇಂದ್ರ ಪಶುಸಂಗೋಪನೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಪಶುಸಂಗೋಪನೆ ಸಚಿವ ಪರಶೋತ್ತಮ್ ರೂಪಾಲ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ಸಚಿವ ಪ್ರಭು ಚವ್ಹಾಣ್ ಕರ್ನಾಟಕದಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಅಡಿಯಲ್ಲಿ ಉದ್ಯೋಗ ಸೃಷ್ಟಿಸಲು ಮನವಿ ಮಾಡಿಕೊಂಡಿದ್ದಾರೆ. ಹೊಸದಾಗಿ ರೂಪಿಸಿರುವ ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಕ್ರಮಕ್ಕೆ ರೂ. 2907 ಕೋಟಿ ನೀಡಲು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ. ಕೋಳಿ, ಕುರಿ, ಮೇಕೆ, ಹಂದಿ ಸಾಕಾಣಿಕೆಯಲ್ಲಿ ತೊಡಗಿಸಿಕೊಳ್ಳಬೇಕೆನ್ನುವವರಿಗೆ ಉತ್ತೇಜನ ನೀಡಲು ಈ ಕಾರ್ಯಕ್ರಮ ಸಹಕಾರಿಯಾಗಲಿದ್ದು ರಾಜ್ಯದಲ್ಲಿ ಉದ್ಯಮಶೀಲತೆ ಹಾಗೂ ಉದ್ಯೋಗಾವಕಾಶ ಹೆಚ್ಚಿಸುವ ಗುರಿ ಇದೆ ಎಂದು ಸಚಿವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರ ದಿಂದ ರಾಜ್ಯಕ್ಕೆ ಬರಬೇಕಾದ ಅನುದಾನದ ಕುರಿತು ಚರ್ಚೆ ನಡೆಸಲಾಗಿದ್ದು ರಾಜ್ಯದ ಪಾಲನ್ನು ಆದಷ್ಟು ಬೇಗ ನೀಡುವುದಾಗಿ ತಿಳಿಸಿದ್ದಾರೆ.
ಸಂಚಾರಿ ಪಶುಚಿಕಿತ್ಸಾ ಅಂಬುಲೆನ್ಸ್ ನೀಡಲು ಮನವಿ
ರಾಜ್ಯದಲ್ಲಿ 29360 ಹಳ್ಳಿಗಳಿದ್ದು 5632 ಹಳ್ಳಿಗಳನ್ನು ಮಾತ್ರ ಅಂಬುಲೆನ್ಸ್ ಸೇವೆ ನೀಡಲು ಸಾಧ್ಯವಾಗುತ್ತಿದೆ. ಸದ್ಯ ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 15 ಜಿಲ್ಲೆಗಳಿಗೆ ಪಶು ಸಂಜೀವಿನಿ ನೀಡಲಾಗಿದ್ದು, ಉಳಿದ ಜಿಲ್ಲೆಗಳಿಗೂ ಸದ್ಯದಲ್ಲೇ ಇದನ್ನು ವಿಸ್ತರಿಲಾಗುವುದು, ಕೊವಿಡ್ ನಿಂದಾಗಿ ಸ್ವಲ್ಪ ವಿಳಂಬವಾಗಿದೆ. ರಾಜ್ಯದ ಎಲ್ಲ ತಾಲೂಕುಗಳಿಂದ ಸಂಚಾರಿ ಪಶಿಶಸ್ತ್ರ ಚಿಕಿತ್ಸಾ ವಾಹನಕ್ಕೆ ಬೇಡಿಕೆ ಇದ್ದು ಈ ಹಿನ್ನೇಲೆಯಲ್ಲಿ ರಾಜ್ಯದ ಉದ್ದಗಲಕ್ಕೂ ರೈತರ, ಪಶುಪಾಲಕರ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಹೆಚ್ಚಿನ ಪಶುಚಿಕಿತ್ಸಾ ವಾಹನಗಳ ಅಗತ್ಯವಿರುವುದರಿಂದ ಈ ಕುರಿತಾಗಿ ರಾಜ್ಯದಲ್ಲಿ ಹೆಚ್ಚು ಚಿಕಿತ್ಸಾ ವಾಹನಗಳನ್ನು ನೀಡಲು ಕೇಂದ್ರದಿಂದ ಅನುದಾನ ನೀಡಬೇಕೆಂದು ಕೋರಿಕೊಳ್ಳಲಾಗಿದೆ.
