“ಜನೌಷಧಿ ಯೋಜನೆ” ಯಿಂದ ರಾಜ್ಯದ ಜನರಿಗೆ 500 ಕೋಟಿ ರೂ ಲಾಭ: ಸಚಿವ ಡಿ. ವಿ. ಸದಾನಂದ ಗೌಡ


Team Udayavani, Oct 10, 2020, 7:02 PM IST

ಜನೌಷಧಿ ಯೋಜನೆಯಿಂದ ರಾಜ್ಯದ ಜನರಿಗೆ 500 ಕೋಟಿ ರೂ ಲಾಭ: ಸಚಿವ ಡಿ. ವಿ. ಸದಾನಂದ ಗೌಡ

ಬೆಂಗಳೂರು: ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ಪೂರೈಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯಿಂದಾಗಿ (ಪಿಎಂಬಿಜೆಪಿ) ಕರ್ನಾಟಕ ರಾಜ್ಯವೊಂದರಲ್ಲೇ ಜನರಿಗೆ ಈ ವರ್ಷ ಕನಿಷ್ಠವೆಂದರೂ 500 ಕೋಟಿ ರೂಪಾಯಿ ಉಳಿತಾಯವಾಗುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಸದಾನಂದ ಗೌಡ ಅವರು ಹೇಳಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಪಿಎಂಬಿಜೆಪಿ ಯೋಜನೆಯಡಿ ಆರಂಭವಾಗಿರುವ ಜನೌಷಧಿ ಕೇಂದ್ರಗಳ ಕಾರ್ಯನಿರ್ವಹಣೆಯ ಪರಿಶೀಲನಾ ಸಭೆ ನಡೆಸಿದ ಸಚಿವರು ನಂತರ ಮಾಧ್ಯಮ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದರು.

ಆರ್ಥಿಕ ದುರ್ಬಲರಿಗಾಗಿಯೇ ಆರಂಭಿಸಲಾಗಿರುವ ಜನೌಷಧಿಗಳು ದಿನದಿಂದ ದಿನಕ್ಕೆ ಜನಪ್ರಿಯವಾಗುತ್ತಿವೆ. ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜನೌಷಧಿ ಮಾರಾಟ ಶೇಕಡಾ 73ರಷ್ಟು ವೃದ್ಧಿಯಾಗಿದೆ. ರಾಜ್ಯದಲ್ಲಿ 2020-21ರ ಹಣಕಾಸು ವರ್ಷದಲ್ಲಿ ₹125 ಕೋಟಿ ಮೌಲ್ಯದ ಜನೌಷಧಿ ಮಾರಾಟದ ಗುರಿ ಹೊಂದಲಾಗಿದ್ದು ಕಳೆದ ಆರು ತಿಂಗಳಲ್ಲಿ ₹65 ಕೋಟಿ ವಹಿವಾಟು ನಡೆಸಲಾಗಿದೆ. ಕೊರೋನಾದಂತಹ ಸಂಕಷ್ಟದ ಸಮಯದಲ್ಲಿಯೂ ಜನೌಷಧಿ ಕೇಂದ್ರಗಳು ಗುರಿಮೀರಿ ವಹಿವಾಟು ನಡೆಸಿವೆ ಎಂದು ಅವರು ಹೇಳಿದರು.

ಖಾಸಗಿ ಔಷಧ ಅಂಗಡಿಗಳು ಮಾರಾಟ ಮಾಡುವ ಬ್ರಾಂಡೆಡ್‌ ಔಷಧಗಳ ಬೆಲೆಗೆ ಹೋಲಿಸಿದರೆ ನಮ್ಮಲ್ಲಿ ಸಿಗುವ ಅದೇ ಔಷಧಗಳ ಬೆಲೆ ಸರಾಸರಿ ನಾಲ್ಕರಿಂದ ಐದು ಪಟ್ಟು ಕಡಿಮೆ. ಕರ್ನಾಟಕದಲ್ಲಿ ವಾರ್ಷಿಕವಾಗಿ ಮಾರಾಟವಾಗುವ ಜನೌಷಧಿ ಮೌಲ್ಯ ಅಂದಾಜು 125 ಕೋಟಿ ರೂಪಾಯಿ. ನಮ್ಮ ಜನೌಷಧಿ ಅಂಗಡಿಗಳು ಇಲ್ಲವಾಗಿದ್ದರೆ ಜನರು ಸಂಪೂರ್ಣವಾಗಿ ಖಾಸಗಿ ಔಷಧಿ ಅಂಗಡಿಗಳ ಮೇಲೆ ಅವಲಂಬಿತವಾಗಿರಬೇಕಾಗುತ್ತಿತ್ತು. ಇಷ್ಟೇ ಮೌಲ್ಯದ (125 ಕೋಟಿ ರೂ.) ಇದೇ ಔಷಧಗಳನ್ನು ಖಾಸಗಿ ಔಷಧ ಅಂಗಡಿಗಳಲ್ಲಿ ಕೊಂಡುಕೊಳ್ಳಬೇಕಾದರೆ 600ರಿಂದ 700 ಕೋಟಿ ರೂ. ವ್ಯಯಿಸಬೇಕಿತ್ತು. ಹೀಗಾಗಿ ರಾಜ್ಯದ ಜನರಿಗೆ ಜನೌಷಧಿ ಕೇಂದ್ರಗಳಿಂದ ಈ ವರ್ಷ ಏನಿಲ್ಲವೆಂದರೂ 500 ಕೋಟಿ ರೂ. ಉಳಿತಾಯವಾಗುತ್ತಿದೆ. ಜನೌಷಧ ಅಂಗಡಿಗಳಲ್ಲಿ ಔಷಧಗಳ ಬೆಲೆ ಕಡಿಮೆ ಎಂದಾಕ್ಷಣ ಗುಣಮಟ್ಟದಲ್ಲೇನೂ ಕಡಿಮೆಯಿಲ್ಲ. ಅಂತಾರಾಷ್ಟ್ರೀಯ ಮಾನದಂಡಕ್ಕನುಗುಣವಾಗಿ ಅವುಗಳ ಗುಣಮಟ್ಟವನ್ನು ಪರಿಶೀಲಿಸಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಕರ್ನಾಟಕದ ಮೊದಲ ಜನೌಷಧಿ ಕೇಂದ್ರವು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 2015ರ ನವೆಂಬರ್‌ 10ರಂದು ಆರಂಭವಾಗಿತ್ತು. ರಾಜ್ಯದಲ್ಲಿ ಇಂದು 705 ಜನೌಷಧಿ ಕೇಂದ್ರಗಳಿವೆ. ಪ್ರತಿವರ್ಷವೂ ನೂರಕ್ಕಿಂತ ಹೆಚ್ಚು ಹೊಸ ಕೇಂದ್ರಗಳನ್ನು ತೆರೆಯಲಾಗುತ್ತಿದೆ.

