Prahlad Joshi ನ್ಯಾ| ಕುನ್ಹಾ ವಿರುದ್ಧದ ಹೇಳಿಕೆ: ರಾಜ್ಯಪಾಲರಿಗೆ ಕಾಂಗ್ರೆಸ್ ದೂರು
ನ್ಯಾ| ಡಿ'ಕುನ್ಹಾರನ್ನು ಕಾಂಗ್ರೆಸ್ ಏಜೆಂಟ್ ಎಂದಿದ್ದ ಪ್ರಹ್ಲಾದ್ ಜೋಶಿ
Team Udayavani, Nov 12, 2024, 6:10 AM IST
ಬೆಂಗಳೂರು: ಕೋವಿಡ್ ಅವ್ಯವಹಾರ ತನಿಖೆಗೆ ನೇಮಿಸಲಾದ ನ್ಯಾಯಮೂರ್ತಿ ಮೈಕಲ್ ಡಿ’ಕುನ್ಹಾ ಅವರನ್ನು ಕಾಂಗ್ರೆಸ್ ಏಜೆಂಟ್ ಅಂತ ಜರೆದಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಕುನ್ಹಾ ಮಧ್ಯಾಂತರ ವರದಿ ಮೇಲ್ವಿಚಾರಣೆಗೆ ಸಂಬಂಧಿಸಿದ ಸಚಿವ ಸಂಪುಟ ಉಪಸಮಿತಿಯು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.
ಸಚಿವರು ಹಾಗೂ ಸಂಪುಟ ಉಪಸಮಿತಿಯ ಸದಸ್ಯರೂ ಆದ ಕೃಷ್ಣ ಬೈರೇಗೌಡ ಮತ್ತು ದಿನೇಶ್ ಗುಂಡೂರಾವ್ ಸೋಮವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದರು. ನಿವೃತ್ತ ನ್ಯಾಯಮೂರ್ತಿ ಅವರಿಗೆ ವೈಯಕ್ತಿಕ ನಿಂದನೆ ಮಾಡಿದ ಪ್ರಹ್ಲಾದ್ ಜೋಶಿ ಹೇಳಿಕೆ ಕಾನೂನುಬಾಹಿರವಾಗಿದ್ದು, ಕೂಡಲೇ ರಾಷ್ಟ್ರಪತಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಪ್ರಹ್ಲಾದ್ ಜೋಶಿ ತಮ್ಮ ಹೇಳಿಕೆಗೆ ಕ್ಷಮೆ ಕೇಳಬೇಕು. ಇಲ್ಲವಾದರೆ ರಾಜ್ಯಪಾಲರು ತಮ್ಮ ಅಧಿಕಾರ ಚಲಾಯಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
6 ತಿಂಗಳ ಶಿಕ್ಷೆಗೆ ಅವಕಾಶ
ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಮಿಷನ್ ಇನ್ಕ್ವಾರಿ ಆ್ಯಕ್ಟ್ 1952ರ ಪ್ರಕಾರ ಪ್ರಹ್ಲಾದ ಜೋಶಿ ಹೇಳಿಕೆ ಕಾನೂನುಬಾಹಿರವಾಗಿದೆ. ಇದಕ್ಕೆ 6ತಿಂಗಳವರೆಗೆ ಶಿಕ್ಷೆ ವಿಧಿಸಲು ಅವಕಾಶವಿದೆ. ಹೀಗಾಗಿ ಈ ವಿಚಾರವನ್ನು ರಾಷ್ಟ್ರಪತಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. ರಾಜ್ಯಪಾಲರು ನಮ್ಮ ಅಹಾವಾಲುಗಳನ್ನು ತಾಳ್ಮೆಯಿಂದ ಆಲಿಸಿದ್ದು, ಈ ರೀತಿಯ ವೈಯಕ್ತಿಕ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಕೇಂದ್ರ ಸಚಿವರು ಎಂದಾಕ್ಷಣ ಏನು ಬೇಕಾದರು ಮಾತನಾಡಬಹುದು ಎಂಬ ಅಹಂಕಾರ ಪ್ರವೃತ್ತಿಯಲ್ಲಿ ಪ್ರಹ್ಲಾದ ಜೋಶಿ ಮಾತನಾಡಿದ್ದಾರೆ. ಇತ್ತಿಚೆಗೆ ಜೋಶಿ ಹೇಳಿಕೆಗಳು ಅಹಂಕಾರ ದಿಂದ ಕೂಡಿವೆ. ನ್ಯಾಯಮೂರ್ತಿ ಆಗಿದ್ದವರನ್ನು ಕಾಂಗ್ರೆಸ್ ಏಜೆಂಟ್ ಎಂದರೆ ಏನರ್ಥ? ಜೋಶಿ ಅವರು ರಾಜಕಾರಣಿಗಳಾದ ನಮ್ಮ ಮೇಲೆ ಮಾತನಾಡಲಿ ಅಥವಾ ಕಾನೂನು ಹೋರಾಟ ನಡೆಸಲಿ. ಆದರೆ, ಗೌರವಾನ್ವಿತ ನ್ಯಾಯಮೂರ್ತಿಗಳ ವೈಯಕ್ತಿಕ ನಿಂದನೆ ಸರಿಯಲ್ಲ ಎಂದು ತಿಳಿಸಿದರು. ಕೃಷ್ಣ ಬೈರೇಗೌಡ ಮಾತನಾಡಿ, ಜೋಶಿ ಅವರ ಹೇಳಿಕೆ ಅತ್ಯಂತ ಖಂಡನೀಯ. ಕೂಡಲೇ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು, ಕ್ಷಮೆ ಕೇಳುವುದು ಸೂಕ್ತ. ಇಲ್ಲವಾದರೆ, ಈಗಾಗಲೇ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ತೀಕ್ಷ್ಣವಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.