ಕಾಲುಬಾಯಿ ರೋಗಕ್ಕೆ ನೇರವು
ರಾಷ್ರ್ಟೀ ಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ 2ನೇ ಸುತ್ತಿನ ಲಸಿಕೆ ನೀಡಲು ಕೇಂದ್ರ ಪಶುಸಂಗೋಪನೆ ಮತ್ತು ಡೈರಿ ಸಚಿವರಿಗೆ ಮನವಿ ಮಾಡಲಾಗಿದೆ. ಅಲ್ಲದೇ ರಾಜ್ಯದಲ್ಲಿ ಕಂಡು ಬಂದ ಕಾಲುಬಾಯಿ ರೋಗದ ನಿಯಂತ್ರಣ ಹಾಗೂ ಸ್ಥಿತಿಗತಿ ಕುರಿತು ಕೇಂದ್ರ ಸಚಿವರೊಂದಿಗೆ ವಿಸ್ತಾರವಾಗಿ ಚರ್ಚೆ ನಡೆಸಲಾಗಿದೆ. ಎರಡೇ ಸುತ್ತಿನ ಲಸಿಕೆಯನ್ನು ಆದಷ್ಟು ಬೇಗ ರಾಜ್ಯಕ್ಕೆ ನೀಡುವುದಾಗಿ ಕೇಂದ್ರ ಸಚಿವರು ಹೇಳಿದ್ದಾರೆ
ಗೋಶಾಲೆಗಳಿಗೆ ಅನುದಾನ
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿ ಮಾಡಲಾಗಿದ್ದು ಈ ಮೂಲಕ ರಾಜ್ಯದಲ್ಲಿ ಪ್ರತಿ ವರ್ಷ 2 ಲಕ್ಷ ಜಾನುವಾರುಗಳು ಗೋಶಾಲೆಗಳಿಗೆ ಬರುವ ನಿರೀಕ್ಷೆ ಇದೆ. ಸದ್ಯ ರಾಜ್ಯದಲ್ಲಿ ದಿನ ಒಂದಕ್ಕೆ ರೂ.17 ಪ್ರತಿ ಗೋವಿಗೆ ಪ್ರತಿ ದಿನಕ್ಕೆ ನೀಡಲಾಗುತ್ತಿದೆ ಆದರೆ ಗೋವುಗಳ ನಿರ್ವಹಣೆಗೆ ಹೆಚ್ಚಿನ ಧನ ಸಹಾಯ ಬೇಕೆಂದು ರಾಜ್ಯದ ಎಲ್ಲ ಗೋಶಾಲೆಗಳು ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಗೋವುಗಳಿಗೆ ದಿನ ಒಂದುಕ್ಕೆ ನೀಡುವ ನಿರ್ವಹಣಾ ವೆಚ್ಚವನ್ನು ಹೆಚ್ಚಿಸಲು ಕೋರಿಕೊಳ್ಳಲಾಗಿದೆ. ಇದಕ್ಕೆ ನಿಶೇಷ ಅನುದಾನ ನೀಡಲು ಕೋರಿಕೊಳ್ಳಲಾಗಿದೆ. ಇದರಿಂದಾಗಿ ಗೋವುಗಳ ಆರೈಕೆಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ಸಚಿವರು ಕೇಂದ್ರ ಪಶುಸಂಗೋಪನೆ ಸಚಿವ ಪರಶೋತ್ತಮ್ ರೂಪಾಲ ಅವರಿಗೆ ಮನವರಿಕೆ ಮಾಡಿದ್ದಾರೆ.