ಸರ್ಕಾರಿ ಆಸ್ಪತ್ರೆಗಳಿಗೆ ಸಾಮಾನ್ಯವಾಗಿ ಬಡ ಜನರೇ ಬರುತ್ತಾರೆ. ಅವರಿಗೆ ಕೈಗೆಟಕುವ ದರದಲ್ಲಿ ಔಷಧಗಳು ಸಿಗುವಂತಾಗಬೇಕು. ಹಾಗಾಗಿ ಜಿಲ್ಲಾ, ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಇರುವ ಎಲ್ಲ ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳ ಬಳಿ ಜನೌಷಧಿ ಕೇಂದ್ರಗಳನ್ನು ತೆರೆಯಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಇದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಇಚ್ಛೆಯೂ ಹೌದು. ಪಿಎಂಬಿಜೆಪಿ ಯೋಜನೆಯ ಅನುಷ್ಠಾನಗೊಳಿಸುವ ಸಂಸ್ಥೆ ಬಿಪಿಪಿಐ (BPPI – Bureau of Pharma PSUs of India) ಕರ್ನಾಟಕ ಸರ್ಕಾರದೊಂದಿಗೆ 200 ಜನೌಷಧ ಕೇಂದ್ರಗಳನ್ನು ತೆರೆಯುವ ಬಗ್ಗೆ ಒಡಂಬಡಿಕೆ ಮಾಡಿಕೊಂಡಿದೆ. ಈ ಪೈಕಿ ಎಂ.ಎಸ್.ಐ.ಎಲ್‌. 85, ರೆಡ್ಕ್ರಾಸ್‌ ಸೊಸೈಟಿ ಮತ್ತಿತರರು 33 ಜನೌಷಧಿ ಕೇಂದ್ರಗಳನ್ನು ತೆರೆದಿದ್ದಾರೆ. ಇನ್ನುಳಿದ ಕೇಂದ್ರಗಳನ್ನೂ ತ್ವರಿತವಾಗಿ ಆರಂಭಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.

ರಾಜ್ಯದ ಜನೌಷಧಿ ಕೇಂದ್ರಗಳಲ್ಲಿ ಗುಣಮಟ್ಟದ 825 ಬಗೆಯ ಔಷಧಗಳು 122 ನಮೂನೆ ಸರ್ಜಿಕಲ್ ಸಾಧನಗಳು ಲಭ್ಯವಿವೆ. ಕೇವಲ ಒಂದು ರೂಪಾಯಿಗೆ ‘ಸುವಿಧಾ’ ಹೆಸರಿನಲ್ಲಿ ಸ್ಯಾನಿಟರಿ ಪ್ಯಾಡ್ ಮಾರಾಲಾಗುತ್ತಿದೆ. ಬೇರೆ ಅಂಗಡಿಗಳಲ್ಲಿ ಬ್ರಾಂಡೆಡ್‌ ಸ್ಯಾನಿಟರಿ ಪ್ಯಾಡ್ ಬೆಲೆ ರೂ 4ರಿಂದ 10 ರೂಪಾಯಿವರೆಗೂ ಇದೆ ಎಂದು ಅವರು ತಿಳಿಸಿದರು

ಜನೌಷಧಿ ಪರಿಶೀಲನಾ ಸಭೆಯಲ್ಲಿ ಸಚಿವರು ʼಸುವಿಧಾʼ ಸ್ಯಾನಿಟರಿ ಪ್ಯಾಡ್ನ್ನು ಹೆಚ್ಚೆಚ್ಚು ಜನಪ್ರಿಯಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. ಹಾಗೆಯೇ ರಾಜ್ಯದಲ್ಲಿ ಈಗಿರುವ ಜನೌಷಧಿ ಕೇಂದ್ರಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಬೇಕು, ಜನೌಷಧಿಯ ಲಾಭ ಹೆಚ್ಚೆಚ್ಚು ಜನರಿಗೆ ತಲುಪಿಸಲು ತ್ವರಿತ ಪರಿಣಾಮಕಾರಿ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.

ಟಾಪ್ ನ್ಯೂಸ್

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.