ರಾಜ್ಯದ ಜನಪ್ರಿಯು ಯೋಜನೆಗಳಿಗೆ ಕೇಂದ್ರ ಸಚಿವರ ಶ್ಲಾಘನೆ
ಕರ್ನಾಟಕದಲ್ಲಿ ಪಶುಸಂಗೋಪನೆ ಇಲಾಖೆಯಿಂದ ಪರಿಚಯಿಸಲಾದ ನೂತನ ಯೋಜನೆಗಲ್ಲಿ ಪಶು ಸಂಜೀವಿನಿ, ಪ್ರಾಣಿ ಕಲ್ಯಾಣ ಸಹಾಯವಾಣಿ, ಪ್ರಾಣಿ ಕಲ್ಯಾಣ ಮಂಡಳಿ, ಜಿಲ್ಲೆಗೊಂದು ಗೋಶಾಲೆ ಹಾಗೂ ಗೋಹತ್ಯೆ ನೀಷೆಧದಂತಹ ಜನಪ್ರಿಯ ಯೋಜನೆಗಳ ಬಗ್ಗೆ ಕೇಂದ್ರ ಸಚಿವರು ಹರ್ಷ ವ್ಯಕ್ತಪಡಿಸಿದ್ದು ಈ ತರಹದ ಜನಪ್ರಿಯ ಯೋಜನೆಗಳನ್ನು ಬೇರೆ ರಾಜ್ಯದವರು ಸಹ ಅಳವಡಿಸಿಕೊಂಡರೆ ದೇಶದಲ್ಲಿ ಜಾನುವಾರಗಳ ಆರೋಗ್ಯ ಕಾಪಾಡುವಲ್ಲಿ ಹಾಗೂ ಗೋವುಗಳ ಸಂತತಿ ವೃದ್ಧಿಸುವ ನಿಟ್ಟಿನಲ್ಲಿ ಹೆಚ್ಚು ಸಹಕಾರಿಯಾಗಲಿದೆ ಎಂದು ಕೇಂದ್ರ ಸಚಿವರು ಅಭಿಪ್ರಾಯಪಟ್ಟಿದ್ದಾರೆ.
ಆರ್.ಕೆ.ವಿ.ವೈ ಬಗ್ಗೆ ಚರ್ಚೆ
ದೆಹಲಿಯಲಿಯಲ್ಲಿ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಕೃಷಿ ಇಲಾಖೆಯಿಂದ ಪಶು ಪಾಲನಾ ಇಲಾಖೆಗೆ ಒದಗಿಸಬಹುದಾದ ಯೋಜನೆಗಳ ಬಗ್ಗೆ ಸಚಿವ ಪ್ರಭು ಚವ್ಹಾಣ್ ಚರ್ಚೆ ನಡೆಸಿದರು. ಆರ್.ಕೆ.ವಿ.ವೈ ಬಗ್ಗೆ ಚರ್ಚಿಸಲಾಗಿದ್ದು ವಿಸ್ತೃತವಾದ ಯೋಜನೆಯನ್ನು ಇಲಾಖೆಯಿಂದ ಸಲ್ಲಿಸಿ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ದೊಡ್ಡ ಪ್ರಮಾಣದಲ್ಲಿ ಗೊಬ್ಬರ ಉತ್ಪಾದನೆ
ರಾಸಾಯನಿಕ ಮತ್ತು ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ಕೇಂದ್ರದ ರಾಜ್ಯ ಸಚಿವ ಭಗವಂತ ಖೂಬಾ ಅವರನ್ನು ಭೇಟಿ ಮಾಡಿ ಗೋಶಾಲೆಗಳನ್ನು ಆತ್ಮನಿರ್ಭರ ಮಾಡುವ ನಿಟ್ಟಿನಲ್ಲಿ ಈಗಾಗಲೇ ರಾಜ್ಯದಲ್ಲಿ ಸಚಿವ ಪ್ರಭು ಚವ್ಹಾಣ್ ಕಾರ್ಯಪ್ರವೃತ್ತರಾಗಿದ್ದು ಮುಂದಿನ ದಿನಗಳಲ್ಲಿ ಸಗಣಿಯಿಂದ ದೊಡ್ಡ ಪ್ರಮಾಣದಲ್ಲಿ ಗೊಬ್ಬರ ತಯಾರಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ.
ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆ
ಸಾಮಾಜೀಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ ನಾರಾಯಣಸ್ವಾಮಿ ಅವರೊಂದಿಗೆ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದು. ಇಲಾಖೆಯ ಎಲ್ಲ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಗಳಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಸಹಾಯ ನೀಡುವ ಬಗ್ಗೆ ಗಮನಹರಿಸುವುದಾಗಿ ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ : ಫೋನ್ ಕದ್ದಾಲಿಕೆಯನ್ನು ಬಿಜೆಪಿ ಮಾಡುವುದಿಲ್ಲ, ಕಾಂಗ್ರೆಸ್ ಮಾಡುತ್ತದೆ : ಅಶ್ವತ್ಥ್ ನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.